Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಡದೋಣಿ ಮೀನುಗಾರರಿಗೆ 25 ಲಕ್ಷ ಲೀ....

ನಾಡದೋಣಿ ಮೀನುಗಾರರಿಗೆ 25 ಲಕ್ಷ ಲೀ. ಸೀಮೆಎಣ್ಣೆ ಬಿಡುಗಡೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

12 Jan 2023 9:17 PM IST
share
ನಾಡದೋಣಿ ಮೀನುಗಾರರಿಗೆ 25 ಲಕ್ಷ ಲೀ. ಸೀಮೆಎಣ್ಣೆ ಬಿಡುಗಡೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2,500ಕೆಎಲ್ (25 ಲಕ್ಷ ಲೀ.) ಸೀಮೆಎಣ್ಣೆ ಬಿಡುಗಡೆಗೊಳಿಸಿರುವ ಕೇಂದ್ರ ಸರಕಾರ, 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯವನ್ನು ನೀಡಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಶೋಭಾ, ಕುಂದಾಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಕರಾವಳಿ ಪ್ರದೇಶದ ಬಹುಪಾಲು ಜನರ ಜೀವನಾಧಾರ ಮೀನುಗಾರಿಕೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರದ ಪೆಟ್ರೋಲಿಯಂ ಸಚಿವ  ಹರದೀಪ ಸಿಂಗ್ ಪುರಿ ಮನವಿಗೆ ಸ್ಪಂದಿಸಿ ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದರು.

2022-23 ಸಾಲಿನಲ್ಲಿ ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472ಕಿ.ಲೀ. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472 ಕೆ.ಎಲ್ ಮತ್ತು 3000 ಕೆ.ಎಲ್ ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಇದೀಗ ಜ.12ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ ಹೆಚ್ಚುವರಿಯಾಗಿ  2500 ಕೆ.ಎಲ್. ಸೀಮೆಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದವರು ವಿವರಿಸಿದರು.

ಕೇಂದ್ರ ಸರಕಾರ 2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆ ಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆಎಲ್+ 2500 ಕೆಎಲ್) ಸೀಮೆಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದ ಕರಾವಳಿ ಮೀನುಗಾರರು ಕೇಂದ್ರದಿಂದ ಪಡೆದುಕೊಂಡಿದ್ದಾರೆ ಎಂದರು.

ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ನಾಡಿನ ಸಮಸ್ತ ಮೀನುಗಾರರ ಪರವಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ. ಕೇಂದ್ರ ಸರಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವರು ಶೋಭಾ ಮೀನುಗಾರರರಲ್ಲಿ ಮನವಿ ಮಾಡಿದರು.

share
Next Story
X