ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಕಾಸರಗೋಡು: ಶಾಲಾ ಬಸ್ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಮಿಯಪದವಿನ ಸಮೀಪದ ಬಾಳಿಯೂರು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.
ಮೃತಪಟ್ಟವರನ್ನು ಮಿಯಾಪದವು ದರ್ಬೆಯ ಹರೀಶ್ ಎಂಬವರ ಪುತ್ರ ಪ್ರೀತೇಶ್ ಶೆಟ್ಟಿ (20), ಬೆಜ್ಜಂಗಳದ ಸುರೇಶ್ ಎಂಬವರ ಪುತ್ರ ಅಭಿಷೇಕ್ ಎಂ. (20) ಎಂದು ತಿಳಿದುಬಂದಿದೆ. ಇವರಿಬ್ಬರು ಮಂಗಳೂರು ಖಾಸಗಿ ಕಾಲೇಜೊಂದರ ಪದವಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಖಾಸಗಿ ಶಾಲೆಯ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ





Next Story