ಮಂಡ್ಯ ಚುನಾವಣೆಗೆ ಸ್ಪರ್ಧಿಸುವಾಗ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದೆ...: ಸಂಸದೆ ಸುಮಲತಾ ಅಂಬರೀಷ್
ಮಂಡ್ಯ, ಜ.13: 'ನಾನು ಮಂಡ್ಯ ಚುನಾವಣೆಗೆ ಸ್ಪರ್ಧಿಸುವಾಗ ಟಿಕೆಟ್ ಕೊಡಿ ಎಂದು ಕಾಂಗ್ರೆಸ್ ಬಿಟ್ಟು ಬೇರೆ ಯಾವ ಪಕ್ಷವನ್ನೂ ಕೇಳಿರಲಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ನನ್ನ ಮಾತನ್ನ ಕೇಳಿಸಿಕೊಳ್ಳೋಕೆ ಸಿದ್ಧರಿರಲಿಲ್ಲ' ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಳೆದ ಲೋಕ ಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತನಾಡಿಸಿದ್ದೆ. ಆದರೆ ಅವರು ನನ್ನ ಕೈಯಲ್ಲಿ ಏನೂ ಇಲ್ಲ ಎಂದು ಹೇಳಿದ್ದರು. ಕಾಂಗ್ರೆಸ್ನವರು ಟಿಕೆಟ್ ಕೊಡಲು ಆಗಲ್ಲ ಎಂದಿದ್ದಕ್ಕೆ ನಾನು ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತೆ'' ಎಂದು ಹೇಳಿದರು.
'ಸುಮಲತಾ ಅವರು ಬಿಜೆಪಿ ಅಸೋಸಿಯೇಟ್' ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಜೊತೆ ಅಜೆಸ್ಟ್ಮೆಂಟ್ ಪಾಲಿಟಿಕ್ಸ್ ಮಾಡುವ ಮೂಲಕ ಡಿ ಕೆ ಶಿವಕುಮಾರ್ ನನ್ನನ್ನು ದೂರುತ್ತಿದ್ದಾರೆ' ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ