ಭಟ್ಕಳ: ರೈಲು ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ

ಭಟ್ಕಳ: ಭಟ್ಕಳ ರೈಲು ನಿಲ್ದಾಣದ ಬಳಿಯ ಚರಂಡಿಯ ಪಕ್ಕದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಹರಿಯಾಣ ಮೂಲದ ಬಾಲ ಚಂದ್ರಾನಂದ್ (58) ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ವ್ಯಕ್ತಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
Next Story





