Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಪೊಲೀಸರು ದ್ವೇಷ ಭಾಷಣದ...

ದಿಲ್ಲಿ ಪೊಲೀಸರು ದ್ವೇಷ ಭಾಷಣದ ವಿಚಾರಣೆಯಲ್ಲಿ ಹೇಳಿಕೊಳ್ಳುವಂತಹ ಪ್ರಗತಿಯನ್ನು ಮಾಡಿಲ್ಲ: ಸುಪ್ರೀಂ ಕೋರ್ಟ್

​2021ರ ಹಿಂದುತ್ವ ಕಾರ್ಯಕ್ರಮ

13 Jan 2023 4:52 PM IST
share
ದಿಲ್ಲಿ ಪೊಲೀಸರು ದ್ವೇಷ ಭಾಷಣದ ವಿಚಾರಣೆಯಲ್ಲಿ ಹೇಳಿಕೊಳ್ಳುವಂತಹ ಪ್ರಗತಿಯನ್ನು ಮಾಡಿಲ್ಲ: ಸುಪ್ರೀಂ ಕೋರ್ಟ್
​2021ರ ಹಿಂದುತ್ವ ಕಾರ್ಯಕ್ರಮ

ಹೊಸದಿಲ್ಲಿ: ಹಿಂದು ಯುವ ವಾಹಿನಿಯು ದಿಲ್ಲಿಯಲ್ಲಿ 2021, ಡಿ.19ರಂದು ಆಯೋಜಿಸಿದ್ದ ಹಿಂದುತ್ವ ಕಾರ್ಯಕ್ರಮದಲ್ಲಿ ಮಾಡಲಾಗಿದ್ದ ದ್ವೇಷ ಭಾಷಣ (hate speech) ಕುರಿತು ತನಿಖೆಯಲ್ಲಿ ದಿಲ್ಲಿ ಪೊಲೀಸರು (Delhi Police) ಹೇಳಿಕೊಳ್ಳುವಂತಹ ಪ್ರಗತಿಯನ್ನು ಸಾಧಿಸಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಬೆಟ್ಟು ಮಾಡಿದೆ.

ಕಾರ್ಯಕ್ರಮದಲ್ಲಿ ಸುದರ್ಶನ ನ್ಯೂಸ್ ಟಿವಿ ಚಾನೆಲ್‌ನ ಮುಖ್ಯ ಸಂಪಾದಕ ಸುರೇಶ್ ಚಾವಂಕೆಯವರು ಭಾರತವನ್ನು ‘ಹಿಂದು ರಾಷ್ಟ್ರ’ವನ್ನಾಗಿ ಮಾಡಲು ‘ಪ್ರಾಣತ್ಯಾಗ ಅಥವಾ ಹತ್ಯೆ’ಗಾಗಿ ಜನರ ಗುಂಪೊಂದಕ್ಕೆ ಶಪಥವನ್ನು ಬೋಧಿಸಿದ್ದರು. ಸುಮಾರು ಐದು ತಿಂಗಳುಗಳ ಬಳಿಕ 2022 ಮೇ 4ರಂದು ಈ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು.

ಸಾಮಾಜಿಕ ಕಾರ್ಯಕರ್ತ ತುಷಾರ ಗಾಂಧಿಯವರು ದ್ವೇಷ ಭಾಷಣ ಮತ್ತು ಹತ್ಯೆಗಳಿಗೆ ಕಡಿವಾಣ ಹಾಕಲು ನಿಗದಿಗೊಳಿಸಲಾಗಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕ್ರಮಗಳನ್ನು ಕೈಗೊಳ್ಳದ್ದಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಪಿ.ಎಸ್.ನರಸಿಂಹ ಅವರ ಪೀಠವು ಶುಕ್ರವಾರ ಕೈಗೆತ್ತಿಕೊಂಡಿತ್ತು.

ಅವರು (ಪೊಲೀಸರು) ಯಾರನ್ನೂ ಬಂಧಿಸಿಲ್ಲ, ದೋಷಾರೋಪ ಪಟ್ಟಿಯನ್ನು ಸಲ್ಲಿಸಿಲ್ಲ ಎಂದು ಗಾಂಧಿ ಪರ ವಕೀಲ ಶಾದಾನ್ ಫರಾಸತ್ ಅವರು ಪೀಠಕ್ಕೆ ತಿಳಿಸಿದರು.

ಎಫ್‌ಐಆರ್ ದಾಖಲಾತಿಯಲ್ಲಿ ವಿಳಂಬದ ಕುರಿತು ದಿಲ್ಲಿ ಪೊಲೀಸರ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರನ್ನು ಪ್ರಶ್ನಿಸಿದ ಮು.ನ್ಯಾ.ಚಂದ್ರಚೂಡ್, ‘ಮೇ 4ರ ಬಳಿಕ ಎಂಟು ತಿಂಗಳುಗಳು ಕಳೆದಿವೆ. ನೀವು ಯಾವ ಪ್ರಗತಿಯನ್ನು ಮಾಡಿದ್ದೀರಿ? ಐದು ತಿಂಗಳುಗಳ ಬಳಿಕ ನೀವು ಎಫ್‌ಐಆರ್ ದಾಖಲಿಸಿಕೊಂಡಿದ್ದೀರಿ ಮತ್ತು ಅದರ ಬಳಿಕ ಎಂಟು ತಿಂಗಳುಗಳು ಕಳೆದರೂ ಯಾವುದೇ ಗಣನೀಯ ಪ್ರಗತಿಯಾಗಿಲ್ಲ. ಈ ಬಗ್ಗೆ ನೀವು ನಮಗೆ ಹೇಳಬೇಕು ’ ಎಂದರು.

ವಿಷಯವು ತುಂಬ ಗಂಭೀರವಾಗಿದೆ ಎಂದು ಹೇಳಿದ ಫರಾಸತ್, ಕಾರ್ಯಕ್ರಮದಲ್ಲಿ ಮಾಡಲಾಗಿದ್ದ ಭಾಷಣದ ಲಿಪ್ಯಂತರವನ್ನು ಓದುವಂತೆ ಸರ್ವೋಚ್ಚ ನ್ಯಾಯಾಲಯವನ್ನು ಆಗ್ರಹಿಸಿದರು.

ತನಿಖೆಯಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ವಿವರಿಸಿ ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಪ್ರಕರಣದ ತನಿಖಾಧಿಕಾರಿಗಳಿಗೆ ಆದೇಶಿಸಿತು.
ಗಮನಾರ್ಹವಾಗಿ,ಕಳೆದ ವರ್ಷದ ಎ.14ರಂದು ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ದಿಲ್ಲಿ ಪೊಲೀಸರು,ಹಿಂದು ಯುವ ವಾಹಿನಿಯ ಕಾರ್ಯಕ್ರಮದಲ್ಲಿ ಮುಸ್ಲಿಮ್ ವಿರೋಧಿ ದ್ವೇಷ ಭಾಷಣವನ್ನು ಮಾಡಲಾಗಿರಲಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೂ ನ್ಯಾಯಾಲಯವು ‘ಉತ್ತಮ ಅಫಿಡವಿಟ್’ ಸಲ್ಲಿಸುವಂತೆ ದಿಲ್ಲಿ ಪೊಲೀಸರಿಗೆ ಆದೇಶಿಸಿತ್ತು.

2021,ಡಿ.17ರಿಂದ 19ರವರೆಗೆ ಹರಿದ್ವಾರದಲ್ಲಿ ‘ಧರ್ಮ ಸಂಸದ್’ ಕೂಡ ನಡೆದಿದ್ದು, ಅದರಲ್ಲಿ ಭಾಗಿಯಾಗಿದ್ದ ಹಲವಾರು ಹಿಂದುತ್ವ ಗುಂಪುಗಳ ಸದಸ್ಯರು ಮತ್ತು ಸಂತರು ಮುಸ್ಲಿಮರ ವಿರುದ್ಧ ಹಿಂಸೆಗೆ ಕರೆ ನೀಡಿದ್ದರು.

share
Next Story
X