ಜ.14ರಂದು ನಾಸಿಹ್ ಶಾಲೆಯ ವಾರ್ಷಿಕ ಕ್ರೀಡಾಕೂಟ

ಬೆಂಗಳೂರು, ಜ. 13: ನಾಸಿಹ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟವು ಜ.14ರ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯ ವರೆಗೆ ನಗರದ ಲಿಂಗರಾಜಪುರಂನ ಚಾರ್ಲ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಮುಹಮ್ಮದ್ ಸನಾವುಲ್ಲಾ, ಶಾಲೆಯ ಮುಖ್ಯಸ್ಥರು ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶಾಲೆಯ ಅಧಿಕೃತ ಪ್ರಕಟನೆ ತಿಳಿಸಿದೆ.
Next Story





