ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಸಭೆ
ಬೆಂಗಳೂರು, ಜ.13: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ನೇತೃತ್ವದಲ್ಲಿ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತು ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಅಲ್ಪಸಂಖ್ಯಾತ ನಾಯಕರ ಸಭೆ ನಡೆಯಿತು.
ಈ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಮುಖ್ಯಸ್ಥ ಡಾ.ಕೆ.ರಹ್ಮಾನ್ ಖಾನ್, ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ಮಾಜಿ ಸಚಿವರಾದ ನಸೀರ್ ಅಹ್ಮದ್, ತನ್ವೀರ್ ಸೇಠ್, ಝಮೀರ್ ಅಹ್ಮದ್ ಖಾನ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ರಹೀಮ್ ಖಾನ್, ರಿಝ್ವಾನ್ ಅರ್ಶದ್, ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೋಝ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story