ವ್ಯಾಪಂ ಹಗರಣ ಬಯಲಿಗೆಳೆದಿದ್ದ ಆನಂದ್ ರಾಯ್ ಗೆ ಜಾಮೀನು
ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ
ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ
ಹೊಸದಿಲ್ಲಿ,ಜ.13: ಮಧ್ಯಪ್ರದೇಶದ ವ್ಯಾಪಂ ಹಗರಣವನ್ನು ಬಯಲಿಗೆಳೆದಿದ್ದ ವೈದ್ಯ ಆನಂದ ರಾಯ್ ಅವರಿಗೆ ಎಸ್ಸಿ/ಎಸ್ಟಿ ಕಾಯ್ದೆಗೆ ಸಂಬಂಧಿಸಿ ಪ್ರಕರಣದಲ್ಲಿ ಶುಕ್ರವಾರ ಸರ್ವೋಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಧರಣಿಯೊಂದರ ಸಂದರ್ಭದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 2022,ನ.22ರಂದು ಅವರನ್ನು ಬಂಧಿಸಲಾಗಿತ್ತು. ವಿಚಾರಣಾ ನ್ಯಾಯಾಲಯವು 2022,ನ.17ರಂದು ಅವರಿಗೆ ಜಾಮೀನು ನಿರಾಕರಿಸಿತ್ತು.
ಮಧ್ಯಪ್ರದೇಶ ಉಚ್ಚ ನ್ಯಾಯಾಲಯವೂ 2022,ಡಿ.12ರಂದು ರಾಯ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ಪೀಠವು ರಾಯ್ ಅವರಿಗೆ ಜಾಮೀನು ಮಂಜೂರು ಮಾಡಿತು.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ನಿವಾಸಿ ವಿಕಾಸ ಪರ್ಗಿ ಎನ್ನುವವರು 2022,ನ.15ರಂದು ರಾಯ್ ವಿರುದ್ಧ ಐಪಿಸಿ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ವಿವಿಧ ಕಲಮ್ಗಳಡಿ ಎಫ್ಐಆರ್ ದಾಖಲಿಸಿದ್ದರು.
Next Story





