Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಪುರುಷರ ಅಖಿಲ ಭಾರತ ಅಂತರ...

ಉಪ್ಪಿನಂಗಡಿ: ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

14 Jan 2023 12:21 AM IST
share
ಉಪ್ಪಿನಂಗಡಿ: ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಉಪ್ಪಿನಂಗಡಿ: ಮಂಗಳೂರು ವಿವಿಯು ಐದು ದಿನಗಳ ಕಾಲ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಜ.13ರಂದು ಸಂಜೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅದ್ದೂರಿಯ ಚಾಲನೆ ದೊರಕಿದೆ.

ರಾಷ್ಟ್ರ ಧ್ವಜದ ಬಣ್ಣವನ್ನು ಸಂಕೇತಿಸುವ ಬಲೂನುಗಳನ್ನು ಗಗನದೆತ್ತರಕ್ಕೆ ಹಾರಿಬಿಡುವ ಮೂಲಕ ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಮಠಂದೂರು ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಅದರೊಂದಿಗೆ ನೂರಾರು ಬಣ್ಣಬಣ್ಣದ ಬಲೂನುಗಳನ್ನು ಹಾರಿಬಿಡಲಾಯಿತು. ಬಳಿಕ ಮಾತನಾಡಿದ ಅವರು, ಬಾಲ್ ಬ್ಯಾಡ್ಮಿಂಟನ್ ಆಟವು ಭಾರತದ ಗ್ರಾಮೀಣ ಕ್ರೀಡೆಯಾಗಿದ್ದು, ಇದು ತಮಿಳುನಾಡಿನ ತಂಜಾವೂರಿನ ಶ್ರೀಮಂತ ಮನೆತನದವರಿಂದ ಈ ಕ್ರೀಡೆ ಹುಟ್ಟಿಕೊಂಡಿತು. ದೇಶದ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿದೆ. ಗ್ರಾಮೀಣ ಭಾಗದಲ್ಲಿ ಈ ಕ್ರೀಡೆಯಿಂದ ಆಯೋಜನೆಗೊಂಡಿರುವ ನಮ್ಮೂರಿಗೆ ಹೆಮ್ಮೆಯ ವಿಷಯವಾಗಿದ್ದು, ಕ್ರೀಡಾಳುಗಳು ಕ್ರೀಡಾ ಸ್ಫೂರ್ತಿಯಿಂದ ಆಡಬೇಕು ಹಾಗೂ ತೆರೆದ ಹೃದಯದಿಂದ ತೀರ್ಪನ್ನು ಸ್ವೀಕರಿಸುವ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿವಿಯ ರಿಜಿಸ್ಟ್ರಾರ್ ಡಾ. ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ, ಬೋಧನೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಂಗಳೂರು ವಿವಿಯು ಉತ್ತಮವಾಗಿ ತೊಡಗಿಸಿಕೊಂಡಿದ್ದು, ಕ್ರೀಡಾಳುಗಳಿಗೆ ಉತ್ತಮ ಪ್ರೋತ್ಸಾಹ, ಸಹಕಾರ ಹಾಗೂ ಮೂಲ ಸೌಕರ್ಯ ನೀಡುವಲ್ಲಿ ರಾಜ್ಯದಲ್ಲೇ ಮುಂದಿದೆ ಎಂದರಲ್ಲದೆ, ಈ ಪಂದ್ಯಾಟದಿಂದ ಇನ್ನಷ್ಟು ಸಾಧಕರು ಸೃಷ್ಟಿಯಾಗಬೇಕು ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಬಾಲ್ ಬ್ಯಾಡ್ಮಿಂಟನ್‍ನಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಮುಹಮ್ಮದ್ ಇಲ್ಯಾಸ್, ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ ಉಪಸ್ಥಿತರಿದ್ದರು.

ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಿಕ್ವೇರಾ ಸ್ವಾಗತಿಸಿದರು. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಸುಬ್ಬಪ್ಪ ಕೈಕಂಬ ವಂದಿಸಿದರು. ರಾಷ್ಟ್ರ ಮಟ್ಟದ ಕ್ರೀಡಾ ಸಾಧಕ  ಮುತ್ತುಮಿಲ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಆಳ್ವಾಸ್ ಕಾಲೇಜಿನ ರಾಜೇಶ್ ಹಾಗೂ ಇಂಡಿಯನ್ ಓವರ್‍ಸೀಸ್ ಬ್ಯಾಂಕ್‍ನ ಮುತ್ತು ಕಾರ್ಯಕ್ರಮ ನಿರೂಪಿಸಿದರು.

ಒಟ್ಟು 89 ತಂಡಗಳು ನೋಂದಾವಣೆ ಮಾಡಿಕೊಂಡಿದ್ದು, ಜ.14ರಂದು ಬೆಳಗ್ಗೆ 7:30ರಿಂದ ಆರು ಅಂಕಣಗಳಲ್ಲಿ ಪಂದ್ಯಾಟಗಳು ಆರಂಭಗೊಳ್ಳಲಿವೆ.

ಆಕರ್ಷಕ ಕ್ರೀಡಾ ಜ್ಯೋತಿ ಮೆರವಣಿಗೆ: ಉಪ್ಪಿನಂಗಡಿ ಕಾಲೇಜಿನ ಹಿರಿಯ ಕ್ರೀಡಾಪಟುಗಳಾದ ಮುಹಮ್ಮದ್ ರಫೀಕ್ ಹಾಗೂ ಸಂದೇಶ್ ಅವರ ತಂಡ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಿಂದ ಕ್ರೀಡಾ ಜ್ಯೋತಿಯನ್ನು ಆಕರ್ಷಕ ಮೆರವಣಿಗೆಯ ಮೂಲಕ ಕಾಲೇಜು ಕ್ರೀಡಾಂಗಣಕ್ಕೆ ತಂದರು. ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಾಗಿ ಕಾಲೇಜು ಮೈದಾನಕ್ಕೆ ಆಗಮಿಸಿದ ಮೆರವಣಿಗೆಯೊಂದಿಗೆ ನೂರಾರು ವಿದ್ಯಾರ್ಥಿಗಳು, ಸ್ಕೌಟ್ಸ್ ವಿದ್ಯಾರ್ಥಿಗಳು ಕ್ರೀಡಾಭಿಮಾನಿಗಳು ಹೆಜ್ಜೆಹಾಕಿದರು. ಇದರೊಂದಿಗೆ ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಹುಲಿ ಕುಣಿತ, ಕೇರಳ ಚೆಂಡೆ, ನಾಸಿಕ್ ಬ್ಯಾಂಡ್, ಡೊಳ್ಳು ಕುಣಿತ, ಕೀಲು ಕುದುರೆ, ತಟ್ಟಿರಾಯ, ಗೊಂಬೆ ಕುಣಿತವು ಮೆರವಣಿಗೆಗೆ ಹೊಸ ಮೆರುಗನ್ನು ತಂದು ಕೊಟ್ಟವು. ಬಳಿಕ ಮೈದಾನದಲ್ಲಿ ಕ್ರೀಡಾಳುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಾಸಕ ಸಂಜೀವ ಮಠಂದೂರು ಗೌರವ ವಂದನೆ ಸ್ವೀಕರಿಸಿದರು.

share
Next Story
X