Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾವೂರು ಜಾತ್ರೆಯಲ್ಲಿ ಹಿಂದೂಗಳಿಗಷ್ಟೇ...

ಕಾವೂರು ಜಾತ್ರೆಯಲ್ಲಿ ಹಿಂದೂಗಳಿಗಷ್ಟೇ ವ್ಯಾಪಾರಕ್ಕೆ ಅವಕಾಶ ಬ್ಯಾನರ್ ಪ್ರತ್ಯಕ್ಷ: ತೆರವಿಗೆ ಸಿಪಿಎಂ, ಡಿವೈಎಫ್ಐ ಆಗ್ರಹ

ತೆರವುಗೊಳಿಸುವಲ್ಲಿ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸ್ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ಮನವಿ

14 Jan 2023 10:17 AM IST
share
ಕಾವೂರು ಜಾತ್ರೆಯಲ್ಲಿ ಹಿಂದೂಗಳಿಗಷ್ಟೇ ವ್ಯಾಪಾರಕ್ಕೆ ಅವಕಾಶ ಬ್ಯಾನರ್ ಪ್ರತ್ಯಕ್ಷ: ತೆರವಿಗೆ ಸಿಪಿಎಂ, ಡಿವೈಎಫ್ಐ ಆಗ್ರಹ
ತೆರವುಗೊಳಿಸುವಲ್ಲಿ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸ್ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ಮನವಿ

ಮಂಗಳೂರು, ಜ.14: ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ಸಂಘ ಪರಿವಾರದ ಹೆಸರಿನಲ್ಲಿ ಹಾಕಿರುವ ಬ್ಯಾನರ್ ತೆರವುಗೊಳಿಸುವಂತೆ ಒತ್ತಾಯಿಸಿ ಹಾಗೂ ಈ ವಿಚಾರವಾಗಿ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಪಿಎಂ ಮಂಗಳೂರು ಉತ್ತರ ಸಮಿತಿ ಮತ್ತು ಡಿವೈಎಫ್ಐ ಮಂಗಳೂರು ನಗರ ಸಮಿತಿಯು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಕಾವೂರು ಜಾತ್ರೆ ಇಂದಿನಿಂದ ಆರಂಭಗೊಳ್ಳಲಿದೆ. ಈ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ. ಆದರೆ ಜ.10ರಂದು 'ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ' ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ, ಎಸಿಪಿಯವರ ಗಮನಕ್ಕೆ ತಂದ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಆದರೆ ಶುಕ್ರವಾರ ಮತ್ತೆ ಇದೇರೀತಿ 'ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು 'ಹರಾಂ' ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ' ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ  ಬ್ಯಾನರ್ ಅಳವಡಿಸಲಾಗದೆ ಎಂದು ಮನವಿಯಲ್ಲಿ ದೂರಲಾಗಿದೆ.

ಪೊಲೀಸರಿಂದ ಬೇಜವಾಬ್ದಾರಿಯುತ ವರ್ತನೆ: ಆರೋಪ

ಮತ್ತೆ ಬ್ಯಾನರ್ ಅಳವಡಿಸಿರುವ ಬಗ್ಗೆ ಪೊಲೀಸರ ಗಮನಕ್ಕೆ ತಂದಾಗ, "ಅದು ದೇವಸ್ಥಾನ ಆಡಳಿತ ಸಮಿತಿಯ ತೀರ್ಮಾನ" ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ಹೇಳಿದ್ದಾರೆ. 'ಬ್ಯಾನರ್ ನಲ್ಲಿ ಎಲ್ಲೂ ಆಡಳಿತ ಸಮಿತಿಯ ಹೆಸರಿಲ್ಲ, ಬದಲಾಗಿ ಬಜರಂಗ ದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳ ಹೆಸರು ಮಾತ್ರ ಇದೆ. ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುತ್ತೇವೆ' ಎಂದಾಗ, 'ಪ್ರತಿಭಟನೆ ಮಾಡಿ, ತೊಂದರೆ ಇಲ್ಲ' ಎಂದು ಅದೇ ಪೊಲೀಸ್ ಸಿಬ್ಬಂದಿ ಉಡಾಫೆಯಿಂದ ಪ್ರತಿಕ್ರಿಯಿಸಿದ್ದಾಗಿ ಆರೋಪಿಸಲಾಗಿದೆ.

ಆದ್ದರಿಂದ ಜನಾಂಗೀಯ ನಿಂದನೆ ಈ ಬ್ಯಾನರ್ ಅನ್ನು ಕೂಡಲೇ ತೆರವುಗೊಳಿಸಬೇಕು, ಕಾನೂನುಬಾಹಿರ, ಕೋಮುದ್ವೇಷ, ಜನಾಂಗೀಯ ಹಿಂಸೆ, ಕೋಮುವಾದದ ಕೃತ್ಯದ ಬಗ್ಗೆ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.  

share
Next Story
X