Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್ಥಿಕ ಸ್ಥಿತಿಯಲ್ಲಿ 2047ಕ್ಕೆ ದೇಶ...

ಆರ್ಥಿಕ ಸ್ಥಿತಿಯಲ್ಲಿ 2047ಕ್ಕೆ ದೇಶ ವಿಶ್ವದಲ್ಲಿಯೇ ಮೊದಲು: ರಕ್ಷಣಾ ಸಚಿವ ರಾಜನಾಥ್ ಸಿಂಗ್

15 Jan 2023 7:44 PM IST
share
ಆರ್ಥಿಕ ಸ್ಥಿತಿಯಲ್ಲಿ 2047ಕ್ಕೆ ದೇಶ ವಿಶ್ವದಲ್ಲಿಯೇ ಮೊದಲು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು, ಜ. 15: ಭಾರತದ ಬೆಳವಣಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ವೃದ್ದಿಸುತ್ತಿದೆ. 2027ಕ್ಕೆ ನಮ್ಮ ದೇಶ ಆರ್ಥಿಕ ಸ್ಥಿತಿಯಲ್ಲಿ ವಿಶ್ವದಲ್ಲಿ 3ನೆ ಸ್ಥಾನಕ್ಕೆ ಬರಲಿದ್ದು, 2047ಕ್ಕೆ ವಿಶ್ವದಲ್ಲಿಯೇ ಮೊದಲ ಸ್ಥಾನ ಗಳಿಸುವುದು ಖಚಿತ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಎಎಸ್‍ಸಿ ಸೆಂಟರ್ (ದಕ್ಷಿಣ)ನಲ್ಲಿ ಆಯೋಜಿಸಲಾದ 75ನೆ ಸೇನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, 1949ರ ಜನವರಿ 15ರಂದು, ಭಾರತೀಯ ಸೇನೆಯ ಆಜ್ಞೆಯು ಬ್ರಿಟಿಷ್ ಜನರಲ್ ಫ್ರಾನ್ಸಿಸ್ ಬುತ್ಚೆರ್ ಅವರಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕರಿಯಪ್ಪ ಅವರ ಕೈಗೆ ಬಂದಿತು. ಇದರೊಂದಿಗೆ, ಬ್ರಿಟಿಷ್ ಪದವನ್ನು ಬ್ರಿಟಿಷ್ ಭಾರತೀಯ ಸೇನೆಯಿಂದ ಶಾಶ್ವತವಾಗಿ ತೆಗೆದುಹಾಕಲಾಯಿತು ಮತ್ತು ಅದನ್ನು ಭಾರತೀಯ ಸೇನೆ ಎಂದು ಕರೆಯಲಾಯಿತು ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕರಿಯಪ್ಪ ಅವರು ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮುಖ್ಯಸ್ಥರಾದರು. ಅಂದಿನಿಂದ, ಪ್ರತಿವರ್ಷ ಜನವರಿ 15ರಂದು ಸೇನಾ ದಿನವೆಂದು ಆಚರಿಸಲಾಗುತ್ತದೆ. ಭಾರತೀಯ ಸೇನೆಯನ್ನು ಸ್ವಾತಂತ್ರ್ಯದವರೆಗೂ ಬ್ರಿಟಿಷ್ ಭಾರತೀಯ ಸೇನೆ ಎಂದು ಕರೆಯಲಾಗುತ್ತಿತ್ತು. ಆದರೆ, 1949ರ ಜನವರಿ 15, ಭಾರತೀಯ ಸೇನೆಯು ತನ್ನ ಮೊದಲ ಭಾರತೀಯ ಕಮಾಂಡರ್ ಇನ್ ಚೀಫ್ ಅನ್ನು ಪಡೆದುಕೊಂಡಿತು ಎಂದು ವಿವರಿಸಿದರು.

ಇದೇ ಮೊದಲ ಬಾರಿಗೆ ಸೇನಾ ದಿನಾಚರಣೆಯನ್ನು ಹೊಸದಿಲ್ಲಿಯಿಂದ ಹೊರಗೆ ಬೆಂಗಳೂರಿನಲ್ಲ್ಲಿ ಆಚರಿಸಲಾಗುತ್ತಿದೆ. ಯುದ್ಧಸಾಮಗ್ರಿ ಮತ್ತು ಶಸ್ತ್ರಾಸ್ತ್ರಗಳ ವಿಷಯದಲ್ಲಿ ಭಾರತೀಯ ಸೇನೆಯು ವಿಶ್ವದಲ್ಲಿ ಉನ್ನತ ಸ್ಥಾನದಲ್ಲಿದೆ. ಭಾರತೀಯ ಸೇನೆಯು ನಿಖರ ಅಗ್ನಿ ಮತ್ತು ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾಗೂ ಸ್ವದೇಶಿ ನಿರ್ಮಿತ ಯುದ್ದ ಸಲಕರಣೆಗಳನ್ನು ಹೊಂದಿರುವ ಹೆಲಿಕ್ಯಾಪ್ಟರ್ ಹೊಂದಿದ್ದು, ಇದು ಶಕ್ತಿಯುತವಾಗಿದೆ. ಭಾರತೀಯ ಸೈನ್ಯವು ತನ್ನ ಶತ್ರುಗಳ ದಾಳಿಗೆ ಮಾತ್ರ ಪ್ರತಿಕ್ರಿಯಿಸುವ ವಿಶ್ವದ ಏಕೈಕ ಸೈನ್ಯವಾಗಿದೆ. ಎರುರಾಳಿ ಸೈನ್ಯವನ್ನು ಒಡೆದುರಿಳಿಸುವ ಎಲ್ಲ ಶಕ್ತಿಯನ್ನು ನಮ್ಮ ಸೇನೆ ಹೊಂದಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

ದೇಶದ ಜನರನ್ನು ರಕ್ಷಿಸಲು ಭಾರತೀಯ ಸೇನೆಯು ಎಷ್ಟು ಸಿದ್ಧವಾಗಿದೆಯೋ, ಜಗತ್ತು ಅದನ್ನು ಕಬ್ಬಿಣದಷ್ಟೇ ಬಲಿಷ್ಠ ಎಂದು ಪರಿಗಣಿಸುತ್ತದೆ. ಭಾರತೀಯ ಸೇನೆಯ ಹೆಸರು ವಿಶ್ವದ ಅತ್ಯುನ್ನತ ಸ್ಥಳದಲ್ಲಿ ಸೇತುವೆಯನ್ನು ನಿರ್ಮಿಸಿದ ದಾಖಲೆಯನ್ನು ಹೊಂದಿದೆ. ಬದಲಾದ ದಿನಗಳಲ್ಲಿ ನಮ್ಮ ಸೇನೆಯು ಬದಲಾವಣೆಗಳನ್ನು ಅಳವಡಿಸಿಕೊಂಡು ತನ್ನ ಶಕ್ತಿ ಸಾಮಥ್ರ್ಯವನ್ನು ತೋರಿಸುತ್ತಾ ಬಂದಿದೆ. ಅನೇಕ ಸಮಯದಲ್ಲಿ ಯುದ್ದ ಮಾಡುವುದಲ್ಲದೇ ಸಹಾಯವನ್ನು ಮಾಡುತ್ತಾ ಬಂದಿದೆ ಎಂದು ಅವರು ಸೇನೆಯ ಸಾಮಥ್ರ್ಯವನ್ನು ಶ್ಲಾಘಿಸಿದರು.

ಉಕ್ರೇನ್ ಯುದ್ದ ಸಮಯದಲ್ಲಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ಉಕ್ರೇನ್ ಅಧ್ಯಕ್ಷರು, ರμÁ್ಯ ಅಧ್ಯಕ್ಷರು ಮತ್ತು ಅಮೇರಿಕಾ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ಸ್ವಲ್ಪ ಸಮಯದ ವರೆಗೆ ಯುದ್ದ ನಿಲ್ಲಿಸುವಲ್ಲಿ ಸಪಲರಾದರು ಇದು ಹೆಮ್ಮೆಯ ವಿಷಯವಾಗಿದೆ ಎಂದ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಶ್ವಯೋಧರಿಂದ ಟೆಂಟ್ ಪೆಗ್ಗಿಂಗ್, ಬಾರು ಪ್ರದರ್ಶನ, ಅಸ್ಸಾಂ ರೆಜಿಮೆಂಟ್‍ನಿಂದ ಮಾರ್ಷಲ್ ಆಟ್ರ್ಸ್ ಪ್ರದರ್ಶನ, ಸ್ಕೈಡೈವ್ ಪ್ರದರ್ಶನ, ಎಚ್‍ಎಎಲ್‍ನಿಂದ ನಿರ್ಮಾಣ ಮಾಡಲಾಗಿರುವ ರುದ್ರ ಹೆಲಿಕ್ಯಾಪ್ಟರ್ ಪ್ರದರ್ಶನ, ಮೈ ರೋಮಾಂಚನ ನೀಡಿತು. ಅಲ್ಲದೆ, ಯೋದರಿಂದ ಮೈಕ್ರೋಲೈಟ್ ವಿಮಾನ ಹಾರಾಟ, ದಕ್ಷಿಣ ಕೊರಿಯಾದ ಮಾರ್ಷಲ್ ಆಟ್ರ್ಸ್ ಎದೆ ಜಿಲ್ ಎಂಬಂತೆ ಮೂಡಿ ಬಂತು. 3 ರಾಷ್ಟ್ರಧ್ವಜ ಮತ್ತು ಸೇನಾ ಧ್ವಜ ಹೊತ್ತ ಪ್ಯಾರಾಚೂಟ್ ಪ್ರದರ್ಶನ, ಮೊಟಾರ್ ಸೈಕಲ್ ಪ್ರದರ್ಶನ ನೀಡಲಾಯಿತು.

ಲೆಪ್ಟಿನೆಂಟ್ ಜನರಲ್ ಮನೋಜ್ ಕುಮಾರ್ ಪಾಂಡೆ, ಡಿಪೆನ್ಸ್ ಸ್ಟಾಪ್ ಜನರಲ್ ಅನೀಲ್ ಚೌಹ್ಹಾಣ್, ಮೇಜರ್ ಜನರಲ್ ಎಂ.ಕೆ.ಖಾನ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಅಧಿಕಾರಿಗಳು, ಯೋಧರು, ನಿವೃತ್ತ ಯೋಧರು ಸೇರಿದಂತೆ ರಕ್ಷಣಾ ಇಲಾಖೆ ಮುಖ್ಯಸ್ಥರು ಹಾಜರಿದ್ದರು.

‘ಭಾರತೀಯ ಸೇನೆಯು ಇಂದಿನ ದಿನಗಳನ್ನು ಯೋಚಿಸದೆ ನಾಳೆ, ನಾಡಿದ್ದು, ಮುಂದಿನ ಇಪ್ಪತ್ತೈದು ವರ್ಷಗಳ ಬಗ್ಗೆ ಯೋಚಿಸಿ, ಹೊಸ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು, ಹೊಸ ಹೊಸ ಅವಿಸ್ಕಾರಗಳನ್ನು ಮಾಡಿ, ಕೆಲಸ ನಿರ್ವಹಿಸಬೇಕು. ಸಮಸ್ತ ದೇಶದ, ನಾಡಿನ ಜನರ ಯೋಗ ಕ್ಷೇಮ ರಕ್ಷಣೆಗೆ ಒತ್ತುಕೊಡುವುದರ ಜೊತೆಗೆ ದೇಶವನ್ನು ರಕ್ಷಿಸಬೇಕು, ಇದಕ್ಕಾಗಿ ನಾವು ಎಲ್ಲ್ಲ ಸಹಕಾರಗಳನ್ನು ನೀಡಲು ಸಿದ್ಧರಿದ್ದೇವೆ’

-ರಾಜನಾಥ್ ಸಿಂಗ್ ಕೇಂದ್ರ ರಕ್ಷಣಾ ಸಚಿವ

share
Next Story
X