ಬಾಲಕಿಯ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿದ ಅಪ್ರಾಪ್ತರು

ಮಥುರಾ: ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಅಪ್ರಾಪ್ತ ವಯಸ್ಸಿನ ಯುವಕರು, ಈ ಕೃತ್ಯದ ವಿಡಿಯೊ ಚಿತ್ರೀಕರಿಸಿ, ಈ ಬಗ್ಗೆ ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಾಕುವುದಾಗಿ ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತೆಯ ಸಂಬಂಧಿಕರು ನೀಡಿದ ದೂರಿನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಹೈವೇ ಪೊಲೀಸ್ ಠಾಣೆಯ ಅಧಿಕಾರಿ ಚೋಟೇಲಾಲ್ ಹೇಳಿದ್ದಾರೆ.
ಶನಿವಾರ ಸಂಜೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿ ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ನೆರೆಮನೆಯ ಇಬ್ಬರು ಹುಡುಗರು ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದಾಗ, ಅವರು ಅತ್ಯಾಚಾರ ಎಸಗಿದರು ಎಂದು ಸಂಬಂಧಿಕರು ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
Next Story





