ಕುಂಡೂರು ದರ್ಗಾ ಉರೂಸ್ ಗೆ ಚಾಲನೆ

ಉಳ್ಳಾಲ: ಧಾರ್ಮಿಕ ಕಾರ್ಯ ಚಟುವಟಿಕೆ ಬಗ್ಗೆ ಅಧ್ಯಯನ ಮಾಡಬೇಕಾದುದು ನಮ್ಮ ಜವಾಬ್ದಾರಿ. ಕುಂಡೂರು ದರ್ಗಾಕ್ಕೆ ಬಹಳಷ್ಟು ಇತಿಹಾಸ ಇದೆ ಎಂದು ಕುಂಡೂರು ಜುಮಾ ಮಸೀದಿಯ ಖತೀಬ್ ಅಬೂ ಝಾಹಿರ ಕೆ.ಎಸ್.ಉಸ್ಮಾನ್ ದಾರಿಮಿ ಹೇಳಿದ್ದಾರೆ.
ಅವರು ಕುಂಡೂರು ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಝ್ರತ್ ಅಸ್ಸೈಯದ್ ಮುಹಮ್ಮದ್ ರಿಫಾಯಿ ಅಲ್ ಬುಖಾರಿ ಹೆಸರಿನಲ್ಲಿ ನಡೆಯುವ ಮುಖಾಂ ಉರೂಸ್ ಕಾರ್ಯಕ್ರಮಕ್ಕೆ ರವಿವಾರ ಚಾಲನೆ ನೀಡಿ ಮಾತನಾಡಿದರು
ಬಳಿಕ ಉಸ್ತಾದ್ ವಲಿಯುದ್ದೀನ್ ಫೈಝಿ ವಾಯಾಕ್ಕಾಡ್ ನೇತೃತ್ವದಲ್ಲಿ ನೂರೇ ಅಜ್ಮೀರ್ ಕಾರ್ಯಕ್ರಮ ನಡೆಯಿತು.
ಕುಂಡೂರು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಅಬೂಬಕರ್ ಸಿದ್ದೀಕ್ ಸ್ವಾಗತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಯು.ಟಿ ಖಾದರ್ಕಾ ರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕುಂಡೂರು ನುಸ್ರತುಲ್ ಇಸ್ಲಾಂ ಸಮಿತಿಯ ಅಧ್ಯಕ್ಷ ಎಸ್.ಎಂ.ರಫೀಕ್, ಕೇಂದ್ರ ಜಮಾಅತ್ ಕಮಿಟಿಯ ಉಪಾಧ್ಯಕ್ಷರಾದ ಮುಹಮ್ಮದ್ ತೊಜ್ಜ, ಮುಹಮ್ಮದ್ ಶರೀಫ್, ಕೋಶಾಧಿಕಾರಿ ಅಬೂಬಕರ್ ಬೀಡಿ, ಅಂಬ್ಲಮೊಗರು ಪಂಚಾಯತ್ ಉಪಾಧ್ಯಕ್ಷ ಮುಹಮ್ಮದ್ ಇಕ್ಬಾಲ್, ಮುಸ್ತಫ ಫೈಝಿ, ಬೈತಾರ್ ಮಸೀದಿಯ ಅಧ್ಯಕ್ಷ ಮುಹಮ್ಮದ್ ಮುಸ್ತಫಾ ಡಿ. ಮತ್ತಿತರರು ಉಪಸ್ಥಿತರಿದ್ದರು.
ಉರೂಸ್ ಕಮಿಟಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹೀಂ ಸ್ವಾಗತಿಸಿದರು.