ಪ್ರತಿ ಮನೆಯ ಕುಟುಂಬದ ಗೃಹಿಣಿಗೆ ಮಾಸಿಕ 2,000 ರೂ.: ಕಾಂಗ್ರೆಸ್ 'ಗೃಹಲಕ್ಷ್ಮಿ' ಯೋಜನೆ ಘೋಷಣೆ
ಬೆಂಗಳೂರು. ಜ.16: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ನೆರವು ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ನಾ ನಾಯಕಿ' ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಲ್ಲಿಸಲಾಯಿತು.
ಕಾಂಗ್ರೆಸ್ ಗ್ಯಾರಂಟಿ ನಂ.02
— Karnataka Congress (@INCKarnataka) January 16, 2023
ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ 'ಗೃಹಲಕ್ಷ್ಮಿ' ಯೋಜನೆ.
ರಾಜ್ಯದ ಮಹಿಳೆಯರೇ,
ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ.
ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು
ಇನ್ಮುಂದೆ ಕಾಂಗ್ರೆಸ್ ಹೊಣೆ!#GruhaLakshmi pic.twitter.com/pDgMxLv2l8
Next Story