ಉಡುಪಿ: ಸೊಸೈಟಿ ವಂಚನೆ ಪ್ರಕರಣದ ಆರೋಪಿ ಲಕ್ಷ್ಮೀನಾರಾಯಣಗೆ ಜಾಮೀನು

ಉಡುಪಿ: ಉಡುಪಿ ಕಮಲಾಕ್ಷಿ ವಿವಿದ್ದೋದ್ದೇಶ ಸೊಸೈಟಿ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿ ಬಂಧಿತನಾಗಿದ್ದ ಸೊಸೈಟಿ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣ(63) ಎಂಬಾತನಿಗೆ ಸೋಮವಾರ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.
ಈತ ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿದರ ನೀಡುವುದಾಗಿ 700 ಮಂದಿಗೆ 40-50 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿ ವಂಚಿಸಿರುವುದಾಗಿ ದೂರಲಾಗಿತ್ತು. ಅದರಂತೆ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಡಿ.29ರಂದು ಬ್ರಹ್ಮಾವರದ ಮಟಪಾಡಿ ಬಳಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
Next Story