Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಮೋದಿ ಸುಳ್ಳಿನ ಸರದಾರ:...

ಪ್ರಧಾನಿ ಮೋದಿ ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್ ಕಿಡಿ

17 Jan 2023 8:11 PM IST
share
ಪ್ರಧಾನಿ ಮೋದಿ ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್ ಕಿಡಿ

ಹೊಸಪೇಟೆ, ಜ.17: ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ. ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ಏನು ಮಾಡಿಲ್ಲ ಎನ್ನುವ ಸುಳ್ಳಿನ ಸರದಾರ, ರಾಜ್ಯದಲ್ಲಿ ಎರಡು ಬಾರಿ ಅಧಿಕಾರ ನಡೆಸಿರುವ ಬಿಜೆಪಿಯವರು ಯಾವುದಾದರೂ ಒಳ್ಳೆಯ ಕೆಲಸ ಮಾಡಿದ್ದಾರಾ ಎಂದು ಹೇಳಲಿ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಗಾರಿದರು.

ಮಂಗಳವಾರ ಹೊಸಪೇಟೆಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಳ್ಳಾರಿ ಅವಿಭಾಜ್ಯ ಜಿಲ್ಲೆ ಇದ್ದಾಗ ಸಕ್ಕರೆ, ಎಣ್ಣೆ, ಜವಳಿ ಹಾಗೂ ಬಿಸ್ಕೆಟ್ ಕಾರ್ಖಾನೆ ಇದ್ದ ಊರು. ಈಗ ಎಲ್ಲವೂ ಬಂದ್ ಮಾಡಿ ನಿರುದ್ಯೋಗ ಹೆಚ್ಚಿಸಿರುವುದೆ ಬಿಜೆಪಿ ಸರಕಾರದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ತುಂಗ ಭದ್ರಾ ಆಣೆಕಟ್ಟಿನ ಶಂಕುಸ್ಥಾಪನೆ ಮಾಡಿದ್ದು ಪ್ರಥಮ ಪ್ರಧಾನಿ ನೆಹರು. ಆದರೆ ಮೋದಿ ಹಾಗೂ ಬಿಜೆಪಿ ಸರಕಾರ ಯಾವುದಾದರೂ ಒಂದು ಆಣೆಕಟ್ಟಿಗೆ ಅಡಿಗಲ್ಲು ಹಾಕಿದ್ದಾರಾ? ಬಿಜೆಪಿ ಸರಕಾರ ಕಾಂಗ್ರೆಸ್ ಪಕ್ಷ ಕಟ್ಟಿದ ಎಲ್ಲ ಸಾರ್ವಜನಿಕ ಉದ್ಯಮಗಳನ್ನು ಖಾಸಗಿ ಮಾಡಿ ತನ್ನ ಸಾಲಗಾರ ಉದ್ಯಮಿ ಸ್ನೇಹಿತರ ಜೇಬು ತುಂಬಿಸುತ್ತಿದೆ. ಈ ರಾಷ್ಟ್ರದ ಶೇ.40ರಷ್ಟು ಸಂಪತ್ತು ದೇಶದ ಶೇ.1 ಭಾಗದಷ್ಟು ಜನರ ಬಳಿ ಇದೆ. ಈ ರಾಷ್ಟ್ರದ 70ರಷ್ಟು ಸಂಪತ್ತು ಕೇವಲ ಶೇ.10ರಷ್ಟು ಜನರ ಬಳಿ ಇದೆ ಎಂದು ಹರಿಪ್ರಸಾದ್ ಹೇಳಿದರು. 

ಈ ಹಿಂದೆ ಬಹುಮತ ಬಾರದೆ ಬಿಜೆಪಿಯನ್ನು ಜನ ತಿರಸ್ಕರಿಸಿದ್ದಾಗ ನಾವು ಸಮ್ಮಿಶ್ರ ಸರಕಾರವನ್ನು ಮಾಡಿದ್ದೆವು. ಆದರೆ ಮೈ ಮಾರಿಕೊಳ್ಳುವ ಮಹಿಳೆಯನ್ನು ವೇಶ್ಯೆ ಎಂದು ಕರೆಯುತ್ತಾರೆ. ಆದರೆ ತಮ್ಮ ಸ್ವಾಭಿಮಾನ ಸೇರಿದಂತೆ ಎಲ್ಲವನ್ನು ಮಾರಾಟ ಮಾಡಿರುವ  ಶಾಸಕರನ್ನು ನೀವು ಏನೆಂದು ಕರೆಯುತ್ತೀರಿ? ಈ ಶಾಸಕರಿಗೆ ನೀವು ಬರುವ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು ಎಂದು ಅವರು ಕರೆ ನೀಡಿದರು.

ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ, ಜನರ ಆರೋಗ್ಯ, ಶಿಕ್ಷಣ, ಉದ್ಯೋಗದ ಬಗ್ಗೆ ಮಾತನಾಡುತ್ತೇವೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದುರಂತದಂತೆ ಜಾತಿ, ಧರ್ಮ, ಭಾಷೆ ವಿಚಾರ ಪ್ರಮುಖವಾಗಿ ಚರ್ಚೆಯಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ ಎಂದು ಪಡೆದಿದ್ದ ಕೀರ್ತಿಯನ್ನು ಮತ್ತೆ ಪುನಃಸ್ಥಾಪಿಸಲು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಭಾರಿ ಬಹುಮತದಿಂದ ಆರಿಸಿ ಕಳುಹಿಸಬೇಕು ಎಂದು ಹರಿಪ್ರಸಾದ್ ಮನವಿ ಮಾಡಿದರು.

share
Next Story
X