Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಾಲ್‍ ಬ್ಯಾಡ್ಮಿಂಟನ್‍ಗೆ ಅಂತರಾಷ್ಟ್ರೀಯ...

ಬಾಲ್‍ ಬ್ಯಾಡ್ಮಿಂಟನ್‍ಗೆ ಅಂತರಾಷ್ಟ್ರೀಯ ಮಾನ್ಯತೆ ಸಿಗಲಿ: ವಿವೇಕ್ ಆಳ್ವ

ಎಸ್‍ಆರ್ ಎಂ ಚಾಂಪಿಯನ್: ಅತಿಥೇಯ ಮಂಗಳೂರು ವಿವಿ ರನ್ನರ್ಸ್ ಆಫ್

17 Jan 2023 11:35 PM IST
share
ಬಾಲ್‍ ಬ್ಯಾಡ್ಮಿಂಟನ್‍ಗೆ ಅಂತರಾಷ್ಟ್ರೀಯ ಮಾನ್ಯತೆ ಸಿಗಲಿ: ವಿವೇಕ್ ಆಳ್ವ
ಎಸ್‍ಆರ್ ಎಂ ಚಾಂಪಿಯನ್: ಅತಿಥೇಯ ಮಂಗಳೂರು ವಿವಿ ರನ್ನರ್ಸ್ ಆಫ್

ಉಪ್ಪಿನಂಗಡಿ: ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗೆ ಅಂತರಾಷ್ಟ್ರೀಯ ಮಾನ್ಯತೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ವಿವಿಗಳು ಒಂದಾಗಿ ಈ ಕ್ರೀಡೆಯನ್ನು ಬೆಳೆಸಲು ಮುಂದಾಗಬೇಕು. ಆಗ ಮಾತ್ರ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗೆ ಉತ್ತಮ ಭವಿಷ್ಯ ಸಿಗಲು ಸಾಧ್ಯ ಎಂದು ಆಳ್ವಾಸ್ ಎಜುಕೇಷನ್ ಫೌಂಡೇಶನ್‍ನ ಆಡಳಿತ ನಿರ್ದೇಶಕ ವಿವೇಕ್ ಆಳ್ವ ತಿಳಿಸಿದರು.

ಮಂಗಳೂರು ವಿವಿಯು ಐದು ದಿನಗಳ ಕಾಲ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಕ್ರೀಡೆಯಿಂದ ಒಗ್ಗಟ್ಟು ಸಾಧ್ಯವಿದ್ದು, ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಬೆಳೆಸುವ ನಿಟ್ಟಿನಲ್ಲಿ ಈ ಒಗ್ಗಟ್ಟು ಬೇಕಾಗಿದೆ ಎಂದ ಅವರು, ಮನಸ್ಸು ಮಾಡಿದರೆ ಸರಕಾರಿ ಶಾಲೆಗಳು ಕೂಡಾ ಅಚ್ಚುಕಟ್ಟಾಗಿ, ಸುಂದರವಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟವನ್ನು ಆಯೋಜಿಸಬಹುದು ಎಂಬುದಕ್ಕೆ ಇಲ್ಲಿ ನಡೆದ ಕ್ರೀಡಾ ಕೂಟವೇ ಸಾಕ್ಷಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ, ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಮಠಂದೂರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿ ಹಳ್ಳಿಯ ಕ್ರೀಡಾಪಟುಗಳನ್ನು  ರಾಷ್ಟ್ರಮಟ್ಟದಲ್ಲಿ ಬೆಳೆಸಬಹುದು ಎಂಬುದಕ್ಕೆ ಈ ಕಾಲೇಜಿನಲ್ಲಿ ನಡೆದ ಕ್ರೀಡಾಕೂಟವೇ ಉತ್ತಮ ಉದಾಹರಣೆ. ಗ್ರಾಮೀಣ ಭಾಗದ, ಮಣ್ಣಿನ ಮಕ್ಕಳ ಕ್ರೀಡಾಕೂಟಕ್ಕೆ ಹಿಂದಿನಿಂದಲೂ ಈ ಕಾಲೇಜು ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಈ ಬಾರಿ ಕೂಡಾ ಯಶಸ್ವಿಯಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟವನ್ನು ನಡೆಸಿದ ಹೆಗ್ಗಳಿಕೆ ತನ್ನದಾಗಿಸಿಕೊಂಡಿದೆ. ಈ ಯಶಸ್ಸಿನ ಹಿಂದೆ ಹತ್ತಾರು ಕೈಗಳು ಒಂದುಗೂಡಿ ಮಾಡಿದ ಶ್ರಮ ಇದೆ ಎಂದರು.

ಮಂಗಳೂರು ವಿವಿಯ ರಿಜಿಸ್ಟ್ರಾರ್ ಡಾ. ಕಿಶೋರ್ ಕುಮಾರ್ ಸಿ.ಕೆ., ಬಾಲ್ ಬ್ಯಾಡ್ಮಿಂಟನ್‍ನಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಜಿ.ಬಿ. ನಾಗರಾಜ್ ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ಈ ಭಾಗದ ಕ್ರೀಡಾ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಎಸ್. ಡಿಸೋಜ ಸ್ವಾಗತಿಸಿದರು. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಸುಬ್ಬಪ್ಪ ಕೈಕಂಬ ವಂದಿಸಿದರು. ಇಂಡಿಯನ್ ಓವರ್‍ಸೀಸ್ ಬ್ಯಾಂಕ್‍ನ ಮುತ್ತು ಕಾರ್ಯಕ್ರಮ ನಿರೂಪಿಸಿದರು.

ಎಸ್‍ಆರ್ ಎಂ ಚಾಂಪಿಯನ್: ಅತಿಥೇಯ ಮಂಗಳೂರು ವಿವಿ ರನ್ನರ್ಸ್ ಆಫ್
ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ರೋಚಕ ಕಾದಾಟದಲ್ಲಿ ಅತಿಥೇಯ ಮಂಗಳೂರು ವಿವಿ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್ ತಮಿಳುನಾಡಿದ ಎಸ್‍ಆರ್ ಎಂ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆಯ ತಂಡವು ಚಾಂಪಿಯನ್‍ಶಿಪ್ ಅನ್ನು ತನ್ನ ಮುಡಿಗೇರಿಸಿಕೊಂಡಿದ್ದು,  ಮಂಗಳೂರು ವಿವಿಯ ತಂಡವು ರನ್ನರ್ಸ್ ಆಫ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯಾಟದಲ್ಲಿ ಆಂಧ್ರ ವಿವಿ ತೃತೀಯ ಸ್ಥಾನ ಹಾಗೂ ಅಣ್ಣಾ ವಿವಿಯು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ಎಸ್‍ಆರ್ ಎಂ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆಯ ತಂಡ ಹಾಗೂ ಮಂಗಳೂರು ವಿವಿ ತಂಡದ ನಡುವೆ ನಡೆದ ಫೈನಲ್ ಪಂದ್ಯಾಟದಲ್ಲಿ 22-35, 35-33, 35-28 ಅಂಕಗಳನ್ನು ಗಳಿಸಿ ಈ ಬಾರಿಯ ಚಾಂಪಿಯನ್‍ಶಿಪ್ ಅನ್ನು ತನ್ನದಾಗಿಸಿಕೊಂಡಿದೆ. ಎಸ್‍ಆರ್ ಎಂ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆಯ ತಂಡವು ಕಳೆದ ಬಾರಿ ಕೂಡಾ ಚಾಂಪಿಯನ್ ಆಗಿತ್ತು. ಈ ಬಾರಿ ರನ್ನರ್ಸ್ ಆಫ್ ಪ್ರಶಸ್ತಿಯನ್ನು ಪಡೆದ ಮಂಗಳೂರು ವಿವಿ ತಂಡವು ಕಳೆದ ಬಾರಿ ತೃತೀಯ ಸ್ಥಾನ ಪಡೆದಿತ್ತು. ಆಂಧ್ರ ಪ್ರದೇಶ ವಿವಿ ಹಾಗೂ ಅಣ್ಣಾ ವಿವಿ ನಡುವೆ ನಡೆದ ಪಂದ್ಯಾಟದಲ್ಲಿ 22-35, 35-33, 35-23 ಅಂಕಗಳನ್ನು ಗಳಿಸಿ ಆಂಧ್ರ ವಿವಿಯು ತೃತೀಯ ಸ್ಥಾನ ಪಡೆದುಕೊಂಡಿತು. ಅಣ್ಣಾ ವಿವಿಯು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಉತ್ತಮ ದಾಳಿಗಾರನಾಗಿ ಆಂಧ್ರ ವಿವಿಯ ಸಾಂಬಶಿವ, ಉತ್ತಮ ರಕ್ಷಣಾಕಾರನಾಗಿ ಮಂಗಳೂರು ವಿವಿಯ ಯಚೇತನ್, ಆಲ್‍ರೌಂಡರ್ ಪ್ರಶಸ್ತಿಯನ್ನು ಎಸ್‍ಆರ್ ಎಂ ವಿವಿಯ ರಂಜಿತ್‍ಕುಮಾರ್ ಪಡೆದುಕೊಂಡರು.

share
Next Story
X