ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಗೆ ಹಲ್ಲೆ ಪ್ರಕರಣ: ಆರೋಪಿಗಳ ಖುಲಾಸೆ

ಮಂಗಳೂರು: ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಕೇಶವ ಎಂಬಾತನ ಕೊಲೆಯತ್ನ ಪ್ರಕರಣದ ಎಲ್ಲಾ ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಕರೋಪಾಡಿ ಗ್ರಾಪಂ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿಯ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇಶವನಿಗೆ 2017ರ ಡಿಸೆಂಬರ್ 26ರಂದು ಕಲ್ಲಡ್ಕ ಪೇಟೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಉಮ್ಮರ್ ಫಾರೂಕ್, ನಿಝಾಮ್, ಶರೀಫ್, ಇಕ್ಬಾಲ್, ಇರ್ಫಾನ್‌ರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಉಮ್ಮರ್ ಫಾರೂಕ್ ನ್ಯಾಯಾಲಯದ ವಿಚಾರಣೆ ವೇಳೆ ಮೃತಪಟ್ಟಿದ್ದರು. ಉಳಿದಂತೆ ಇತರ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆರೋಪಿತರ ಪರವಾಗಿ ವಕೀಲರಾದ ಉಮರ್ ಫಾರೂಕ್ ಮುಲ್ಕಿ, ಹೈದರ್ ಅಲಿ ಕಿನ್ನಿಗೋಳಿ, ಮುಫೀದಾ ರೆಹ್ಮಾನ್ ಮುಡಿಪು ವಾದಿಸಿದ್ದಾರೆ.
Next Story