Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‌ವಿಶ್ವದಾದ್ಯಂತ 12,000 ಉದ್ಯೋಗ ಕಡಿತ:...

‌ವಿಶ್ವದಾದ್ಯಂತ 12,000 ಉದ್ಯೋಗ ಕಡಿತ: ಗೂಗಲ್ ಮಾತೃಸಂಸ್ಥೆಯ ಘೋಷಣೆ

20 Jan 2023 9:02 PM IST
share
‌ವಿಶ್ವದಾದ್ಯಂತ 12,000 ಉದ್ಯೋಗ ಕಡಿತ: ಗೂಗಲ್ ಮಾತೃಸಂಸ್ಥೆಯ ಘೋಷಣೆ

ನ್ಯೂಯಾರ್ಕ್, ಜ.20: ಸುಮಾರು 12,000 ಉದ್ಯೋಗಿಗಳನ್ನು(ಜಾಗತಿಕ ಸಿಬಂದಿಪಡೆಯ 6%ಕ್ಕೂ ಅಧಿಕ) ಕೈಬಿಡಲು ನಿರ್ಧರಿಸಲಾಗಿದೆ ಎಂದು ಗೂಗಲ್ನ ಮಾತೃಸಂಸ್ಥೆ ಅಲ್ಫಾಬೆಟ್ ಐಎನ್ಸಿ. ಹೇಳಿದೆ.

ಇದರೊಂದಿಗೆ ಕೆಲ ವರ್ಷಗಳ ಹೇರಳ ಅಭಿವೃದ್ಧಿ ಮತ್ತು ನೇಮಕಾತಿಯ ಬಳಿಕ, ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭಿಸಿದ ಟೆಕ್ ದೈತ್ಯ ಸಂಸ್ಥೆಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಕಡಿತವು ಜಾಗತಿಕವಾಗಿ ಮತ್ತು ಸಂಸ್ಥೆಯಾದ್ಯಂತ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ್ ಪಿಚೈ ಶುಕ್ರವಾರ ಇಮೇಲ್ನಲ್ಲಿ ಉದ್ಯೋಗಿಗಳಿಗೆ ತಿಳಿಸಿದ್ದು, ಈ ನಿರ್ಧಾರಕ್ಕೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಕುಂಟುತ್ತಿರುವ ಜಾಗತಿಕ ಆರ್ಥಿಕತೆ ಮತ್ತು ಗಗನಕ್ಕೇರಿರುವ ಹಣದುಬ್ಬರದ ಬಿಕ್ಕಟ್ಟಿನಿಂದಾಗಿ ಉದ್ಯೋಗ ಕಡಿತಗೊಳಿಸುವ ನಿರ್ಧಾರವನ್ನು ಜಾಗತಿಕ ಟೆಕ್ ಸಂಸ್ಥೆಗಳಾದ ಮೆಟಾ(ಫೇಸ್ಬುಕ್ನ ಮಾತೃಸಂಸ್ಥೆ), ಟ್ವಿಟರ್, ಅಮಝಾನ್ ಇತ್ಯಾದಿ ಸಂಸ್ಥೆಗಳು ಈಗಾಗಲೇ ಪ್ರಕಟಿಸಿವೆ. ಇಂಟರ್ನೆಟ್ನ ಪ್ರಮುಖ ಸರ್ಚ್ ವ್ಯವಹಾರ(ಮಾಹಿತಿ ಹುಡುಕಾಟ)ದ ಕೊಂಡಿಯಾಗಿ ಗುರುತಿಸಿಕೊಂಡಿರುವ ಗೂಗಲ್, ಸಿಬಂದಿಗಳ ಕಡಿತ ನಿರ್ಧಾರವನ್ನು ಸಾಧ್ಯವಾದಷ್ಟು ಸಮಯ ಮುಂದೂಡುತ್ತಾ ಬಂದಿದೆ. ಆದರೆ ಡಿಜಿಟಲ್ ಜಾಹೀರಾತು ಆದಾಯದ ಇಳಿಕೆ ಮತ್ತು ಗೂಗಲ್ನ ಕ್ಲೌಡ್-ಕಂಪ್ಯೂಟಿಂಗ್ ವಿಭಾಗಕ್ಕೆ ಅಮಝಾನ್ ಮತ್ತು ಮೈಕ್ರೋಸಾಫ್ಟ್ ಕಾರ್ಪೊರೇಶನ್ನಿಂದ ತೀವ್ರ ಪೈಪೋಟಿ ಎದುರಾಗಿರುವುದರಿಂದ ಉದ್ಯೋಗ ಕಡಿತ ಅನಿವಾರ್ಯವಾಗಿದೆ ಎಂದು ಗೂಗಲ್ ಹೇಳಿದೆ.

ಇವುಗಳು ನಮ್ಮ ಗಮನವನ್ನು ತೀಕ್ಷ್ಣಗೊಳಿಸಲು, ನಮ್ಮ ವೆಚ್ಚದ ನೆಲೆಯನ್ನು ಮರುರೂಪಿಸಲು ಮತ್ತು ನಮ್ಮ ಪ್ರತಿಭೆ ಮತ್ತು ಬಂಡವಾಳವನ್ನು ನಮ್ಮ ಅತ್ಯುನ್ನತ ಆದ್ಯತೆಗಳಿಗೆ ನಿರ್ದೇಶಿಸಲು ಪ್ರಮುಖ ಕ್ಷಣಗಳಾಗಿವೆ. ಇತ್ತೀಚೆಗೆ ನಿಕಟ ಪೈಪೋಟಿ ಎದುರಿಸುತ್ತಿರುವ ಪ್ರಮುಖ ಹೂಡಿಕೆ ಕ್ಷೇತ್ರವಾದ ಕೃತಕ ಬುದ್ಧಿಮತ್ತೆ ವಿಭಾಗದಲ್ಲಿ ನಮ್ಮೆದುರು ಗಣನೀಯ ಅವಕಾಶವಿದೆ ಎಂದು ಸುಂದರ್ ಪಿಚೈ ಹೇಳಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಗೂಗಲ್ನ ಆದಾಯದಲ್ಲಿ 27% ಇಳಿಕೆಯಾಗಿದ್ದು 13.9 ಶತಕೋಟಿ ಡಾಲರ್ ಆದಾಯ ದಾಖಲಾಗಿದೆ ಎಂದು ಅಕ್ಟೋಬರ್ನಲ್ಲಿ ಸಂಸ್ಥೆ ವರದಿ ಮಾಡಿತ್ತು. ವೆಚ್ಚ ನಿಯಂತ್ರಣಕ್ಕೆ ಗೂಗಲ್ ಆದ್ಯತೆ ನೀಡಲಿದೆ ಎಂದು ಆಗ ಪಿಚೈ ಹೇಳಿದ್ದರೆ, ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಹೊಸ ಉದ್ಯೋಗಗಳ ಸಂಖ್ಯೆಯಲ್ಲಿ 50%ಕ್ಕೂ ಹೆಚ್ಚು ಕಡಿತವಾಗಲಿದೆ ಎಂದು ಮುಖ್ಯ ಹಣಕಾಸು ಅಧಿಕಾರಿ ರುತ್ ಪೊರಟ್ ಹೇಳಿದ್ದರು.

share
Next Story
X