ಬಿಜೆಪಿ ಸಭೆ ಮಾತ್ರ ಶಿಸ್ತಿನಿಂದ ನಡೆಯುತ್ತದೆ: ನಳಿನ್ ಕುಮಾರ್ ಕಟೀಲ್
''ಕಾಂಗ್ರೆಸ್, ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ...''
ಬೆಂಗಳೂರು: 'ಕಾಂಗ್ರೆಸ್ ಮತ್ತು ಜೆಡಿಎಸ್ ಸಭೆಗಳಲ್ಲಿ ಕುರ್ಚಿಗಾಗಿ ಕಿತ್ತಾಡುತ್ತಾರೆ. ಆದರೆ ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು. ಶಾಂತವಾಗಿ ನಮ್ಮ ಸಭೆ ನಡೆಯುತ್ತದೆ' ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೆಂಗಳೂರಿನ ರಾಜ್ಯ ಬಿಜೆಪಿ ಜಗನ್ನಾಥ ಭವನ ಕಚೇರಿಯಲ್ಲಿ ನಡೆದ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು ಪರಸ್ಪರ ಚಪ್ಪಲಿಗಳಲ್ಲಿ ಕಿತ್ತಾಡಿಕೊಂಡು ಸಭೆ ಮಾಡುತ್ತಾರೆ ಎಂದು ಹೇಳಿದ್ದಾರೆ.
''ಈ ಚುನಾವಣೆಯಲ್ಲಿ ಬೇರೆಬೇರೆ ಪಾರ್ಟಿಯವರು ಶರ್ಟ್ ಹೊಲಿಸಿ ಕಾಯುತ್ತಿದ್ದಾರೆ. ಕೆಲವರು ಕೋಟ್ ಹೊಲಿಸಲು ಅಂಗಡಿಗೆ ಕೊಟ್ಟಿದ್ದಾರೆ. ಇನ್ನೂ ಕೆಲವರು ಹೊಸ ಪ್ಯಾಂಟ್ ಶರ್ಟ್ ಖರೀದಿಸಿದ್ದಾರೆ. ಇನ್ನೂ ಕೆಲವರು ಅವರೊಳಗೇ ಪ್ಯಾಂಟ್, ಶರ್ಟ್ ಹರಿಯಲು ಶುರು ಮಾಡಿದ್ದಾರೆ. ನೋಡಿ 3 ಪಾರ್ಟಿಯಲ್ಲಿ ಮೂರು ವಿಭಿನ್ನತೆ. ರಾಷ್ಟ್ರೀಯ ಪಾರ್ಟಿ ಇನ್ನೊಂದಿದೆ. ಅವರ ಸಭೆ ಆದಾಗ ಚಪ್ಪಲಿಗಳು ಕೈಯಲ್ಲಿ ಇರುತ್ತದೆ'' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕುಮಾರಸ್ವಾಮಿ ಸಿಎಂ ಆಗದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿ.ಎಂ.ಇಬ್ರಾಹಿಂ