Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು...

ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿಕೆಶಿ ತಿರುಗೇಟು

21 Jan 2023 11:25 AM IST
share
ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿಕೆಶಿ ತಿರುಗೇಟು

ಬೆಂಗಳೂರು, ಜ.21: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ನಳಿನ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು. ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರು ಸಭೆ ಮಾಡಿದರೆ ಚಪ್ಪಲಿಗಳು ಕೈಗೆ ಬರುತ್ತವೆ ಎಂಬ ನಳಿನ್ ಹೇಳಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಶನಿವಾರ ಡಿಕೆಶಿ ಈ ರೀತಿ ಪ್ರತಿಕ್ರಿಯಿಸಿದರು.

ನಳಿನ್  ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ನಳಿನ್ ಅವರಿಗೆ ಪಕ್ಷದಲ್ಲಿ ಹಿಡಿತವಿಲ್ಲ. ಅವರು ಪಕ್ಷದ ಅಧ್ಯಕ್ಷರು, ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಒಡೆಯಲು ಟಿಆರ್ ಎಸ್ ನಾಯಕ ಕೆ.ಸಿ ಚಂದ್ರಶೇಖರರಾವ್ ಅವರು ಹಣ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಈ ಬಗ್ಗೆ ನನಗೆ ಗೊತ್ತಿಲ್ಲ. ಹಣ್ಣ ಕೊಟ್ಟಿರುವವರು ಹಾಗೂ ತೆಗೆದುಕೊಂಡವರನ್ನು ಕೇಳಿ. ಬೇರೆಯವರು ವೈಯಕ್ತಿಕ ವಿಚಾರವಾಗಿ ಚಂದ್ರಶೇಖರ್ ಅವರನ್ನು ಭೇಟಿ ಮಾಡಿರಬಹುದು, ಅದಕ್ಕೆ ನಾವು ಪ್ರಶ್ನೆ ಮಾಡಲು ಆಗುವುದಿಲ್ಲ' ಎಂದು ತಿಳಿಸಿದರು.

ಮೊದಲ ಟಿಕೆಟ್ ಪಟ್ಟಿ ಬಗ್ಗೆ ಕೇಳಿದಾಗ, 'ಫೆ.2ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈಗಾಗಲೇ ನಮ್ಮ ನಾಯಕರು ಆಕಾಂಕ್ಷಿಗಳ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾವು ನಮ್ಮ ಪ್ರವಾಸ ಮುಗಿಸಿ ಚರ್ಚೆ ಮಾಡಿ ಆದಷ್ಟು ಬೇಗ ತೀರ್ಮಾನ ಮಾಡುತ್ತೇವೆ' ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದಿಂದ ತಮ್ಮ ಪಕ್ಷಕ್ಕೆ ನಾಯಕರು ಬರುವವರಿದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಕೇಳಿದಾಗ, 'ತಡಮಾಡದೆ ಆದಷ್ಟು ಬೇಗ ಕರೆದುಕೊಳ್ಳಲಿ' ಎಂದು ತಿಳಿಸಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಬಗ್ಗೆ ಕೇಳಿದಾಗ, 'ಅಮಿತ್ ಶಾ ಮೊದಲು ಬೊಮ್ಮಾಯಿ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು. ಆದರೆ ಈಗ ಮೋದಿ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿ ಇದ್ದರೂ ಯಾಕೆ ಮಾಡಲಿಲ್ಲ? ನಾವು ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಇನ್ನು ಎರಡನೇ ಗ್ಯಾರೆಂಟಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ನೆರವಾಗಲು ಮನೆಯೊಡತಿಗೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇವೆ.  ಈ ಯೋಜನೆ ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲವರು ಈ ಸೌಲಭ್ಯ ಬೇಡ ಎಂದರೆ ನಾವು ಏನೂ ಮಾಡಲು ಸಾಧ್ಯವಿಲ್ಲ' ಎಂದರು.

share
Next Story
X