ಗಣರಾಜ್ಯೋತ್ಸವ ಪರೇಡ್: ನೌಕಾಪಡೆ ತುಕಡಿಗೆ ಮಂಗಳೂರಿನ ದಿಶಾ ನೇತೃತ್ವ

ಮಂಗಳೂರು: ಹೊಸದಿಲ್ಲಿಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಂಗಳೂರಿನ ದಿಶಾ ಅಮೃತ್ ಅವರು ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿ ಹಾಗೂ ಸ್ತಬ್ಧಚಿತ್ರವು ಈ ಕವಾಯತ್‌ನಲ್ಲಿ ‘ನಾರಿಶಕ್ತಿ’ಯನ್ನು ಪ್ರದರ್ಶಿಸಲಿದೆ.
ಮೂಲತಃ ಮಂಗಳೂರಿನ ಬೋಳೂರು ಸಮೀಪದ ತಿಲಕ ನಗರದ ನಿವಾಸಿಯಾಗಿರುವ ದಿಶಾ ಅಮೃತ್ ಅವರು ಅಂಡಮಾನ್ ನಿಕೋಬಾರ್‌ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದಾರೆ.
ಮಗಳು ಗಣರಾಜ್ಯೋತ್ಸವ ಪರೇಡ್‌ನಲ್ಲಿ ತುಕಡಿಯ ನಾಯಕಿಯಾಗಿ ಹೆಜ್ಜೆ ಹಾಕುವುದನ್ನು ಕಣ್ತುಂಬಿಕೊಳ್ಳಲು ಆಕೆಯ ಹೆತ್ತವರಾದ ಅಮೃತ್ ಕುಮಾರ್ -ಲೀಲಾ ದಂಪತಿ ಹೊಸದಿಲ್ಲಿಗೆ ತೆರಳಿದ್ದಾರೆ.
ದಿಶಾ ಅಮೃತ್ ನಗರದ ಕೆನರಾ ವಿದ್ಯಾಸಂಸ್ಥೆಯಲ್ಲಿ ಪಿಯುಸಿವರೆಗೆ ವಿದ್ಯಭ್ಯಾಸ ಪಡೆದಿದ್ದು, ಬಳಿಕ ಬೆಂಗಳೂರು ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸಯನ್ಸ್‌ನಲ್ಲಿ ಬಿ.ಇ ಪದವಿ ಪಡೆದಿದ್ದಾರೆ. ಅವರು 2016ರಲ್ಲಿ ನೌಕಾಪಡೆಗೆ ಆಯ್ಕೆಗೊಂಡರು.
Next Story





