Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ನಲ್ಲಿ ಬಂಟರ ಸಂಘದ...

ಸುರತ್ಕಲ್ ನಲ್ಲಿ ಬಂಟರ ಸಂಘದ ಕ್ರೀಡೋತ್ಸವಕ್ಕೆ ಚಾಲನೆ

22 Jan 2023 2:23 PM IST
share
ಸುರತ್ಕಲ್ ನಲ್ಲಿ ಬಂಟರ ಸಂಘದ ಕ್ರೀಡೋತ್ಸವಕ್ಕೆ ಚಾಲನೆ

ಸುರತ್ಕಲ್, ಜ.22: ಬಂಟರ ಸಂಘ ಸುರತ್ಕಲ್, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಸಹಯೋಗದೊಂದಿಗೆ ಬಂಟರ ಕ್ರೀಡೋತ್ಸವವು ರವಿವಾರ ಇಲ್ಲಿನ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, "ಸುರತ್ಕಲ್ ಬಂಟರ ಸಂಘ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇತರ ಸಂಘಟನೆಗಳಿಗೆ ಮಾದರಿಯಾಗಿ ಬೆಳೆದಿದೆ. ಸಂಘದ ಕಾರ್ಯ ಚಟುವಟಿಕೆಗಳು ಇದೇ ರೀತಿ ನಿತ್ಯ ನಿರಂತರವಾಗಿ ಮುಂದುವರಿಯಲಿ" ಎಂದು ಶುಭ ಹಾರೈಸಿದರು.

ಬಳಿಕ ಮಾತಾಡಿದ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆಎಂ ಶೆಟ್ಟಿ ಮಾತನಾಡಿ, ಕ್ರೀಡೆಗೆ ಉತ್ತೇಜನ‌ ನೀಡುವ ಅಗತ್ಯ ಇದೆ. ಕ್ರೀಡೆಯಲ್ಲಿ ಬಹಳಷ್ಟು ಮಂದಿ ಬಂಟ ಪ್ರತಿಭಾವಂತರಿದ್ದಾರೆ ಎಂದರು.

ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ  ರಾಜ್ ಗೋಪಾಲ್ ರೈ ಮಾತನಾಡಿ, "ಬಂಟರಲ್ಲಿ ಹುಟ್ಟುವಾಗಲೇ ನಾಯಕತ್ವ ಗುಣವಿದೆ. ಸಮಾಜದಲ್ಲಿ ಒಗ್ಗಟ್ಟಿನಿಂದ ಮುಂದಾಳತ್ವ ಪಡೆದುಕೊಂಡಿರುವ ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯಬೇಕು" ಎಂದರು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಪೂಂಜಾ ಮಾತಾನಾಡಿ, "ಬಂಟರ ಕ್ರೀಡೋತ್ಸವ ವರ್ಷದಿಂದ ವರ್ಷಕ್ಕೆ ಚೆನ್ನಾಗಿ ನಡೆಯುತ್ತಿದೆ. ಇದಕ್ಕೆ ಸಂಘದ ಎಲ್ಲಾ ಸದಸ್ಯರು, ಯುವ ಸಂಘಟಕರ ಶ್ರಮ ಮತ್ತು ಮಹಿಳಾ ವೇದಿಕೆಯ ಪ್ರೋತ್ಸಾಹ  ಕಾರಣ. ಎಲ್ಲರಿಗೂ ಸಂಘವು ಅಭಾರಿಯಾಗಿದೆ" ಎಂದರು.

ವೇದಿಕೆಯಲ್ಲಿ ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಬಬಿತ ಜೆ. ಶೆಟ್ಟಿ, ಮಂದಾರತಿ ಎಸ್. ಶೆಟ್ಟಿ, ಸಾನ್ವಿ ಶೆಟ್ಟಿ, ಶ್ರೇಯ ಶೆಟ್ಟಿ, ಲಾಸ್ಯ ಶೆಟ್ಟಿ, ಅರುಷ್ ಎಸ್. ಶೆಟ್ಟಿ, ಶ್ರೇಯಸ್ ಎಸ್ ಶೆಟ್ಟಿ ಅವರನ್ನು ಅತಿಥಿಗಳು ಶಾಲು ಹೊದಿಸಿ ಸ್ಮರಣಿಕೆ ಕೊಟ್ಟು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಇಂಟರ್‌ ನ್ಯಾಷನಲ್ ಬಂಟ್ಸ್ ವೆಕ್ಟೇರ್ ಟ್ರಸ್ಟ್ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ರಾಜ್‌ಗೋಪಾಲ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಉದ್ಯಮಿ ಬಾಳ ಸಾನದ ಹೊಸಮನೆ ದೇವದಾಸ ಕೆ. ಶೆಟ್ಟಿ, ಕೆಎಂಎಫ್ ಇದರ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪಿ. ಶೆಟ್ಟಿ, ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಉಲ್ಲಾಸ್ ಆರ್  ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿ ರತ್ನಾಕರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸಂಘಟನಾ ಕಾರ್ಯದರ್ಶಿ ದೇವೇಂದ್ರ ಕೆ. ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೆ. ಶೆಟ್ಟಿ , ಅಕ್ಷತಾ ಗುಣಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಅನೂಪ್ ಶೆಟ್ಟಿ ಪ್ರಾರ್ಥಿಸಿ ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಶೆಟ್ಟಿ ಸುರತ್ಕಲ್ ವಂದಿಸಿದರು.

share
Next Story
X