Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ಮೋದಿಯವರು ಹೇಳಿದ್ದೆಲ್ಲವನ್ನು...

ಪ್ರಧಾನಿ ಮೋದಿಯವರು ಹೇಳಿದ್ದೆಲ್ಲವನ್ನು ಮಾಡಿ ತೋರಿಸಿದ್ದಾರೆ: ಶೋಭಾ ಕರಂದ್ಲಾಜೆ

22 Jan 2023 3:16 PM IST
share
ಪ್ರಧಾನಿ ಮೋದಿಯವರು ಹೇಳಿದ್ದೆಲ್ಲವನ್ನು ಮಾಡಿ ತೋರಿಸಿದ್ದಾರೆ: ಶೋಭಾ ಕರಂದ್ಲಾಜೆ

ಬಂಟ್ವಾಳ, ಜ.21: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಗೆ ಮಾಡಲು ಸಾಧ್ಯವಾಗದ ಸಾಧನೆಯನ್ನು ಬಿಜೆಪಿ ಕೆಲವೇ ವರ್ಷಗಳಲ್ಲಿ ಮಾಡಿ ತೋರಿಸಿದೆ,  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಪಾಂಡವರ ಕಲ್ಲುವಿನಲ್ಲಿ ಶನಿವಾರ ಸಮಾಪನಗೊಂಡ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌‌ ರವರ 8 ನೇ ದಿನದ ಪಾದಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಶ್ಮೀರವನ್ನು ಭಾರತದ ಜೊತೆ ಜೋಡಿಸುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಹೇಳಿದ್ದೆಲ್ಲವನ್ನು ಮಾಡಿ ತೋರಿಸಿದ್ದಾರೆ. ದೇಶದ ಯೋಧರಿಗೆ ಶಕ್ತಿ ತುಂಬುವ ಕೆಲಸವನ್ನು ಕೇಂದ್ರ ಸರಕಾರ ನಿರಂತರವಾಗಿ ಮಾಡಿದೆ ಎಂದ ಅವರು, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೇಸ್ ನ ಚಿಂತನೆಗಳು ಭಯೋತ್ಪಾದಕರಿಗೆ ಪ್ರೇರಣೆ ನೀಡಿದೆ ಎಂದು ಟೀಕಿಸಿದರು.

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮಾತನಾಡಿ, ಎರಡು ಸಾವಿರ ಕೋಟಿ ಗೂ ಮಿಕ್ಕಿದ ಅನುದಾನಗಳನ್ನು ಕ್ಷೇತ್ರಕ್ಕೆ ತರುವ ಮೂಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಕೃಷಿ ಹೀಗೆ ಎಲ್ಲಾ ಕ್ಷೇತ್ರಗಳ ಸುಧಾರಣೆಗೆ ಪೂರಕವಾಗಿ ಶಾಸಕ ರಾಜೇಶ್ ನಾಯ್ಕ್ ಶ್ರಮಿಸಿದ್ದಾರೆ ಎಂದರು.

ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕ್ಷೇತ್ರದ ಜನತೆಯ ಪ್ರೀತಿ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ, ಪಾದಯಾತ್ರೆಯಲ್ಲಿ ಸೇರಿಕೊಳ್ಳುವ ಹಿರಿಯರು, ಕಿರಿಯರು ನನ್ನ ಉತ್ಸಾಹ ಹೆಚ್ಚಿಸಿದ್ದಾರೆ ಎಂದರು.

ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಒಳ‌ಚರಂಡಿ ಹಾಗೂ ಕುಡಿಯುವ ನೀರು‌ ನಿಗಮದ ನಿರ್ದೇಶಕಿ ಸುಲೋಚನಾ ಭಟ್, ಗ್ರಾಮ‌ ವಿಕಾಸ ಯಾತ್ರೆಯ ಸಂಚಾಲಕ ದೇವದಾಸ್ ಶೆಟ್ಟಿ, ಜಿ.ಪಂ‌.ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ನಾವೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಉಳಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ಬಿಜೆಪಿ‌ ಕಾರ್ಯದರ್ಶಿ ಡೊಂಬಯ್ಯ ಅರಳ ಸ್ವಾಗತಿಸಿದರು. ಸಹ ಸಂಚಾಲಕ ಸುದರ್ಶನ ಬಜ ವಂದಿಸಿದರು. ದೇವದಾಸ್ ಕಜೆಕಾರು ಕಾರ್ಯಕ್ರಮ ನಿರ್ವಹಿಸಿದರು.

share
Next Story
X