Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಸಹಕಾರಿ ರತ್ನ’ ಪ್ರಶಸ್ತಿ ಪುರಸ್ಕೃತ...

‘ಸಹಕಾರಿ ರತ್ನ’ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿಗೆ ಅಭಿನಂದನೆ

22 Jan 2023 12:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಸಹಕಾರಿ ರತ್ನ’ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿಗೆ ಅಭಿನಂದನೆ

ಉಡುಪಿ, ಜ.22: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ‘ಸಹಕಾರಿ ರತ್ನ ಪ್ರಶಸ್ತಿ’ ಪುರಸ್ಕೃತ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಅಭಿನಂದನೆ ಹಾಗೂ ಸೇವಾ ಚಿಂತನಾ ಕಾರ್ಯಕ್ರಮವನ್ನು ರವಿವಾರ ಉಡುಪಿ ಮಿಷನ್ ಕಾಂಪೌಂಡ್‌ನ ಬಾಸೆಲ್ ಮಿಷನರೀಸ್ ಅಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಮಾರಾಟ ಮಂಡಳಿ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಮುಳುಗುತ್ತಿರುವ ಸಹಕಾರಿ ಸಂಸ್ಥೆಯನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುವುದರೊಂದಿಗೆ ತಾನೂ ಬಹು ಎತ್ತರಕ್ಕೆ ಬೆಳೆಯ ಬಹುದು ಎಂಬುದನ್ನು ಜಯಕರ ಶೆಟ್ಟಿ ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ. ಅತ್ಯುತ್ತಮ ಕಾರ್ಯವೈಖರಿ, ಶ್ರದ್ಧೆ, ಪರಿಶ್ರಮದ ಮೂಲಕ ಸೊಸೈಟಿಯ ಸರ್ವತೋಮುಖ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕರ್ತವ್ಯದಲ್ಲಿ ಛಲ, ಶ್ರದ್ಧೆ, ಕಠಿನ ಪರಿಶ್ರಮ, ಪ್ರಾಮಾಕತೆ, ಬದ್ಧತೆ ಮೈಗೂಡಿಸಿಕೊಂಡಾಗ ಯಶಸ್ಸು ಸಾಸಬಹುದು ಎಂಬುದನ್ನು ತನ್ನ ಜೀವನದಲ್ಲಿ ಕಂಡುಕೊಂಡಿದ್ದೇನೆ. ಆಡಳಿತ ಮಂಡಳಿ, ಸಿಬಂದಿ ವರ್ಗ, ಠೇವಣಿದಾರರು, ಗ್ರಾಹಕರ ಹಾಗೂ ಅಭಿವೃದ್ಧಿಗೆ ಕಾರಣರಾದ ಸರ್ವರ ಪೂರ್ಣ ಸಹಕಾರದಿಂದ ಸಂಸ್ಥೆಯ ಬೆಳವಗೆಗೆ ಕಾರಣವಾಯಿತೇ ಹೊರತೂ ಒಬ್ಬ ವ್ಯಕ್ತಿಯಿಂದಲ್ಲ ಎಂದರು.

ಜಯಕರ ಶೆಟ್ಟಿ ಅವರ ‘ಜಯಪಥ’ ಅಭಿನಂದನ ಗ್ರಂಥವನ್ನು ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು. ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಕರ್ನಿರೆ ಹರೀಶ ಶೆಟ್ಟಿ, ಹಿರಿಯ ಸಹಕಾರಿ ಟಿ.ಶಂಭು ಶೆಟ್ಟಿ, ಸಹಕಾರಿ ಸಂಘಗಳ ಲೆಕ್ಕಪರಿಶೋಧನ ಉಪನಿರ್ದೇಶಕ ಗಣೇಶ್ ಮಯ್ಯ ಶುಭಾಸಂಸನೆಗೈದರು.

2022ನೇ ಸಾಲಿನ ‘ಸಹಕಾರಿ ರತ್ನ ಪ್ರಶಸ್ತಿ’ ಪುರಸ್ಕೃತರಾಗಿರುವ ಮಹಾಲಕ್ಷ್ಮೀ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ ಅವರನ್ನು ವಿಶೇಷವಾಗಿ ಸಮ್ಮಾನಿಸಲಾಯಿತು. ಲಯನ್ಸ್ ಗವರ್ನರ್ ಎಂ.ಕೆ. ಭಟ್, ಬಾಸೆಲ್ ಮಿಷನರೀಸ್ ಚರ್ಚ್‌ನ ಸೈಮನ್ ಅವರನ್ನು ಅಭಿನಂದಿಸ ಲಾಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಭಿನಂದನ ಸಮಿತಿ ಸಂಚಾಲಕ ಪುರುಷೋತ್ತಮ ಪಿ.ಶೆಟ್ಟಿ, ಶ್ವೇತಾ ಜಯಕರ ಶೆಟ್ಟಿ, ಶ್ರಮ್ಯಾ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್ ಪ್ರಾಸ್ತಾವಿಕ ಮಾತನಾಡಿದರು. ಸೊಸೈಟಿಯ ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಸ್ವಾಗತಿಸಿದರು. ಸಮ್ಮಾನ ಪತ್ರವನ್ನು ಪ್ರಸನ್ನ ಶೆಟ್ಟಿ, ಸೇವಾ ಚಿಂತನ ಪತ್ರವನ್ನು ನವೀನ್ ಕೆ. ವಾಚಿಸಿದರು. ಶಾಖಾ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ದಯಾನಂದ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X