ಸರ್ವಧರ್ಮ ಸಮನ್ವಯತೆ ಕಾಂಗ್ರೆಸ್‌ನ ಮೂಲ ಮಂತ್ರ: ಡಾ.ಜಿ.ಪರಮೇಶ್ವರ್

ಉಳ್ಳಾಲ, ಜ.22: ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಅನಗತ್ಯ ಧ್ವನಿ ಎತ್ತುವುದರಿಂದ ರಾಜ್ಯ ದಲ್ಲಿ ಸಾಮರಸ್ಯ, ಸಹೋದರತೆಗೆ ತೊಡಕಾಗುತ್ತಿದೆ. ಈ ಧ್ವನಿ ಕಡಿಮೆಯಾಗಬೇಕು. ಧಾರ್ಮಿಕ ಅಲ್ಪಸಂಖ್ಯಾತರಿಗೆ ನೋವಾ ಗುವಂತಹ ಅನಗತ್ಯ ಧ್ವನಿ ಸಮಾಜದಲ್ಲಿ ಆತಂಕಕ್ಕೂ ಕಾರಣವಾಗುತ್ತದೆ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ರವಿವಾರ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇದೇ ವೇಳೆ ಪರಮೇಶ್ವರ್‌ರನ್ನು ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಶಾಲು ಹೊದಿಸಿ ಗೌರವಿಸಿದರು. ದರ್ಗಾ ಉಪಾಧ್ಯಕ್ಷ ಮೋನು ಇಸ್ಮಾಯೀಲ್, ಕೆಪಿಸಿಸಿ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷ ಪ್ರೊ.ರಾಧಾಕೃಷ್ಣ, ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಹುಸೈನ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್, ಅಭಿಲಾಶ್ ಮತ್ತಿತರರು ಉಪಸ್ಥಿತರಿದ್ದರು.
Next Story