Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಬಿ' ಟೀಮ್ ಭಾಗವತಿಕೆ ಇಲ್ಲಿಗೇ...

'ಬಿ' ಟೀಮ್ ಭಾಗವತಿಕೆ ಇಲ್ಲಿಗೇ ನಿಲ್ಲಿಸಿದರೆ ಉತ್ತಮ, ಇಲ್ಲವಾದರೆ...: ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಎಚ್ಚರಿಕೆ

23 Jan 2023 1:50 PM IST
share
ಬಿ ಟೀಮ್ ಭಾಗವತಿಕೆ ಇಲ್ಲಿಗೇ ನಿಲ್ಲಿಸಿದರೆ ಉತ್ತಮ, ಇಲ್ಲವಾದರೆ...: ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಎಚ್ಚರಿಕೆ

ಬೆಂಗಳೂರು: 'ಬಿ' ಟೀಮ್ ಭಾಗವತಿಕೆ ಇಲ್ಲಿಗೇ ನಿಲ್ಲಿಸಿದರೆ ಉತ್ತಮ.ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ನೀವೇ ಹೊಣೆ.ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳು ದುರ್ಬಲವಾದರೆ ಆ ಪಾಪಕ್ಕೂ ನೀವೇ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವ ಟ್ವೀಟ್ ಮಾಡಿರುವ ಅವರು,  'ಬಿ' ಟೀಮ್ ಯಾವ ಪಕ್ಷ ಎಂಬ ಬಹಿರಂಗ ಚರ್ಚೆಗೆ ನಾನು ಸಿದ್ದ. ವಿಧಾನಸೌಧದ ಮುಂದೆಯೇ ಚರ್ಚೆ ನಡೆಯಲಿ. ನಿಮ್ಮ ಸಿದ್ದಪುರಷರ ಜತೆ ನೀವೂ ಬನ್ನಿ. ಸಮಯ, ದಿನಾಂಕ ನಾನು ನಿಗದಿ ಮಾಡಲಾ? ಅಥವಾ ನೀವು ಮಾಡುತ್ತೀರಾ? ಉತ್ತರಕ್ಕೆ ಕಾಯುತ್ತಿರುತ್ತೇನೆ' ಎಂದು ಹೇಳಿದ್ದಾರೆ. 

'ಹೊಸ ಬಾಟಲಿಗೆ ಹಳೆಯ ಮದ್ಯ':

'ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರೇ.. ಹೊಸ ಬಾಟಲಿಗೆ ಹಳೆಯ ಮದ್ಯ ತುಂಬುವ ವ್ಯರ್ಥದ ಕೆಲಸ ಏಕೆ? ರಾಜ್ಯ ಕಾಂಗ್ರೆಸ್ ಪಕ್ಷದ ಸಿದ್ದಹಸ್ತರ ಪ್ರಭಾವಕ್ಕೆ ಒಳಗಾಗಿ ಸವಕಲು ಸುಳ್ಳುಗಳನ್ನೇ ಹೇಳುವ ಕರ್ಮ ನಿಮಗೇಕೆ ಬಂತು? ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಮ್ ಎಂದು ಹಾಸನದಲ್ಲಿ ದೂರಿದ್ದಿರಿ. ಪಾಪ..  ನಿಮ್ಮನ್ನು ಪ್ರಜ್ಞಾವಂತ ರಾಜಕಾರಣಿ ಎಂದು ಭಾವಿಸಿದ್ದೆ. ನೀವು ನೋಡಿದರೆ ' ಸಿದ್ಧಭಾಷಣ' ವನ್ನೇ ನಕಲು ಮಾಡಿ ನಗೆಪಾಟಲಿಗೆ ಒಳಗಾಗಿದ್ದಿರಿ. ಸತ್ಯ ಅರಿತು ಮಾತನಾಡಿದ್ದರೆ ನಾನೂ ಖುಷಿ ಪಡುತ್ತಿದ್ದೆ' ಎಂದು ಟೀಕಿಸಿದ್ದಾರೆ. 

''ಬಿಜೆಪಿ ಬಾಲಂಗೋಚಿಯನ್ನು ಪಕ್ಕದಲ್ಲೇ ಕೂರಿಸಿಕೊಂಡು ಜೆಡಿಎಸ್ ಅನ್ನು ಬಿಜೆಪಿ ಬಿ ಟೀಮ್ ಎಂದು ದೂರಿದ್ದೀರಿ, ನಿಜಕ್ಕೂ ಆ ಬಿ ಟೀಮ್ ಯಾವುದು? ಆ ಟೀಮ್ ಕ್ಯಾಪ್ಟನ್ ಯಾರು? ಎನ್ನುವುದನ್ನು ನಿಮ್ಮ ಪಕ್ಕದಲ್ಲೇ ಇದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕೇಳಬಾರದಿತ್ತೆ? ಅರಬರೆ ಆಲಾಪದಿಂದ ಅಪಹಾಸ್ಯಕ್ಕೆ ಈಡಾಗಿದ್ದಿರಿ' ಎಂದು ಹೇಳಿದ್ದಾರೆ. 

'ಜೆಡಿಎಸ್, ಬಿಜೆಪಿ ಬಿ ಟೀಮ್ ಎಂದು 2018ರಲ್ಲಿ ಹಾಸನದಲ್ಲಿ ರಾಹುಲ್ ಗಾಂಧಿ ಅವರಿಂದ ಹೇಳಿಸಿದ್ದ ನಿಮ್ಮ ಪಕ್ಷದ ಶಾಸಕಾಂಗ ನಾಯಕರು, 2008ರಲ್ಲಿ ಮಾಡಿದ್ದೇನು? ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕೆಳಗಿಸಲು ಬಿಜೆಪಿಯ ಯಡಿಯೂರಪ್ಪ ಅವರ ಜತೆ ನೇರ ಡೀಲ್ ಕುದುರಿಸಿದ್ದವರ ಬಗ್ಗೆ ಗೊತ್ತಿಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ. 

'ದಲಿತ ನಾಯಕ ಖರ್ಗೆ ಅವರನ್ನು ಸಿಎಲ್ ಪಿ ನಾಯಕ ಸ್ಥಾನದಿಂದ ಅಪಮಾನಕರವಾಗಿ ಇಳಿಸಲು ಹಾಲಿ ಸಿಎಲ್ ಪಿ ನಾಯಕ ಮಹಾಶಯರು ಹಣೆದ ' ಸಿದ್ದವ್ಯೂಹ 'ದ ಬಗ್ಗೆ ನಿಮಗೆ ಮಾಹಿತಿ ಇಲ್ಲ. ಹೋಗಲಿ.. ' ಸಿದ್ದಪೀಡಿತ ' ನಿಮ್ಮ ಎಐಸಿಸಿ ಅಧ್ಯಕ್ಷರನ್ನೇ ಒಮ್ಮೆ ಕೇಳಿ ತಿಳಿದುಕೊಳ್ಳಿ ಸುರ್ಜೇವಾಲ ಅವರೇ' ಎಂದು ಹೇಳಿದ್ದಾರೆ. 

'2008ರಲ್ಲಿ ಉಪ ಚುನಾವಣೆ ನಡೆದ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಯಡಿಯೂರಪ್ಪರಿಂದ ಕೋಟಿ ಕೋಟಿ ಥೈಲಿ ಪಡೆದದ್ದು, ಆ ಹಣವನ್ನು ಯಾರು ಪಡೆದು ಯಾರಿಗೆ ತಂದುಕೊಟ್ಟರು ಎನ್ನುವ ಕುರಿತೂ ಮಾಹಿತಿ ಪಡೆದುಕೊಳ್ಳಿ ಸುರ್ಜೇವಾಲರೇ.. ಅನೇಕ ಸಲ ಈ ಬಗ್ಗೆ ಪ್ರಶ್ನಿಸಿದ್ದೇನೆ. ಉತ್ತರವೇ ಇಲ್ಲ. ಕೊನೆಪಕ್ಷ ನೀವಾದರೂ ಉತ್ತರಿಸಿ.' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 

ಇಷ್ಟೆಲ್ಲಾ ಮಾತೃಪಕ್ಷ ದ್ರೋಹ ಮಾಡಿದ ನಿಮ್ಮ ಶಾಸಕಾಂಗ ಪಕ್ಷದ ನಾಯಕರ ನೇತೃತ್ವದಲ್ಲಿ 5 ವರ್ಷ ಆಡಳಿತ ನಡೆಸಿದ ನಿಮ್ಮ 'ಪಕ್ಷ, 2018ರಲ್ಲಿ 78 ಕ್ಷೇತ್ರಗಳಿಗೆ ಕುಸಿಯಿತೇಕೆ? ಬಿಜೆಪಿ ಜತೆ ಅವರು ನಡೆಸುತ್ತಿರುವ ' ಮುಂದುವರಿದ ಕಳ್ಳಾಟ ' ಏನೆಂದು ನಿಮಗೆ ಮಾಹಿತಿ ಇಲ್ಲವೆ?  2018ರಲ್ಲಿ ನಿಮ್ಮವರೇ ನಮ್ಮ ಮನೆಗೆ ಬಂದು ಗೊಗರೆದು ಮೈತ್ರಿ ಸರಕಾರ ಮಾಡಿದರು. ಆಮೇಲೆ, ಶುರುವಾಗಿದ್ದೇ ಕುತ್ಸಿತ ರಾಜಕಾರಣ.  ಬಾಂಬೆಗೆ ಹೋದವರ ಬೆನ್ನ ಹಿಂದೆ ಇದ್ದ ಆ ನಿಗೂಢ ಬೇತಾಳ ಯಾವುದು? ನಿಮ್ಮ ಶಾಸಕಾಂಗ ಪಕ್ಷದ ನಾಯಕರು ಮಾಡಿದ್ದೇನು? ' ಎಂದು ಕಿಡಿಕಾರಿದ್ದಾರೆ. 

ಧರ್ಮಸ್ಥಳದ ಸಿದ್ಧವನ, ಕಾವೇರಿ ನಿವಾಸದಲ್ಲಿ ನನ್ನ ವಿರುದ್ಧ ಹಾಗೂ ನಿಮ್ಮ ಕೇಂದ್ರ ನಾಯಕರೇ ರಚಿಸಿದ ಮೈತ್ರಿ ಸರಕಾರ ಕೆಡವಲು ಮಹೂರ್ತ ಇಟ್ಟವರು ಯಾರು? ಇಡೀ ರಾಜ್ಯವನ್ನೇ ಕೋಮುದಳ್ಳುರಿಯಲ್ಲಿ ಬೇಯುವಂತೆ ಮಾಡಿದ ಬಿಜೆಪಿ @BJP4Karnataka ಸರಕಾರ ಬರಲು ಮೂಲ ಕಾರಣಕರ್ತರೇ ನಿಮ್ಮ ಶಾಸಕಾಂಗ ಪಕ್ಷದ ನಾಯಕರು. ಅಪರೇಷನ್ ಕಮಲವೆಂಬ ಕೆಟ್ಟ ಕೊಳಕು ರಾಜಕೀಯಕ್ಕೆ ' ಸಿದ್ದಪುರುಷ ' ರೂ ಇವರೇ. ಈಗ ಹೇಳಿ, ಬಿಜೆಪಿ ಬಿ ಟೀಮ್ ಯಾವ ಪಕ್ಷ? ಅದರ ಕ್ಯಾಪ್ಟನ್ ಯಾರು? ಎಂದು ಸುರ್ಜೇವಾಲಾ ಅವರನ್ನ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಾನ್ಯ ಶ್ರೀ @rssurjewala ಅವರೇ.. ಹೊಸ ಬಾಟಲಿಗೆ ಹಳೆಯ ಮದ್ಯ ತುಂಬುವ ವ್ಯರ್ಥದ ಕೆಲಸ ಏಕೆ? ರಾಜ್ಯ @INCKarnataka ಪಕ್ಷದ ಸಿದ್ದಹಸ್ತರ ಪ್ರಭಾವಕ್ಕೆ ಒಳಗಾಗಿ ಸವಕಲು ಸುಳ್ಳುಗಳನ್ನೇ ಹೇಳುವ ಕರ್ಮ ನಿಮಗೇಕೆ ಬಂತು? 1/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 23, 2023

ಬಿ ಟೀಮ್ ಭಾಗವತಿಕೆ ಇಲ್ಲಿಗೇ ನಿಲ್ಲಿಸಿದರೆ ಉತ್ತಮ.ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ನೀವೇ ಹೊಣೆ.ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳು ದುರ್ಬಲವಾದರೆ ಆ ಪಾಪಕ್ಕೂ ನೀವೇ ಹೊಣೆ. 11/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 23, 2023
share
Next Story
X