ಮಾಸ್ತಿಕಟ್ಟೆ | ಮಾಸ್ತಿಕಟ್ಟೆಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

ಉಳ್ಳಾಲ, ಜ.23: ಉಳ್ಳಾಲ ರಸ್ತೆ ಅಭಿವೃದ್ಧಿ ಗೆ ಈಗಾಗಲೇ ಎರಡು ಕೋಟಿ ರೂ. ಮಂಜೂರು ಮಾಡಲಾಗಿದೆ. ಎರಡು ಬೀದಿಗಳಲ್ಲಿ ರಸ್ತೆ ವಿಸ್ತರಣೆ, ಚರಂಡಿ ಫುಟ್ ಪಾತ್ ನಿರ್ಮಿಸಲಾಗುವುದು ಎಂದು ಶಾಸಕ, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಾಸ್ತಿಕಟ್ಟೆಯಿಂದ ಓವರ್ ಬ್ರಿಡ್ಜ್ ವರೆಗೆ ನಡೆಯುವ ಚರಂಡಿ ನಿರ್ಮಾಣ ಕಾಮಗಾರಿಗೆ ಸೋಮವಾರ ಮಾಸ್ತಿಕಟ್ಟೆ ಬಳಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸ್ಥಳೀಯರಾದ ಬಾವಾಕ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಉಳ್ಳಾಲ ನಗರ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ, ಸುರೇಶ್ ಭಟ್ನಗರ, ನಗರಸಭೆ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಸದಸ್ಯರಾದ ಮುಹಮ್ಮದ್ ಮುಕ್ಕಚ್ಚೇರಿ, ಯೂಸುಫ್ ಉಳ್ಳಾಲ, ಅಶ್ರಫ್, ಜಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.
Next Story