Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಧ್ಯಮ ಸ್ವಾತಂತ್ರ್ಯದ ಬೆಳಕು ಚೆಲ್ಲುವ...

ಮಾಧ್ಯಮ ಸ್ವಾತಂತ್ರ್ಯದ ಬೆಳಕು ಚೆಲ್ಲುವ ಕಾರ್ಯವನ್ನು ಮುಂದುವರಿಸುವೆ: ಅಮೆರಿಕ

ಬಿಬಿಸಿ ದಿ ಮೋದಿ ಕ್ವಶ್ಚನ್’ ಸಾಕ್ಷ್ಯಚಿತ್ರ ವಿವಾದಕ್ಕೆ ಪ್ರತಿಕ್ರಿಯೆ

24 Jan 2023 12:11 PM IST
share
ಮಾಧ್ಯಮ ಸ್ವಾತಂತ್ರ್ಯದ ಬೆಳಕು ಚೆಲ್ಲುವ ಕಾರ್ಯವನ್ನು ಮುಂದುವರಿಸುವೆ: ಅಮೆರಿಕ
ಬಿಬಿಸಿ ದಿ ಮೋದಿ ಕ್ವಶ್ಚನ್’ ಸಾಕ್ಷ್ಯಚಿತ್ರ ವಿವಾದಕ್ಕೆ ಪ್ರತಿಕ್ರಿಯೆ

‌ವಾಶಿಂಗ್ಟನ್,ಜ.26: 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ವಿವಾದಾತ್ಮಕ ಸಾಕ್ಷ್ಯಚಿತ್ರದ ಬಗ್ಗೆ  ಬುಧವಾರ  ಪ್ರತಿಕ್ರಿಯಿಸಿರುವ ಅಮೆರಿಕದ ವಿದೇಶಾಂಗ ಇಲಾಖೆಯು ಜಗತ್ತಿನಾದ್ಯಂತ ಮಾಧ್ಯಮ ಸ್ವಾತಂತ್ರ್ಯದ  ಮಹತ್ವದ ಬಗ್ಗೆ ಬೆಳಕುಚೆಲ್ಲುವ ಕಾರ್ಯವನ್ನು  ತಾನು ಮುಂದುವರಿಸುವುದಾಗಿ ಅಮೆರಿಕದ ವಿದೇಶಾಂಗ ತಿಳಿಸಿದೆ.

ಬಿಬಿಸಿ ವಿವಾದಾತ್ಮಕ ‘ದಿ ಮೋದಿ ಕ್ವಶ್ಚನ್’ (The Modi Question) ಸಾಕ್ಷ್ಯಚಿತ್ರವನ್ನು  ನಿಷೇಧಿಸುವುದು ಮಾಧ್ಯಮ ಸ್ವಾತಂತ್ರ್ಯ ಅಥವಾ ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರವೇ ಎಂಬ  ಸುದ್ದಿಗಾರರ ಪ್ರಶ್ನೆಗೆ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ (Ned Price) ಹೀಗೆ ಉತ್ತರಿಸಿದ್ದಾರೆ.

ಬಿಬಿಸಿ ನಿರ್ಮಾಣದ ‘ದಿ ಮೋದಿ ಕ್ವಶ್ಚನ್’ (The Modi Question) ಸಾಕ್ಷ್ಯ ಚಿತ್ರವು, 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಪೊಲೀಸರು ಹಿಂಸಾಚಾರ ನಿಯಂತ್ರಿಸುವುದಕ್ಕೆ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ  ತಡೆಯೊಡ್ಡಿದ್ದರು ಎಂದು  ಆರೋಪಿಸಿದೆ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕಾರಣವಾದ ನಿರ್ಭೀತಿಯ ವಾತಾವರಣ ನಿರ್ಮಾಣವಾಗಿದ್ದಕ್ಕೆ ನರೇಂದ್ರ ಮೋದಿಯವರೇ ನೇರ ಹೊಣೆಗಾರರಾಗಿದ್ದಾರೆಂದು  ಬ್ರಿಟಿಶ್ ಸರಕರಾವು ಕಳುಹಿಸಿದ್ದ ತಂಡವೊಂದು ವರದಿ ಮಾಡಿತ್ತೆಂದು ಆಪಾದಿಸಿತ್ತು.

‘‘ಮಾನವಹಕ್ಕುಗಳಂತೆ ಪ್ರಜಾಪ್ರಭುತ್ವಕ್ಕೆ ಕೊಡುಗೆ ನೀಡುವಂತಹ  ಅಭಿವ್ಯಕ್ತಿ ಸ್ವಾತಂತ್ರ, ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯದಂತಹ ಪ್ರಜಾಸತ್ತಾತ್ಮಕ ತತ್ವಗಳ ಮಹತ್ವದ ಬಗ್ಗೆ ಬೆಳಕುಚೆಲ್ಲುವುದನ್ನು ನಾವು ಮುಂದುವರಿಸುತ್ತೇವೆ’’ ಎಂದು ಪ್ರೈಸ್ ತಿಳಿಸಿದರು. ‘‘ ಈ ಅಂಶದ ಆಧಾರದಲ್ಲಿಯೇ ನಾವು ಜಗತ್ತಿನಾದ್ಯಂತ ನಮ್ಮ ಬಾಂಧವ್ಯಗಳನ್ನು ರೂಪಿಸಿದ್ದೇವೆ. ಖಂಡಿತವಾಗಿಯೂ ಭಾರತದಲ್ಲಿಯೂ ನಾವು ಇದೇ ಅಂಶವನ್ನು  ಆಧರಿಸಿದ್ದೇವೆ ಎಂದವರು ಹೇಳಿದರು.

ಜನವರಿ 21ರಂದು  ಕೇಂದ್ರ ಸರಕಾರವು   ಬಿಬಿಸಿ ವಿವಾದಾತ್ಮಕ ಸಾಕ್ಷ್ಯ ಚಿತ್ರದ ಲಿಂಕ್ಗಳನ್ನು ತೆಗೆದುಹಾಕುವಂತೆ ಯೂಟ್ಯೂಬ್ ಹಾಗೂ ಟ್ವಿಟ್ಟರ್‌ ಗೆ ಆದೇಶಿಸಿತ್ತು.

ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ (BBC Documentary) ಪ್ರದರ್ಶನಕ್ಕೆ ದಿಲ್ಲಿಯ ಜೆಎನ್ ಯು , ಜಾಮಿಯಾ ಮಿಲಿಯಾ ವಿವಿಗಳಲ್ಲಿ ಅಡ್ಡಿಪಡಿಸಿದ ಘಟನೆಗಳು ವರದಿಯಾದ ಬೆನ್ನಲ್ಲೇ ಅಮೆರಿಕ ಈ ಹೇಳಿಕೆ ನೀಡಿದೆ.  ಸಾಕ್ಷ್ಯಚಿತ್ರದ  ಪ್ರದರ್ಶನದ ಆಯೋಜಿಸಿದ್ದಕ್ಕಾಗಿ ಕನಿಷ್ಛಠ 12 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಬುಧವಾರ ಜಾಮಿಯಾ ಮಿಲಿಯಾ ವಿವಿಯಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಲು ಸಾಧ್ಯವಾಗಲಿಲ್ಲವೆಂದು ವರದಿಗಳು ತಿಳಿಸಿವೆ.

ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಮುನ್ನ ಜೆಎನ್ಯು ವಿಶ್ವವಿದ್ಯಾನಿಲಯಕ್ಕೆ ವಿದ್ಯುತ್ ಹಾಗೂ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು ಹಾಗೂ ತಮ್ಮ ಕಲ್ಲು ತೂರಾಟ ನಡೆಸಲಾಗಿತ್ತೆಂದು ವಿವಿಯ ವಿದ್ಯಾರ್ಥಿಗಳು ಆರೋಪಿಸಿದೆ. ಸಾಕ್ಷ್ಯಚಿತ್ರವನ್ನು ನೋಡಲು ಸಾಧ್ಯವಾಗದಂತೆ ಮಾಡುವ ಉದ್ದೇಶದಿಂದ ವಿದ್ಯುತ್ ಹಾಗೂ ಇಂಟರ್ನೆಟ್ಸಂಪರ್ಕವನ್ನು ಕಡಿದುಹಾಕಲಾಗಿತ್ತೆಂದು ಅವರು ಆರೋಪಿಸಿದ್ದಾರೆ.

ಹೈದರಾಬಾದ್ ವಿವಿಯಲ್ಲಿ  ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿ 

ಸಂಘಪರಿವಾರದ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಕಾರ್ಯಕರ್ತರು ವಿವಿ.ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

share
Next Story
X