Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೊಗರಿ ಬೆಳೆಗಾರರಿಗೆ ಪರಿಹಾರ ನೀಡಲು...

ತೊಗರಿ ಬೆಳೆಗಾರರಿಗೆ ಪರಿಹಾರ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

24 Jan 2023 1:34 PM IST
share
ತೊಗರಿ ಬೆಳೆಗಾರರಿಗೆ ಪರಿಹಾರ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

ಕಲಬುರಗಿ,ಜ. 23: ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಮಂಗಳವಾರ ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ. ಕೃಷಿ ಇಲಾಖೆ, ಆರ್ಥಿಕ ಇಲಾಖೆ  ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಘೋಷಣೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ಬೆಳೆ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.

ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ಧ: ವಿಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಗಾಣಗಾ ಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ರೂ. ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಕಾಳಹಸ್ತಿಯಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ಧ ಮಾಡಿದ್ದಾರೆ. ಬರುವ ಬಜೆಟ್ ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ  ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.

ಪ್ರಧಾನಿಗಳಿಂದ ಏರೋ ಇಂಡಿಯಾ ಶೋ ಉದ್ಘಾಟನೆ: ಕಲಬುರಗಿಗೆ ಆಗಮಿಸಿದ ಕೂಡಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು,  ರಕ್ಷಣಾ ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಫೆ 13ರಿಂದ ಪ್ರಾರಂಭವಾಗುವ ಏರೋ ಇಂಡಿಯಾ ಶೋ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು, 1996 ರಿಂದ ಬೆಂಗಳೂರಿನ ಏರ್ ಫೋರ್ಸ್ ನಿಲ್ದಾಣದಲ್ಲಿ  ನಿರಂತರವಾಗಿ ಕರ್ನಾಟಕ ಆತಿಥ್ಯ ವಹಿಸಿದೆ. ಈ ಬಾರಿ ಅತಿ ದೊಡ್ಡ ಏರ್ ಶೋ ನಡೆಯಲಿದ್ದು, ಅತಿ ಹೆಚ್ವು ಜನ ಭಾಗವಹಿಸುತ್ತಿದ್ದಾರೆ. ಗಣ್ಯರು, ಏರೋಸ್ಪೇಸ್ ಮುಖ್ಯಸ್ಥರು, ಕಂಪನಿಗಳ ಸಿಇಒಗಳು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಭಾರತೀಯ, ಕರ್ನಾಟಕ ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಏರೋಸ್ಪೇಸ್ ಕಂಪನಿಗಳ ವಸ್ತುಪ್ರದರ್ಶನವಿದೆ. ಸಾರ್ವಜನಿಕರು ನೋಡಲು ಏರ್  ಷೋ ಕೂಡ ಇರಲಿದೆ. ಇಂತಹ ಬೃಹತ್ ಶೋ ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.  ಅದರ ಪೂರ್ವಭಾವಿ ಸಿದ್ಧತೆಗಳ ವೀಡಿಯೋ ಸಂವಾದ ನಡೆಯಿತು ಎಂದರು.

ತನಿಖೆ ನಡೆಯಲಿದೆ: ಪಿ.ಎಸ್.ಐ ನೇಮಕಾತಿಗೆ ಸಂಬಂಧಿಸಿದಂತೆ ಆರೋಪಿ ರುದ್ರೇಗೌಡ  ತನಿಖಾಧಿಕಾರಿಗಳು ಡಿವೈಎಸ್ಪಿ ಶಂಕರಗೌಡರು 3 ಕೋಟಿ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರೋಪಿ ಹೇಳಿಕೆ ಬಗ್ಗೆ ಮಾಹಿತಿ ಅಲ್ಲಿಯ ತನಿಖಾಧಿಕಾರಿ ಬಳಿ ಇರುತ್ತದೆ. ಮೊದಲು ಅವರ ಮೇಲಿನ ಆರೋಪ, ಕೋರ್ಟಿನ ಆದೇಶ, ನ್ಯಾಯಾಂಗ ಬಂಧನ ಎಲ್ಲಾ ಕಾನೂನಿನ ಪ್ರಕಾರ ತನಿಖೆ ಯಾಗುತ್ತದೆ. ಅದೇ ರೀತಿ ಆತ ನೀಡಿರುವ ಸಾಕ್ಷ್ಯಾಧಾರಗಳ ಮೇಲೆ ಅಧಿಕಾರಿಯ ಮೇಲೂ ತನಿಖೆ ನಡೆಯಲಿದೆ ಎಂದರು.

ವ್ಯಕ್ತಿಗತ ಹೇಳಿಕೆಗೆ ಉತ್ತರಿಸೊಲ್ಲ: ಶೃಂಗೇರಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರಿಗೆ ನೋವಾಗುತ್ತದೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ನಾನು ಪ್ರತಿಯೊಂದು  ವ್ಯಕ್ತಿಗತ ಹೇಳಿಕೆಗೆ ಉತ್ತರಿಸಲು ಸಾಧ್ಯವಿಲ್ಲ ಎಂದರು.

share
Next Story
X