Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: 2 ಸಾವಿರ ರೂ., ಮದ್ಯದ ಬಾಟಲಿ...

ಮಡಿಕೇರಿ: 2 ಸಾವಿರ ರೂ., ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ

24 Jan 2023 7:59 PM IST
share
ಮಡಿಕೇರಿ: 2 ಸಾವಿರ ರೂ., ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ

ಮಡಿಕೇರಿ ಜ.24 : ವ್ಯಕ್ತಿಯೊಬ್ಬರಿಂದ 2 ಸಾವಿರ ರೂ. ನಗದು ಮತ್ತು 1 ಬಾಟಲಿ ಮದ್ಯ ಸ್ವೀಕರಿಸುತ್ತಿದ್ದ ಸಂದರ್ಭ ಮಡಿಕೇರಿ ಸರ್ವೇ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸರ್ವೇಯರ್ ಆಗಿರುವ ಮಾದಪ್ಪ ಎಂಬುವವರೇ ವಿಚಾರಣೆಗೊಳಪಟ್ಟಿರುವ ಆರೋಪಿ. 2 ಸಾವಿರ ನಗದು ಹಾಗೂ 1 ಮದ್ಯದ ಬಾಟಲಿಯನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.

ಚೇರಂಬಾಣೆ ಬಾಡಗ ಗ್ರಾಮದ ವ್ಯಕ್ತಿಯೊಬ್ಬರು 2 ಸರ್ವೇ ನಂಬರ್ ಗಳಲ್ಲಿ ಕಾಫಿ ತೋಟ ಹೊಂದಿದ್ದು, ಮನೆ ನಿರ್ಮಿಸುವ ಸಲುವಾಗಿ ನಿವೇಶನ ಮಾಡಲು ಮುಂದಾಗಿದ್ದರು. ಈ ಸ್ಥಳದಲ್ಲಿ 3 ಬೀಟೆ ಮರಗಳಿದ್ದು, ಅದನ್ನು ತೆರವು ಮಾಡುವುದು ಮತ್ತು ನಿವೇಶನವನ್ನಾಗಿ ಪರಿವರ್ತಿಸಲು ಸ್ಥಳದ ಸರ್ವೇ ನಡೆಸಬೇಕಿತ್ತು. ಈ ಹಿನ್ನೆಲೆಯಲ್ಲಿ ಕಳೆದ 6 ತಿಂಗಳ ಹಿಂದೆ ಮಡಿಕೇರಿ ಸರ್ವೇ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಮಾತ್ರವಲ್ಲದೇ ಸರ್ವೇಗಾಗಿ ಸರಕಾರ ನಿಗದಿಪಡಿಸಿದ್ದ ಶುಲ್ಕವನ್ನೂ ಪಾವತಿ ಮಾಡಿದ್ದರು. 

ಈ ವೇಳೆ ಸರ್ವೇಯರ್ ಮಾದಪ್ಪ ಅವರು ರೂ.10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಜಾಗದ ಮಾಲೀಕರು 10 ಸಾವಿರ ರೂ. ನಗದು ನೀಡಿದ್ದರು. ಬಳಿಕವೂ ಕೆಲಸ ನಿಧಾನಗತಿಯಲ್ಲಿ ಸಾಗಿದ್ದು ಈ ವೇಳೆ ಸರ್ವೇಯರ್ ಮಾದಪ್ಪ ಅವರನ್ನು ಸಂಪರ್ಕಿಸಿದಾಗ ಹೆಚ್ಚುವರಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದು, ಆ ಹಣವನ್ನೂ ನೀಡಲಾಗಿತ್ತು. ಹೀಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸವಾಗಿರಲಿಲ್ಲ. ಮಾತ್ರವಲ್ಲದೇ ಹೆಚ್ಚುವರಿ 2 ಸಾವಿರ ನಗದು ಮತ್ತು 1 ಮದ್ಯದ ಬಾಟಲಿ ನೀಡುವಂತೆ ಸರ್ವೇಯರ್ ಮಾದಪ್ಪ ಅರ್ಜಿದಾರರನ್ನು ಒತ್ತಾಯಿಸಿದ್ದರು. ಇದರಿಂದ ಮನನೊಂದ ಅರ್ಜಿದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು ಎಂದು ಆರೋಪಿಸಲಾಗಿದೆ. 

ಇಂದು ಅರ್ಜಿದಾರರಿಂದ ಆರೋಪಿ ಮಾದಪ್ಪ ಅವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ 2 ಸಾವಿರ ರೂ. ನಗದು ಮತ್ತು 1 ಮದ್ಯದ ಬಾಟಲಿಯನ್ನು ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.

ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕೊಡಗು ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್, ವೃತ್ತನಿರೀಕ್ಷಕ ಲೋಕೇಶ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

share
Next Story
X