Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜ. 26-29ರ ವರೆಗೆ ಕದ್ರಿ...

ಮಂಗಳೂರು: ಜ. 26-29ರ ವರೆಗೆ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

125 ಮಳಿಗೆ, 10,000ಕ್ಕೂ ಅಧಿಕ ಗಿಡಗಳ ಪ್ರದರ್ಶನ

24 Jan 2023 9:01 PM IST
share
ಮಂಗಳೂರು: ಜ. 26-29ರ ವರೆಗೆ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ
125 ಮಳಿಗೆ, 10,000ಕ್ಕೂ ಅಧಿಕ ಗಿಡಗಳ ಪ್ರದರ್ಶನ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸಿರಿ ತೋಟಗಾರಿಕೆ ಸಂಘ ಮಂಗಳೂರು ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ ಇದೇ ಜ.26ರಿಂದ 29ರ ವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ಸುದ್ದಿಗೋಷ್ಠಿಯಲ್ಲಿಂದು  ತಿಳಿಸಿದರು.

ಜ.26ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಹೂಗಳ ಮಾದರಿ ವಿನ್ಯಾಸ ಉದ್ಘಾಟಿಸಲಿದ್ದಾರೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ತರಕಾರಿ ಪ್ರಾತ್ಯಕ್ಷತೆ ಉದ್ಘಾಟಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಯು.ಟಿ. ಖಾದರ್, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮನಾಥ್ ಎ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್,  ಮಹಾನಗರಪಾಲಿಕೆ ಮೇಯರ್ ಜಯಾನಂದ ಅಂಚನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ನ ಅಧ್ಯಕ್ಷ ಸೀತಾರಾಮ ಗಾಣಿಗ ಹಾಲಾಡಿ ಹಾಗೂ ಕದ್ರಿ ವಾರ್ಡ್ ನ ಕಾರ್ಪೋರೇಟರ್ ಶಕೀಲ ಕಾವ ಭಾಗವಹಿಸಲಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನವಾಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ತೋಟಗಾರಿಕೆ ಇಲಾಖೆಯ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಭಾಸ್ಕರ ಎನ್, ತೋಟಗಾರಿಕೆ ಇಲಾಖೆಯ ನೋಡಲ್ ಅಧಿಕಾರಿಗಳೂ ಆಗಿರುವ ತೋಟಗಾರಿಕೆ ಜಂಟಿ ನಿರ್ದೇಶಕ ಶಕೀಲ್ ಅಹಮ್ಮದ್ ಹಾಗೂ ತೋಟಗಾರಿಕೆ ಜಂಟಿ ನೀರ್ದೆಶಕರಾದ ನಾಗರಾಜ್ ಎಂ.ಭಾಗವ ಹಿಸಲಿದ್ದಾರೆ ಎಂದು ಎಚ್.ಆರ್. ನಾಯಕ್ ತಿಳಿಸಿದ್ದಾರೆ.

ತೋಟಗಾರಿಕೆ ಚಟುವಟಿಕೆಗಳು ,ಮೌಲ್ಯ ವರ್ಧನೆ, ಪರ್ಯಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಪರಿಸರ ಸಂರಕ್ಷಣೆ ಸಾರ್ವಜನಿಕ ನೈರ್ಮಲ್ಯ, ಗ್ರಾಮ, ನಗರಗಳನ್ನು ಸುಂದರಗೊಳಿಸುವುದು,  ತೋಟಗಾರಿಕೆ ಉದ್ದಿಮೆಯನ್ನು ಮುಂದಕ್ಕೆ ಕೊಂಡಯುವ ಉದ್ದೇಶವನ್ನು ಈ ಮೂಲಕ ಹೊಂದಲಾಗಿದೆ ಎಂದು ಎಚ್.ಆರ್. ನಾಯಕ್ ತಿಳಿಸಿದ್ದಾರೆ.

ಫಲಪುಷ್ಪ ಪ್ರದರ್ಶನದಲ್ಲಿರುವ ವಿಶೇಷತೆಗಳು:

ಹೂವಿನಿಂದ ಅಲಂಕರಿಸಿದ “ಬಿಂದಿಗೆಯಿಂದ ನೀರು ಹರಿಯುವ ವಿನ್ಯಾಸದ ಮಾದರಿಯನ್ನು ಆಕರ್ಷಣಿಯವಾಗಿ ಅಲಂಕಾರಗೊಳಿಸಿ ಪ್ರದರ್ಶಿಸಲಾಗುವುದು. 

ತೋಟಗಾರಿಕೆ ಇಲಾಖಾ ವತಿಯಿಂದ ಬೆಳೆಸಲಾಗಿರುವ ವಿವಿಧ ಜಾತಿಯ ಆಕರ್ಷಣೀಯವಾದ ಸುಮಾರು 10,000 ಸೂರ್ಯಕಾಂತಿ (ಹಳದಿ, ಕೆಸರಿ) ಇತರೆ ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.

ವಿವಿಧ ರೀತಿಯ ಗಿಡಗಳನ್ನು ಕುಂಡಗಳಲ್ಲಿ ಪ್ರದರ್ಶನಕ್ಕೆ ಇಡಲಾಗುವುದು.

ತರಕಾರಿ ಕೆತ್ತನೆ, ವಿವಿಧ ಮಾದರಿಯ ಕಟ್ ಫ್ಲವರ್ ಜೋಡಣೆ ಮಾಡಿ ಪ್ರದರ್ಶನಕ್ಕೆ ಇಡಲಾಗುವುದು.

ಕ್ಷೇತ್ರ/ನರ್ಸರಿಗಳಲ್ಲಿ ಬೆಳೆಸಿರುವ ವಿವಿಧ ಜಾತಿಯ ಗಿಡಗಳನ್ನು ಮತ್ತು ತರಕಾರಿ ಸಸಿಗಳ ಮಾರಾಟಕ್ಕೆ ಮಳಿಗೆಯನ್ನು ತೆರೆಯಲಾಗುವುದು.

ವಿವಿಧ ಜಾತಿಯ ತರಕಾರಿ ಪ್ರಾತ್ಯಕ್ಷತೆಯನ್ನು ಪ್ರದರ್ಶಿಸಲಾಗುವುದು.

ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. 

ಸಾರ್ವಜನಿಕರು ಬೆಳೆದಿರುವ ಬೋನ್ಸಾಯಿ, ಅಂಥೋರಿಯಂ, ಆರ್ಕಿಡ್ ಗಿಡಗಳು ಇನ್ನಿತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.
ಸರಕಾರಿ ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಆಧುನಿಕ ತಂತ್ರಜ್ಞಾನದ ಮಾಹಿತಿ ನೀಡಲು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುವುದು.

ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 125 ಮಳಿಗೆಗಳನ್ನು ತೆರೆಯಲಾಗಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಉತ್ಪನ್ನಗಳು, ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಹಾಗೂ ಉದ್ದಿಮೆದಾರರಿಂದ ಸಾರ್ವಜನಿಕರು ಖರೀದಿಸಲು ಹಾಗೂ ವೀಕ್ಷಿಸಲು ಅವಕಾಶವಿರುತ್ತದೆ. 

ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ವಯಸ್ಕರಿಗೆ 20, ಮಕ್ಕಳಿಗೆ 10ರೂ.ಗಳನ್ನು ನಿಗದಿ ಪಡಿಸಲಾಗಿದೆ, ಎಲ್ಲಾ ಶಾಲಾ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ ಮತ್ತು ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ.

share
Next Story
X