Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ...

ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ

24 Jan 2023 10:49 PM IST
share
ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ

ಮಂಗಳೂರು: ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟ ನಗರದ ಯೋಧ ಮುರಳೀಧರ್ ಬಿ.ಎಸ್. (37) ಅವರ ಪಾರ್ಥಿವ ಶರೀರವನ್ನು ಮಂಗಳವಾರ ವಿಮಾನದ ಮೂಲಕ ತರಲಾಗಿದೆ.

ಮೃತ ಯೋಧ ಪತ್ನಿ ಮತ್ತು ಮಗು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಪದವು ಗ್ರಾಮದ ಶಕ್ತಿನಗರ ಮೊಗರೋಡಿ ನಿವಾಸಿಯಾಗಿದ್ದ ಮುರಳೀಧರ್ 2007ರಲ್ಲಿ ಸಶಸ್ತ್ರ ಸೀಮಾ ಪಡೆಗೆ (ಎಸ್‌ಎಸ್‌ಬಿ) ಸೇರಿದ್ದರು.

ಆರು ತಿಂಗಳ ಹಿಂದೆ ಊರಿಗೆ ಬಂದಿದ್ದ ಅವರು ವರ್ಷದ ಹಿಂದೆ ಅಗಲಿದ್ದ ತನ್ನ ತಾಯಿಯ ಮೊದಲ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವ ಕೆಲವೇ ದಿನಗಳಲ್ಲಿ ಊರಿಗೆ ಮರಳುವವರಿದ್ದರು. ಅದಕ್ಕಾಗಿ 20 ದಿನಗಳ ರಜೆಯೂ ಮಂಜೂರಾಗಿತ್ತು. ಊರಿಗೆ ಮರಳಲು ತಯಾರಿ ನಡೆಸುತ್ತಿದ್ದಾಗಲೇ ಹೃದಯಾಘಾತವಾಗಿದೆ ಎಂದು ಮುರಳೀಧರರ ಕುಟುಂಬದ ಮೂಲಗಳು ತಿಳಿಸಿವೆ.

ಯೋಧ ಮುರಳೀಧರ್‌ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ಮದನ್‌ಮೋಹನ್ ಮತ್ತಿತರರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದರು.

ಪಾರ್ಥಿವ ಶರೀರವನ್ನು ಇದೀಗ ಎ.ಜೆ. ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಜ.25ರಂದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

share
Next Story
X