Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಶ ಸಂಕಲ್ಪದೊಂದಿಗೆ ಹೆಚ್ಚುವರಿಯಾಗಿ...

ದಶ ಸಂಕಲ್ಪದೊಂದಿಗೆ ಹೆಚ್ಚುವರಿಯಾಗಿ ಕಾಂಗ್ರೆಸ್‌ನ 3 ಸಂಕಲ್ಪ: ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ

25 Jan 2023 8:46 PM IST
share
ದಶ ಸಂಕಲ್ಪದೊಂದಿಗೆ ಹೆಚ್ಚುವರಿಯಾಗಿ ಕಾಂಗ್ರೆಸ್‌ನ 3 ಸಂಕಲ್ಪ: ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ

ಮಂಗಳೂರು: ಮೂರು ದಿನಗಳ ಹಿಂದೆ ಪ್ರಜಾಧ್ವನಿ ಯಾತ್ರೆಯ ವೇಳೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಶ ಸಂಕಲ್ಪ ಯೋಜನೆ ಜಾರಿಗೊಳಿಸುವುದಾಗಿ ಪ್ರಕಟಿಸಿದ್ದ ಕಾಂಗ್ರೆಸ್ ಮತ್ತೆ ಈ ಪಟ್ಟಿಗೆ  ಮೂರು ಯೋಜನೆಗಳನ್ನು ಸೇರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಂಗಳೂರಿನಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖರ ಸಭೆಯ ಬಳಿಕ ಹೊಸ ಮೂರು ಸಂಕಲ್ಪಗಳ ಬಗ್ಗೆ ಪ್ರಕಟಿಸಿದರು.

ಮೈಕ್ರೋ ಬ್ಯಾಕ್‌ವರ್ಡ್ ಕಮ್ಯುನಿಟಿ ಡೆವಲಪ್‌ಮೆಂಟ್ ಬೋರ್ಡ್ ರಚಿಸಿ ಕಡಿಮೆ ಜನಸಂಖ್ಯೆ ಹೊಂದಿರುವ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ವರ್ಷಕ್ಕೆ 250 ಸೇರಿದಂತೆ ಐದು ವರ್ಷಕ್ಕೆ 1,250 ಕೋಟಿ ರೂ. ಒದಗಿಸಲಾಗುವುದು. ಈ ಯೋಜನೆಯಲ್ಲಿ ಕರಾವಳಿ ಕರ್ನಾಟಕದ  ಅತೀ ಹಿಂದುಳಿದ ಸಮುದಾಯವಾಗಿರುವ ಗಟ್ಟಿ, ಕುಲಾಲ್, ಆಚಾರ್ಯ, ಕೋಟೆ, ಮಡಿವಾಲ, ದೇವಾಡಿಗ, ಭಂಡಾರಿ, ಗಾಣಿಗ, ಕೊಟ್ಟಾರಿ, ಜೋಗಿ , ತೀಯಾ, ಯಾದವ, ಶೆಟ್ಟಿಗಾರ್, ಶೇರಿಗಾರ್, ಕುಡುಬಿ ಸೇರಿದಂತೆ ಇತರ ಹಿಂದುಳಿದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನದೊಳಗೆ, ಬ್ಯಾರಿ, ಕ್ರಿಶ್ಚಿಯನ್ ಮತ್ತು ಜೈನ ಸಮುದಾಯಗಳಿಗೆ ಅವರ ವಿಶಿಷ್ಟ ಸಾಂಸ್ಕೃತಿ ಸಂಪ್ರದಾಯಗಳನ್ನು ಪರಿಗಣಿಸಿ ಪ್ರತ್ಯೇಕ ಕೋಟಾವನ್ನು ಒದಗಿಸಲು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಡಿಸಿ ಮನ್ನಾ ಲ್ಯಾಂಡ್‌ ಅನ್ನು ಆದ್ಯತೆ ಮೇರೆ ದುರ್ಬಲರಿಗೆ ಹಂಚಿಕೆ ಮಾಡಲಾಗುವುದು ಎಂದು ಪ್ರಕಟಿಸಿದರು.

ಸಿಎಂ ಸೇರಿದಂತೆ ಐವರ ವಿರುದ್ಧ ಪೊಲೀಸರಿಗೆ ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಓಲೈಕೆ ಮಾಡಲು ಅಕ್ರಮ ಎಸಗುತ್ತಿದ್ದಾರೆಂದು ಆರೋಪಿಸಿ  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಐವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ರಾಜ್ಯ ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರು ನೀಡಿರುವುದಾಗಿ ಸುರ್ಜೇವಾಲ ತಿಳಿಸಿದ್ದಾರೆ.

ಪಿಎಸ್‌ಐ ಹಗರಣ ಮುಚ್ಚಿ ಹಾಕಲು ಯತ್ನ: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ, ಇದರಲ್ಲಿ ಈಗಾಗಲೇ ಎಡಿಜಿಪಿ ಶ್ರೇಣಿಯ ಅಧಿಕಾರಿಯನ್ನು ಬಂಧಿಸಲಾಗಿದೆ. ಹಗರಣದ ತನಿಖಾಧಿಕಾರಿ ಪ್ರಕರಣವನ್ನು ಮುಚ್ಚಿ ಹಾಕಲು ಮೂರು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದಾರೆ. ಆರ್.ಡಿ.ಪಾಟೀಲ್ ಬರೆದಿರುವ ಈ ಪತ್ರದಲ್ಲಿ ತನಿಖಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸ್ಪಷ್ಟವಾಗಿ ಆರೋಪಿಸಿದ್ದಾರೆ. ಕೆಲವು  ಶಾಸಕರು ಇದರಲ್ಲಿ ಶಾಮೀಲಾಗಿದ್ದಾರೆ  ಎಂದರು.

ಕರಾವಳಿ ಧ್ವನಿ ಯಾತ್ರೆ: ಕರಾವಳಿ  ಜನಧ್ವನಿ ಯಾತ್ರೆ : ಕರ್ನಾಟಕದ ಜನತೆಗೆ ಕಾಂಗ್ರೆಸ್‌ನ  ಯೋಜನೆಗಳನ್ನು  ತಿಳಿಸಲು ,  ಅಸಮರ್ಥ ಮತ್ತು ಒಡೆದು ಆಳುವ  ಬಿಜೆಪಿ ಸರಕಾರದ  ವೈಫಲ್ಯಗಳನ್ನು ಎತ್ತಿ ಹಿಡಿಯಲು ಮತ್ತು ಶಾಂತಿ ಮತ್ತು ಏಕತೆಯ ಸಂದೇಶವನ್ನು ಸಾರಲು ಕರಾವಳಿ ಧ್ವನಿಯಾತ್ರೆಯನ್ನು ಫೆಬ್ರವರಿ 5ರಿಂದ  ಸುಳ್ಯದಿಂದ ಪ್ರಾರಂಭಿಸಲಾಗುವುದು ಎಂದು ಸುರ್ಜೆವಾಲ ತಿಳಿಸಿದರು.

ಮೊದಲ ಹಂತದ ಕರಾವಳಿ ಜನಧ್ವನಿ ಯಾತ್ರೆ ಫೆ.5ರಿಂದ 9ರ ತನಕ ನಡೆಯಲಿದೆ. ಬಳಿಕ ಎರಡನೇ ಹಂತದ  ಯಾತ್ರೆ ಫೆ.15ರಿಂದ ಮಾರ್ಚ್ 10ರ ತನಕ ನಡೆಯಲಿದೆ.
30 ದಿನಗಳ ಅವಧಿಯಲ್ಲಿ  ಈ ಯಾತ್ರೆಯ ನೇತೃತ್ವವನ್ನು ವಿಧಾನ ಪರಿಷತ್‌ನ ವಿಪಕ್ಷ ನಾಯಕ  ಬಿ.ಕೆ.ಹರಿಪ್ರಸಾದ್,  ವಿಧಾನ ಸಭೆಯ ವಿಪಕ್ಷ ಉಪನಾಯಕ  ಯು ಟಿ ಖಾದರ್ , ಶಾಸಕ  ಆರ್.ವಿ.ದೇಶಪಾಂಡೆ,  ಒಬಿಸಿ ವಿಭಾಗದ ನಾಯಕ  ಮಧು ಬಂಗಾರಪ್ಪ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಮಾನಾಥ್ ರೈ, ಮೋಟಮ್ಮ, ವಿಪ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ವಹಿಸಲಿದ್ದಾರೆ ಎಂದರು.

ಕಳೆದ ಚುನಾವಣೆಯ ವೇಳೆ ಪರೇಶ್ ಮೇಸ್ತಾ ಪ್ರಕರಣವನ್ನು ಮುಂದಿಟ್ಟು  ಬಿಜೆಪಿ ರಾಜಕೀಯ ಲಾಭ ಪಡೆಯಿತು.  ಸಿಬಿಐ ವರದಿ ಬಳಿಕ ಬಿಜೆಪಿಯ ಬಣ್ಣ ಬಯಲಾಗಿದೆ. ಬಿಜೆಪಿ  ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡುವ ಬಗ್ಗೆ ಮಾತನಾಡುವುದಿಲ್ಲ. ಆದರೆ ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ದುರ್ಬಲ ಸಿಎಂ ಮತ್ತು ಅವರ ಅಸಮರ್ಥ ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರಕ್ಕೆ  ದುಷ್ಕರ್ಮಿಗಳಿಗೆ ಮುಕ್ತ ಹಸ್ತವನ್ನು ನೀಡಿದ್ದಾರೆ, ಬಿಜೆಪಿ ಸರಕಾರದ  ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕರಾವಳಿಯಲ್ಲಿ 26 ಶಾಸಕರ ಪೈಕಿ ಭ್ರಷ್ಟ ಬಿಜೆಪಿ ಸರಕಾರದ   23 ಶಾಸಕರಿದ್ದರೂ ಈ ಭಾಗದ ಅಭಿವೃದ್ಧಿಯ ಬಗ್ಗೆ ಯೋಚಿಸಿಲ್ಲ. ಅವರು ಕರಾವಳಿ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳಲ್ಲಿ ಶೇ 90ರಷ್ಟು ಭರವಸೆಯನ್ನು  ಈಡೇರಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ನ್ಯಾಯಸಮ್ಮತವಲ್ಲದ ಬಿಜೆಪಿ ಸರಕಾರವು ಹೊಣೆಗಾರಿಕೆಯಿಂದ ಮತ್ತು ಆಡಳಿತದಲ್ಲಿ ತನ್ನ ಸಂಪೂರ್ಣ ವೈಫಲ್ಯದಿಂದ ಮರೆಮಾಡಲು ದ್ವೇಷ ಮತ್ತು ಕೋಮುವಾದವನ್ನು ಬಳಸುತ್ತದೆ. ಭ್ರಷ್ಟ ಬಿಜೆಪಿ ಮತ್ತು ಅವರ ದುರ್ಬಲ ಸಿಎಂ ಕರಾವಳಿ ಜನರ ಭಾವನೆಗಳೊಂದಿಗೆ ಆಟವಾಡಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ , ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ,ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ಕೆ.ಹರೀಶ್ ಕುಮಾರ್,  ಮಾಜಿ ಸಚಿವರಾದ  ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯ ಚಂದ್ರ ಜೈನ್, ಪಕ್ಷದ ಧುರೀಣರಾದ ಐವನ್ ಡಿ ಸೋಜ,  ಡಾ.ಪುಷ್ಪಾ ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.

share
Next Story
X