Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಜಿಪ್ಟ್ ಅಧ್ಯಕ್ಷ ಸಿಸಿ ಜೊತೆ ಪ್ರಧಾನಿ...

ಈಜಿಪ್ಟ್ ಅಧ್ಯಕ್ಷ ಸಿಸಿ ಜೊತೆ ಪ್ರಧಾನಿ ಮೋದಿ ಮಾತುಕತೆ: ಐದು ಒಪ್ಪಂದಗಳಿಗೆ ಸಹಿ

25 Jan 2023 10:10 PM IST
share
ಈಜಿಪ್ಟ್ ಅಧ್ಯಕ್ಷ ಸಿಸಿ ಜೊತೆ ಪ್ರಧಾನಿ ಮೋದಿ ಮಾತುಕತೆ: ಐದು ಒಪ್ಪಂದಗಳಿಗೆ ಸಹಿ

ಹೊಸದಿಲ್ಲಿ,ಜ.25: ಈಜಿಪ್ಟ್ ಜೊತೆಗಿನ ದ್ವಿಪಕ್ಷೀಯ ಸಂಬಂಧಗಳನ್ನು ವ್ಯೆಹಾತ್ಮಕ ಪಾಲುದಾರಿಕೆಗೆ ಏರಿಸಲು ಭಾರತವು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಬುಧವಾರ ಇಲ್ಲಿ ಪ್ರಕಟಿಸಿದರು.

ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ(Abdel Fattah El-Sisi) ಅವರೊಂದಿಗೆ ವ್ಯಾಪಕ ಮಾತುಕತೆಗಳ ಬಳಿಕ ಹೈದರಾಬಾದ್ ಹೌಸ್ ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ,‘ಭಾರತ-ಈಜಿಪ್ಟ್ ವ್ಯೂಹಾತ್ಮಕ ಪಾಲುದಾರಿಕೆಯಡಿ ರಾಜಕೀಯ,ಭದ್ರತೆ,ಆರ್ಥಿಕ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಹಕಾರಕ್ಕಾಗಿ ದೀರ್ಘಾವಧಿಯ ಮಾರ್ಗಸೂಚಿ ಚೌಕಟ್ಟನ್ನು ರೂಪಿಸಲು ನಾವು ನಿರ್ಧರಿಸಿದ್ದೇವೆ ’ ಎಂದು ಪ್ರಕಟಿಸಿದರು.

ಸೈಬರ್ ಭದ್ರತೆ,ಸಂಸ್ಕೃತಿ,ಮಾಹಿತಿ ತಂತ್ರಜ್ಞಾನ,ಯುವ ವಿಷಯಗಳು ಮತ್ತು ಪ್ರಸಾರ ಕ್ಷೇತ್ರಗಳಲ್ಲಿ ಐದು ಒಪ್ಪಂದಗಳಿಗೆ ಭಾರತ ಮತ್ತು ಈಜಿಪ್ಟ್ ಸಹಿ ಹಾಕಿದವು.ಭಾರತ ಮತ್ತು ಈಜಿಪ್ಟ್ ನಡುವೆ ರಾಜತಾಂತ್ರಿಕ ಸ್ಥಾಪನೆಗಳ 75ನೇ ವರ್ಷದ ಸ್ಮರಣಾರ್ಥ ಅಂಚೆಚೀಟಿಗಳ ಬಿಡುಗಡೆಗೆ ಉಭಯ ನಾಯಕರು ಸಾಕ್ಷಿಯಾದರು.

ರೈಲ್ವೆ,ಸಂವಹನ ಹಾಗೂ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ ಹಾಗೂ ಈಜಿಪ್ಟ್ ನ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಹ್ಮದ್ ಸಮಿಹ್ ತಲಾತ್(Ahmed Samih Talaat) ಅವರು ಸ್ಮರಣಾರ್ಥ ಅಂಚೆಚೀಟಿಯನ್ನು ವಿನಿಮಯಿಸಿಕೊಂಡರು.

‘ನಮ್ಮ ರಕ್ಷಣಾ ಉದ್ಯಮಗಳ ನಡುವಿನ ಸಹಕಾರವನ್ನು ಇನ್ನಷ್ಟು ಬಲಗೊಳಿಸಲು ಹಾಗೂ ಭಯೋತ್ಪಾದನೆ ನಿಗ್ರಹ ಮಾಹಿತಿ ಮತ್ತು ಬೇಹು ವಿನಿಮಯವನ್ನು ಹೆಚ್ಚಿಸಲೂ ನಾವು ಇಂದಿನ ಮಾತುಕತೆಗಳಲ್ಲಿ ನಿರ್ಧರಿಸಿದ್ದೇವೆ ’ ಎಂದು ಮೋದಿ ನುಡಿದರು.

ಗಡಿಯಾಚೆಯ ಭಯೋತ್ಪಾದನೆಯ ನಿಯಂತ್ರಣಕ್ಕೆ ಭಾರತ ಮತ್ತು ಈಜಿಪ್ಟ್ ದೃಢವಾದ ಕ್ರಮವನ್ನು ತೆಗೆದುಕೊಳ್ಳಲಿವೆ ಎಂದು ತಿಳಿಸಿದ ಅವರು,‘ಭಾರತ ಮತ್ತು ಈಜಿಪ್ಟ್ ಭಯೋತ್ಪಾದನೆಯ ಬಗ್ಗೆ ಕಳವಳವನ್ನು ಹೊಂದಿವೆ. ಗಡಿಯಾಚೆಯ ಭಯೋತ್ಪಾದನೆಯನ್ನು ನಿಯಂತ್ರಿಸಲು ಬಲವಾದ ಕ್ರಮಗಳು ಅಗತ್ಯವಾಗಿವೆ ಎನ್ನುವುದನ್ನು ಉಭಯ ದೇಶಗಳು ಒಪ್ಪಿಕೊಂಡಿವೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಉಭಯ ದೇಶಗಳ ಅಗತ್ಯಗಳನ್ನು ಪೂರೈಸಲು ನಾವು ಒಂದಾಗಿ ಶ್ರಮಿಸಿದ್ದೇವೆ ’ ಎಂದರು.

ಮುಂದಿನ ಐದು ವರ್ಷಗಳಲ್ಲಿ ಭಾರತ ಮತ್ತು ಈಜಿಪ್ಟ್ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು 12 ಶತಕೋಟಿ ಡಾ.ಗಳಿಗೆ ಹೆಚ್ಚಿಸಲು ಉಭಯ ದೇಶಗಳು ನಿರ್ಧರಿಸಿವೆ ಎಂದು ತಿಳಿಸಿದ ಮೋದಿ,‘ಉಭಯ ದೇಶಗಳ ನಡುವೆ ಜಂಟಿ ತರಬೇತಿ ಕವಾಯತು ಮತ್ತು ಸಾಮರ್ಥ್ಯ ನಿರ್ಮಾಣ ಹೆಚ್ಚಿದೆ. ಉಗ್ರವಾದ ಮತ್ತು ಮೂಲಭೂತೀಕರಣವನ್ನು ಹರಡಲು ನೆರವಾಗುವ ಸೈಬರ್ಸ್ಪೇಸ್ನ ದುರುಪಯೋಗವನ್ನು ತಡೆಯಲೂ ನಾವು ಪರಸ್ಪರ ಸಹಕರಿಸಲಿದ್ದೇವೆ. ಕೋವಿಡ್ ಮತ್ತು ಉಕ್ರೇನ್ ಬಿಕ್ಕಟ್ಟಿನಿಂದಾಗಿ ವ್ಯತ್ಯಯಗೊಂಡಿರುವ ಪೂರೈಕೆ ಸರಪಳಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ ’ಎಂದರು.

‘ಭಾರತ ಮತ್ತು ಈಜಿಪ್ಟ್ ಎರಡು ಅತ್ಯಂತ ಹಳೆಯ ನಾಗರಿಕತೆಗಳಾಗಿವೆ. ನಮ್ಮ ಉಭಯ ದೇಶಗಳ ನಡುವೆ ವ್ಯಾಪಾರ ಸಂಬಂಧಗಳ ಇತಿಹಾಸವಿದೆ. ಕಳೆದ ಕೆಲವು ವರ್ಷಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳು ಇನ್ನಷ್ಟು ಗಾಢಗೊಂಡಿವೆ. ಈ ವರ್ಷ ನಡೆಯಲಿರುವ ಜಿ-20 ಸಭೆಗೆ ವಿಶೇಷ ಅತಿಥಿಯಾಗಿ ಈಜಿಪ್ಟ್ನ್ನು ಆಹ್ವಾನಿಸಲಾಗಿದೆ’ ಎಂದು ಮೋದಿ ಹೇಳಿದರು.

‘2015ರಲ್ಲಿ ನ್ಯೂಯಾರ್ಕ್ ನಲ್ಲಿ ನಾನು ಮೋದಿಯವರನ್ನು ಭೇಟಿಯಾಗಿದ್ದೆ ಮತ್ತು ನನಗೆ ಅವರಲ್ಲಿ ಸಂಪೂರ್ಣ ವಿಶ್ವಾಸವಿತ್ತು. ಅವರು ತನ್ನ ದೇಶವನ್ನು ಮುಂದಕ್ಕೊಯ್ಯುತ್ತಾರೆ ಎನ್ನುವುದು ನನಗೆ ತಿಳಿದಿತ್ತು. ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಗೊಳಿಸಲು ಪ್ರಧಾನಿ ಮೋದಿಯವರನ್ನು ನಾನು ಕೈರೋಕ್ಕೆ ಆಹ್ವಾನಿಸಿದ್ದೇನೆ ಎಂದು ಸಿಸಿ ಹೇಳಿದರು.

ಇದಕ್ಕೂ ಮುನ್ನ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮೋದಿ ಸಿಸಿಯವರನ್ನು ಸ್ವಾಗತಿಸಿದರು. ಇದೇ ವೇಳೆ ಈಜಿಪ್ಟ್ ಅಧ್ಯಕ್ಷರಿಗೆ ಗೌರವ ರಕ್ಷೆಯನ್ನು ನೀಡಲಾಯಿತು.

ಮಂಗಳವಾರ ಮೂರು ದಿನಗಳ ಭೇಟಿಗಾಗಿ ದಿಲ್ಲಿಗೆ ಆಗಮಿಸಿರುವ ಸಿಸಿ ಗುರುವಾರ ನಡೆಯಲಿರುವ ಗಣರಾಜ್ಯ ದಿನ ಪರೇಡ್ನಲ್ಲಿ ಮುಖ್ಯ ಅತಿಥಿಯಾಗಿರಲಿದ್ದಾರೆ. ಇದೇ ಮೊದಲ ಬಾರಿಗೆ ಗಣರಾಜ್ಯ ದಿನ ಪರೇಡ್ಗೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ. ಈಜಿಪ್ಟ್ನ ಸೇನಾ ತುಕಡಿಯೂ ಪರೇಡ್ನಲ್ಲಿ ಪಾಲ್ಗೊಳ್ಳಲಿದೆ.

share
Next Story
X