74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದರು.
ಶುಭ ಕೋರಿದ ಸಿಎಂ ಬೊಮ್ಮಾಯಿ: ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಿ, ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರಿಂದ ನಾಡಿನ ಜನತೆಗೆ ಸಂದೇಶ.
— CM of Karnataka (@CMofKarnataka) January 26, 2023
#ಗಣರಾಜ್ಯೋತ್ಸವ https://t.co/9zJtO879nX
Next Story









