ಹನೂರು | ರಸ್ತೆ ಅಪಘಾತ; ಪಿಡಿಒಗೆ ಗಂಭೀರ ಗಾಯ

ಹನೂರು (ಚಾಮರಾಜನಗರ ) ಬೈಕ್ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಪಿಡಿಒ ಅಧಿಕಾರಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ.
ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯತ್ ಪಿಡಿಒ ಸೋಮಶೇಖರ್ (42) ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ರಾಮಾಪುರ ಬಳಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಸೋಮಶೇಖರ್ ಅವರನ್ನ ರಾಮಾಪುರ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Next Story





