Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು...

ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಾತಿ ಪಾಲನೆ ಕಡ್ಡಾಯ: ಅಶ್ವತ್ಥನಾರಾಯಣ

26 Jan 2023 3:21 PM IST
share
ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಾತಿ ಪಾಲನೆ ಕಡ್ಡಾಯ: ಅಶ್ವತ್ಥನಾರಾಯಣ

ಬೆಂಗಳೂರು: 2020ರಲ್ಲಿ ಜಾರಿಗೆ ತಂದಿರುವ ತಿದ್ದುಪಡಿ ನಿಯಮಗಳ ಪ್ರಕಾರ ರಾಜ್ಯದ ವಿದ್ಯಾರ್ಥಿಗಳಿಗೆ ಅಖಿಲ ಭಾರತೀಯ ಕೋಟಾ ಹೊರತುಪಡಿಸಿ ಶೇ.25ರಷ್ಟು ಸೀಟುಗಳನ್ನು ಕೊಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಸಚಿವರು ಈ ಸಂಬಂಧವಾಗಿ ಕೆಲದಿನಗಳ ಹಿಂದೆ ಕೂಡ ಪತ್ರ ಬರೆದು, ಸಂಸ್ಥೆಯು ಅಖಿಲ ಭಾರತ ಮಟ್ಟದ  ಮೆರಿಟ್ ಕೋಟಾದಡಿ ಆಯ್ಕೆಯಾದ ರಾಜ್ಯದ ವಿದ್ಯಾರ್ಥಿಗಳನ್ನು ಕೂಡ ಸ್ಥಳೀಯ ಮೀಸಲಿನಡಿ ಪರಿಗಣಿಸಿ, ದಾರಿ ತಪ್ಪಿಸುತ್ತಿರುವುದು ಸಹಜ ನ್ಯಾಯದ ತತ್ವಕ್ಕೆ ವಿರುದ್ಧವಾದುದು ಎಂದು ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಶಾಖಪಟ್ಟಣ, ರಾಯಪುರ, ಕೋಲ್ಕತ್ತ ಮುಂತಾದ ಕಡೆಗಳಲ್ಲಿ ಇರುವ ಇಂತಹುದೇ ಕಾನೂನು ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ರಾಜ್ಯದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ಮೆರಿಟ್ ಕೋಟಾ ಹೊರತುಪಡಿಸಿಯೇ ಆಯಾ ರಾಜ್ಯಗಳ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟುಗಳನ್ನು ಕೊಡಲಾಗುತ್ತಿದೆ. ಇದನ್ನು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಕೂಡ ಅನುಸರಿಸುವುದು ಕಡ್ಡಾಯವಾಗಿದೆ ಎಂದು ಸಚಿವರು ನೆನಪಿಸಿದ್ದಾರೆ.

2022ನೇ ಸಾಲಿನಲ್ಲಿ ಸಂಸ್ಥೆಯಲ್ಲಿ ಒಟ್ಟು 180 ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಲಾಗಿದೆ. ಇದರಲ್ಲಿ 45 ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಸ್ಥಳೀಯ ಮೀಸಲಾತಿ ಅಡಿ ಕೊಡಬೇಕಿತ್ತು. ಆದರೆ ಅಖಿಲ ಭಾರತೀಯ ಮೆರಿಟ್ ಕೋಟಾದಡಿ ಆಯ್ಕೆಯಾಗಿದ್ದ ರಾಜ್ಯದ 13 ವಿದ್ಯಾರ್ಥಿಗಳನ್ನು ಕೂಡ 'ಸ್ಥಳೀಯ ಮೀಸಲಾತಿ' ಅಡಿ ಪರಿಗಣಿಸಿ, ಕೇವಲ 32 ವಿದ್ಯಾರ್ಥಿಗಳಿಗೆ ಮಾತ್ರ ಸ್ಥಳೀಯ ಮೀಸಲಾತಿ ಸೌಲಭ್ಯದಡಿ ಪ್ರವೇಶ ಕೊಟ್ಟಿರುವುದು ಸರಿಯಲ್ಲ. ಇದರಿಂದ ರಾಜ್ಯದ 13 ವಿದ್ಯಾರ್ಥಿಗಳು ಅವಕಾಶ ಕಳೆದುಕೊಂಡಂತಾಗಿದೆ ಎಂದು ಅವರು ವಿವರಿಸಿದ್ದಾರೆ.

2023ರಲ್ಲಿ ಈ ಸಂಸ್ಥೆಯಲ್ಲಿ ಒಟ್ಟು 240 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಈ ಪೈಕಿ 60 ಸೀಟುಗಳನ್ನು ಸ್ಥಳೀಯ ಮೀಸಲಾತಿ ಅಡಿ ರಾಜ್ಯದ ವಿದ್ಯಾರ್ಥಿಗಳಿಗೆ ಕೊಡಬೇಕು. ಈಗಾಗಲೇ ತಾತ್ಕಾಲಿಕ ಆಯ್ಕೆ ಪ್ರಕಟಿಸಿದ್ದಲ್ಲಿ ಆಗಿರುವ ಲೋಪವನ್ನು ಸರಿಪಡಿಸಬೇಕು. ಅಕಸ್ಮಾತ್ ಆಗದಿದ್ದರೆ 'ಸೂಪರ್-ನ್ಯೂಮರಿ' ಮಾನದಂಡವನ್ನು ಪರಿಗಣಿಸಿ, ಆಯ್ಕೆ ಪಟ್ಟಿಯನ್ನು ಪರಿಪ್ಕರಿಸಬೇಕು ಎಂದು ಅವರು ನಿರ್ದೇಶಿಸಿದ್ದಾರೆ.

ಇದಲ್ಲದೆ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಸಂಸ್ಥೆಗೆ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ 22 ಕೋಟಿ ರೂಪಾಯಿ ಅನುದಾನ ನೀಡಿದೆ. ಇದನ್ನು ಸಂಸ್ಥೆಯು ಮರೆಯಬಾರದು. ಹಾಗೆಯೇ ಸ್ಥಳೀಯ ಮೀಸಲಾತಿಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಮತ್ತು ವಕೀಲರ ಸಂಘಗಳು ಎತ್ತಿರುವ ದನಿಯನ್ನು ಕೂಡ ಗಮನಿಸಬೇಕು ಎಂದು ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.

share
Next Story
X