Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಕರ್ತ ನವೀನ್ ಸೂರಿಂಜೆ ಕೃತಿ...

ಪತ್ರಕರ್ತ ನವೀನ್ ಸೂರಿಂಜೆ ಕೃತಿ 'ಕುತ್ಲೂರು ಕಥನ' ಬಿಡುಗಡೆ

ಊರಿನ ನೈಜ ಇತಿಹಾಸ ಪುಸ್ತಕದಲ್ಲಿ ದಾಖಲಾಗಿದೆ: ಹರ್ಷ ಮಂದರ್

26 Jan 2023 6:43 PM IST
share
ಪತ್ರಕರ್ತ ನವೀನ್ ಸೂರಿಂಜೆ  ಕೃತಿ ಕುತ್ಲೂರು ಕಥನ ಬಿಡುಗಡೆ
ಊರಿನ ನೈಜ ಇತಿಹಾಸ ಪುಸ್ತಕದಲ್ಲಿ ದಾಖಲಾಗಿದೆ: ಹರ್ಷ ಮಂದರ್

ಮಂಗಳೂರು: ಪತ್ರಕರ್ತ ನವೀನ್ ಸೂರಿಂಜೆ ಬರೆದ ಕೃತಿ ಕುತ್ಲೂರು ಕಥನವನ್ನು ಖ್ಯಾತ ಚಿಂತಕ ಹರ್ಷ ಮಂದರ್ ಬಿಡುಗಡೆಗೊಳಿಸಿದರು. ಬಿಜ್ಜೋಡಿಯ ಶಾಂತಿ ಕಿರಣ ಸಭಾಂಗಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕೃತಿಯ ಅನವಾರಣಗೊಳಿಸಿದ ಹರ್ಷ ಮಂದರ್ ಅವರು ಈ ಕೃತಿಯನ್ನು ಭಾಷಾ ಸಮಸ್ಯೆ ಕಾರಣದಿಂದಾಗಿ ಓದಲು ಸಾಧ್ಯವಾಗದೆ ಇರುವುದಕ್ಕೆ ಬೇಸರ ಇದೆ. ಆದರೆ ಇದರಲ್ಲಿರುವ ವಿಷಯಗಳನ್ನು ಅರಿತುಕೊಂಡಿದ್ದೇನೆ. ಈ ಕೃತಿ  ಸಂವಿಧಾನ ರಕ್ಷಣೆಗೆ ಸಹಾಯಕವಾಗಿದೆ ಎಂದು ಹೇಳಿದರು.

ಒಂದು ಊರಿನ ನೈಜ ಇತಿಹಾಸ ಈ ಪುಸ್ತಕದಲ್ಲಿ ದಾಖಲಾಗಿದೆ. ಕೃತಿಯಲ್ಲಿರುವ ವಿಠಲ ಮಲೆಕುಡಿಯ, ನವೀನ್ ಸೂರಿಂಜೆ, ದಿನೇಶ್ ಉಳಿಪಾಡಿ, ಮುನೀರ್ ಕಾಟಿಪಳ್ಳ ಇವರೆಲ್ಲ ನಿಜವಾದ ಹೀರೊಗಳು  ಎಂದು ಬಣ್ಣಿಸಿದರು.

ಹಿರಿಯ ವಕೀಲರಾದ  ದಿನೇಶ್ ಹೆಗ್ಡೆ ಉಳೆಪಾಡಿ ಮಾತನಾಡಿ, 'ಕುತ್ಲೂರು ಕಥನ' ಕೇವಲ ಕುತ್ಲೂರು ಊರಿನ ಕಥನವಲ್ಲ, ಬೇರೆ ಊರುಗಳ ಹಕ್ಕುಗಳ ಹೋರಾಟಕ್ಕೆ ಮತ್ತು ಪ್ರಜಾಸತ್ತಾತ್ಮಕವಾಗಿ ಹೋರಾಡಲು ಬಯಸುವ ಎಲ್ಲರಿಗೂ ಪರಿಹಾರ ಪುಸ್ತಕವಾಗಿದೆ ಎಂದರು.

ಒಂದೊಮ್ಮೆ ನಕ್ಸಲ್ ಪೀಡಿತ ಪ್ರದೇಶ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡಿದ್ದ ಕುತ್ಲೂರು ಪ್ರದೇಶಕ್ಕೆ ಹೋಗಬೇಕಾದರೆ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕಾದ ಸ್ಥಿತಿ ಮತ್ತು ಮನೆಯಲ್ಲಿ ಹೆಚ್ಚು ದವಸಧಾನ್ಯಗಳನ್ನು ಇಟ್ಟುಕೊಳ್ಳುವಂತಿರಲಿಲ್ಲ. ಹಕ್ಕುಗಳಿಗಾಗಿ ಧ್ವನಿ ಎತ್ತಿದಾಗ ಅವರ ಮೇಲೆ  ಕೇಸ್ ದಾಖಲಾದರೆ ವಕೀಲರಿಗೂ ನಿಭಾಯಿಸಲು ಕಷ್ಟ ಇತ್ತು ಎಂದು ಹೇಳಿದರು.

ವಿಠಲ ಮಲಕುಡಿಯ ಅವರ ತಾಯಿ ಹೊನ್ನಮ್ಮ, ಮಲೆಕುಡಿಯ ಸಮುದಾಯದ ಮುಖಂಡ ಪೂವಪ್ಪ ಮಲೆಕುಡಿಯ, ಕಾರ್ಮಿಕ ಮುಖಂಡ ವಸಂತ ಆಚಾರ್ಯ, ಪತ್ರಕರ್ತ  ವಿಲ್ಫ್ರೇಡ್ ಡಿ ಸೋಜ,  ಮಂಗಳೂರು ನಗರದ ಮಾಜಿ ಮೇಯರ್ ಅಶ್ರಫ್, ವಿಠಲ ಮಲೆಕುಡಿಯ ಅವರಿಗೆ ಉಪನ್ಯಾಸಕರಾಗಿದ್ದ ಡಾ.ಸಫಿಯಾ ಅವರನ್ನು ಕುತ್ಲೂರು ಕಥನ  ಕೃತಿ ನೀಡಿ ಹರ್ಷ ಮಂದರ್ ಗೌರವಿಸಿದರು.

ದಲಿತ ನಾಯಕ ಎಂ. ದೇವದಾಸ ಅಧ್ಯಕ್ಷತೆ ವಹಿಸಿದ್ದರು.

ಪತ್ರಕರ್ತ ವಿಠಲ ಮಲೆಕುಡಿಯ ಮಾತನಾಡಿ, ಕುತ್ಲೂರು ಗ್ರಾಮದಲ್ಲಿರುವ 30 ಮನೆಗಳ  ಪೈಕಿ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಕ್ಕಾಗಿ ಪ್ರತಿಯೊಂದು ಮನೆಯ  ಕನಿಷ್ಠ ಒಬ್ಬನ ಮೇಲೆ ಕೇಸ್ ಇದೆ. ತಾನು ತೊಂದರೆಗೊಳಗಾದ  ಕಟ್ಟಕಡೆಯ ವ್ಯಕ್ತಿ. ತನ್ನ ಮೇಲೆ ದಾಖಲಾದ ಪ್ರಕರಣದ  ಬಳಿಕ  ಎಎನ್‌ಎಫ್‌ನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಯಿತು. ಪ್ರಜಾಪ್ರಭುತ್ವ ಮಾದರಿ ಹೋರಾಟಗಳಿಂದ ಕುತ್ಲೂರಿನಲ್ಲಿ ಇವತ್ತು ನೆಮ್ಮದಿ ಇದೆ  ಎಂದು ಹೇಳಿದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅವರು ಮಾತನಾಡಿ, ಕುತ್ಲೂರು ಕಥನ ಮನೆ ಮನೆಗೆ ತಲುಪಬೇಕಾಗಿದೆ. ಮುಂದಿನ ವಿಧಾನ ಸಭಾ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು  ಕುತ್ಲೂರು ಕಥನವನ್ನು ಓದಬೇಕಾಗಿದೆ  ಎಂದು ಹೇಳಿದರು.

ಪತ್ರಕರ್ತ ಸಂವರ್ತ ಸಾಹಿಲ್  ಅವರು  ಹರ್ಷ ಮಂದರ್‌ರ ಆಂಗ್ಲ ಭಾಷಣವನ್ನು ಕನ್ನಡಕ್ಕೆ ಅನುವಾದಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಲೇಖಕ ನವೀನ್ ಸೂರಿಂಜೆ ಅವರು ಕುತ್ಲೂರು ಕಥನ ಸಿನೆಮಾ ಅಗಿ ಮೂಡಿಬರಲಿದೆ ಎಂದು ಮಾಹಿತಿ ನೀಡಿದರು.  ಪ್ರಕಾಶಕಿ  ಅಕ್ಷತಾ ಹುಂಚದಕಟ್ಟೆ ಸ್ವಾಗತಿಸಿದರು. ಡಾ. ಜೀವನ್‌ರಾಜ್ ಕುತ್ತಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
Next Story
X