Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ:...

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಎಸ್‌ಎಫ್‌ಐ, ಎಬಿವಿಪಿ ನಡುವೆ ಘರ್ಷಣೆ

27 Jan 2023 7:49 AM IST
share
ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಎಸ್‌ಎಫ್‌ಐ, ಎಬಿವಿಪಿ ನಡುವೆ ಘರ್ಷಣೆ

ಹೈದರಾಬಾದ್: ದಕ್ಷಿಣ ಭಾರತದ ವಿವಿಧ ಕ್ಯಾಂಪಸ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗೆಗಿನ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮುಂದುವರಿದಿದ್ದು, ಇದು ಎಸ್‌ಎಫ್‌ಐ ಮತ್ತು ಎಬಿವಿಪಿ ಕಾರ್ಯಕರ್ತರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

ಗಣರಾಜ್ಯೋತ್ಸವದ ದಿನ ಹೈದ್ರಾಬಾದ್‌ನ ಕೇಂದ್ರಿಯ ವಿವಿ ಕ್ಯಾಂಪಸ್‌ನಲ್ಲಿ ಎಸ್‌ಎಫ್‌ಐ ಒಂದು ವಾರದಲ್ಲಿ ಎರಡನೇ ಬಾರಿ ಈ ಸಾಕ್ಷ್ಯಚಿತ್ರದ ಪ್ರದರ್ಶನ ಆಯೋಜಿಸಿತ್ತು. ಮುನ್ನಾ ದಿನ ರಾತ್ರಿ ಪುದುಚೇರಿ ವಿವಿ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿರೋಧದ ನಡುವೆಯೂ ಕನಿಷ್ಠ ಐದು ಮಂದಿ ಚಿತ್ರ ವೀಕ್ಷಿಸಿದರು. ಈ ಸಂಘರ್ಷದಲ್ಲಿ ಐದು ಮಂದಿಗೆ ಗಾಯಗಳಾಗಿವೆ.

ತಿರುವನಂತಪುರಂನದಲ್ಲಿ ಕೇರಳ ಕಾಂಗ್ರೆಸ್, "ಇಂಡಿಯಾ: ದ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಆರಂಭಿಕ ಭಾಗವನ್ನು ಮತ್ತು ಉತ್ತರಾರ್ಧದ ಭಾಗವನ್ನು  ಷಣ್ಮುಗಂ ಬೀಚ್‌ನಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಿತ್ತು. ಇದಕ್ಕೂ ಮುನ್ನ ಪಕ್ಷದ ಕಾರ್ಯಕರ್ತರು ಹಾಗೂ ಸಿಬ್ಬಂದಿಗಾಗಿ ಪಿಸಿಸಿ ಕೇಂದ್ರ ಕಚೇರಿಯಲ್ಲಿ ಪ್ರದರ್ಶನ ಏರ್ಪಡಿಸಿತ್ತು.

ಸಾರ್ವಜನಿಕರಿಗೆ ಚಿತ್ರ ಪ್ರದರ್ಶನ ಮಾಡಿದ್ದಕ್ಕೆ ಧನಾತ್ಮಕ ಸ್ಪಂದನೆ ವ್ಯಕ್ತವಾಗುದೆ. ಹಲವಾರು ಮಂದಿ ಗುಂಪು ಗುಂಪಾಗಿ ಚಿತ್ರವೀಕ್ಷಣೆಗೆ ಬಂದಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ಇದನ್ನು ಪ್ರದರ್ಶಿಸಲಾಗುತ್ತಿದೆ ಎಂದು ಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಬಾಬು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ಚಿತ್ರ ಪ್ರದರ್ಶನಕ್ಕೆ ಹೈದರಾಬಾದ್ ಕೇಂದ್ರಿಯ ವಿವಿ ಆಡಳಿತ ಅನುಮತಿ ನಿರಾಕರಿಸಿದರೂ, ಎಸ್‌ಎಫ್‌ಐ ಆಯೋಜಿಸಿದ್ದ ಪ್ರದರ್ಶನದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರ ವೀಕ್ಷಣೆ ಮಾಡಿದರು. ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು. ಎಸ್‌ಎಫ್‌ಐ ನಡೆಗೆ ಪ್ರತಿಯಾಗಿ ಇದೇ ಸ್ಥಳದಲ್ಲಿ ’ದ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶನ ಮಾಡುವುದಾಗಿ ಎಬಿವಿಪಿ ಬೆದರಿಕೆ ಹಾಕಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

share
Next Story
X