Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್.ಎಂ.ಕೃಷ್ಣರ ಸಾರ್ವಜನಿಕ ಬದುಕು...

ಎಸ್.ಎಂ.ಕೃಷ್ಣರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ ಬೊಮ್ಮಾಯಿ

27 Jan 2023 11:28 AM IST
share
ಎಸ್.ಎಂ.ಕೃಷ್ಣರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಜ. 27: ಎಸ್.ಎಂ.ಕೃಷ್ಣ ಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.‌ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ  ಅಭಿನಂದಿಸಿದ ನಂತರ ಮಾಧ್ಯಮದವರೊಮದಿಗೆ ಮಾತನಾಡಿದ ಅವರು, ನಾಡು ಕಂಡ ಸೃಜನಶೀಲ, ಸರಳ ಸಜ್ಜನಿಕೆಯ, ಸುರಾಜ್ಯ ನೀಡಿದ, ಉತ್ತಮ ಆಡಳಿತ ವ್ಯವಸ್ಥೆಗೆ ಹೆಸರಾದಂಥ  ಹಲವಾರು ಜನಪರ ಯೋಜನೆಗಳನ್ನು ನೀಡಿರುವ ಎಸ್ ಎಂ ಕೃಷ್ಣ ಅವರಿಗೆ ರಾಷ್ಟ್ರಪತಿಗಳು ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದು ನಮಗೆಲ್ಲಾ, ಸಂತೋಷ, ಆನಂದ, ಅಭಿಮಾನ ಮತ್ತು ಹೆಮ್ಮೆ ತಂದಿದೆ. ಕನ್ನಡ ನಾಡಿನ ಸಾರ್ವಜನಿಕ ವಲಯದಲ್ಲಿ ಉತ್ತಮ ಹಾಗೂ ಗುಣಾತ್ಮಕ ಆಡಳಿತ ನೀಡಿರುವ ವಿಚಾರದಲ್ಲಿ ಅವರಿಗೆ ಪ್ರಶಸ್ತಿ ನೀಡಿರುವುದು ಅತ್ಯಂತ ಯೋಗ್ಯವಾಗಿದೆ ಎಂದರು.

ಜ್ಞಾನಾಧಾರಿತ ಅಭಿವೃದ್ಧಿಗೆ ದೊಡ್ಡ ಕೊಡುಗೆ: ಎಸ್.ಎಂ.ಕೃಷ್ಣರ ಕಾಲದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದ್ದು,  ನಾವು ಯಾರೂ  ಮರೆಯಲು ಸಾಧ್ಯವಿಲ್ಲ. ಹಸಿದ ಹೊಟ್ಟೆಯಲ್ಲಿ ಕಲಿಕೆ ಕಷ್ಟ ಎಂದು ಮನವರಿಕೆ ಮಾಡಿಕೊಂಡು ಮಧ್ಯಾಹ್ನದ ಊಟವನ್ನು ದೊಡ್ಡ ಪ್ರಮಾಣದಲ್ಲಿ ಮಕ್ಕಳಿಗೆ ದಿನನಿತ್ಯ ಒದಗಿಸುವ ಕೆಲಸವನ್ನು  ವ್ಯವಸ್ಥಿತವಾಗಿ ಮಾಡಿದ  ವಿಚಾರವನ್ನು ಯಾರೂ ಮರೆಯುವಂತಿಲ್ಲ ಎಂದು ಅವರು ಹೇಳಿದರು.

ಕಾವೇರಿ ,ಕೃಷ್ಣಾ ವಿಚಾರದಲ್ಲಿ ಅವರು ತೆಗೆದುಕೊಂಡ ನಿಲುವು, ಕೆಲವು ವಿಚಾರಗಳಲ್ಲಿ ಇಡೀ ವ್ಯವಸ್ಥೆಯನ್ನೇ ಎದುರು ಹಾಕಿಕೊಂಡು ತೆಗೆದುಕೊಂಡ ರೀತಿ, ರೈತಪರ ಹೋರಾಟ, ಜ್ಞಾನಾಧಾರಿತ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಅವರು ದೊಡ್ಡ ಕಾಣಿಕೆ ನೀಡಿದ್ದಾರೆ. ಐ.ಟಿ, ಬಿಟಿ ಕೈಗಾರಿಕೆಗಳು ದೊಡ್ಡ ಪ್ರಮಾಣದಲ್ಲಿ ಬೆಂಗಳೂರಿನಲ್ಲಿ ಬೆಳೆಸಿದ್ದಾರೆ ಅದರ ಮೂಲ ಬೀಜಾಂಕುರ, ಬೆಂಬಲ  ನೀಡಿ ಬೆಳೆಸಿದ್ದು ಎಸ್.ಎಂ ಕೃಷ್ಣ ಅವರು. ಎಲ್ಲ ರಂಗದಲ್ಲೂ ಕೂಡ ಉತ್ತಮ ಆಡಳಿತ, ಉತ್ತಮ ಕಾರ್ಯಕ್ರಮ, ಜನಪರ, ನಾಡಿನ ಪರ ಗಟ್ಟಿಯಾದ ನಿಲುವು , ಇದೆಲ್ಲ ಒಬ್ಬರೇ ವ್ಯಕ್ತಿಯಲ್ಲಿ ಸಮ್ಮಿಳಿತಗೊಂಡಿರುವುದು ಎಸ್ ಎಂ ಕೃಷ್ಣ ಅವರಲ್ಲಿ ಮಾತ್ರ.  ಇವರನ್ನು ಗುರುತಿಸಿ ಪ್ರಧಾನಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಅವರೊಬ್ಬ ಮುತ್ಸದ್ದಿ ರಾಜಕಾರಣಿ ಎಂದು ತೋರಿಸುತ್ತದೆ ಎಂದರು.

ರಾಜ್ಯದ ಎಂಟು ಜನರೂ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರು. ಈ ಪ್ರಶಸ್ತಿ ಯನ್ನು ಬಯಸದೆ ಪ್ರಾಮಾಣಿಕವಾಗಿ ಮಾಡಿದ ಕೆಲಸಕ್ಕೆ ಗುರುತಿಸಲ್ಪಟ್ಟ ಅನರ್ಘ್ಯ ಮುತ್ತುಗಳಾಗಿದ್ದಾರೆ‌‌. ಈ ವಿಚಾರದಲ್ಲಿ ಪ್ರಧಾನಮಂತ್ರಿಯ ನಿಲುವು ಹಾಗೂ ಕಾರ್ಯವೈಖರಿಯನ್ನು ಇಡೀ ನಾಡು ಮೆಚ್ಚಿಕೊಳ್ಳುವಂಥದ್ದು. ಕನ್ನಡ ನಾಡು ಸದಾ ಅವರಿಗೆ ಋಣಿಯಾಗಿದೆ.  ಅವರನ್ನು ಗುರುತಿಸಿ ದೊಡ್ಡ ಗೌರವ ನೀಡಿರುವ ವ್ಯವಸ್ಥೆಯನ್ನು ತಂದಿರುವ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು

share
Next Story
X