Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೈಕ್ರೋಸಾಫ್ಟ್ ಬಳಕೆದಾರರಿಗೆ ಕೆಲವು...

ಮೈಕ್ರೋಸಾಫ್ಟ್ ಬಳಕೆದಾರರಿಗೆ ಕೆಲವು ತುರ್ತು ಎಚ್ಚರಿಕೆ ನೀಡಿದ ಭಾರತ ಸರ್ಕಾರ

27 Jan 2023 11:59 AM IST
share
ಮೈಕ್ರೋಸಾಫ್ಟ್ ಬಳಕೆದಾರರಿಗೆ ಕೆಲವು ತುರ್ತು ಎಚ್ಚರಿಕೆ ನೀಡಿದ ಭಾರತ ಸರ್ಕಾರ

ಹೊಸದಿಲ್ಲಿ: ಕಂಪ್ಯೂಟರ್ ನಿರ್ವಹಣಾ ವ್ಯವಸ್ಥೆಯಲ್ಲಿ ಕಂಡು ಬರುವ ಒಳ ನುಸುಳುವಿಕೆ ಹಾಗೂ ಮುನ್ಸೂಚನೆಯ ಮೇಲೆ ನಿಗಾ ವಹಿಸುವ ಸರ್ಕಾರಿ ಸಂಸ್ಥೆಯಾದ ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡವು (The Indian Computer Emergency Response Team (CERT-IN)) ಮೈಕ್ರೋಸಾಫ್ಟ್ (Microsoft) ಎಡ್ಜ್ ವೆಬ್ ಬ್ರೌಸರ್‌ನಲ್ಲಿ ಕೆಲವು ಹೊಸ ಒಳ ನುಸುಳುವಿಕೆಯನ್ನು ಪತ್ತೆ ಹಚ್ಚಿದೆ. 

ಈ ಕುರಿತು ಮೈಕ್ರೋಸಾಫ್ಟ್ ಬಳಕೆದಾರರಿಗೆ ಸೈಬರ್ ದಾಳಿಯ ಬಗ್ಗೆ ಎಚ್ಚರಿಕೆ ನೀಡಿರುವ ಸಂಸ್ಥೆಯು, ಕಂಪ್ಯೂಟರ್ ದುರುಪಯೋಗವಾಗುವ ಸಾಧ್ಯತೆ ಹಾಗೂ ಒಳ ನುಸುಳುವಿಕೆ ಕುರಿತು ಎಚ್ಚರಿಕೆ ನೀಡಿದ್ದು, ಈ ಅಪಾಯಗಳನ್ನು ತೀವ್ರ ಸ್ವರೂಪದ ಅಪಾಯಗಳು ಎಂದು ವರ್ಗೀಕರಿಸಿದೆ.

ಈ ಕುರಿತು ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡದ ಅಂತರ್ಜಾಲ ತಾಣದಲ್ಲಿ ಎಚ್ಚರಿಕೆಯ ಸಲಹೆ ಪ್ರಕಟವಾಗಿದ್ದು, ಮೈಕ್ರೋಸಾಫ್ಟ್ ಎಡ್ಜ್ (ಕ್ರೋಮಿಯಂ ಬೇಸ್ಡ್) ಬ್ರೌಸರ್‌ನಲ್ಲಿ ಹಲವಾರು ಒಳ ನುಸುಳುವಿಕೆ ವರದಿಯಾಗಿದೆ. ಇದರಿಂದ ದೂರದಿಂದ ಕಾರ್ಯನಿರ್ವಹಿಸುವ ಸೈಬರ್ ದಾಳಿಕೋರರಿಗೆ ನಿಗದಿತ ಕಂಪ್ಯೂಟರ್ ಮೇಲೆ ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಿ ದಾಳಿ ನಡೆಸಲು ಬಹು ದೊಡ್ಡ ಅವಕಾಶ ಒದಗಿಸುತ್ತದೆ ಎಂದು ಎಚ್ಚರಿಸಲಾಗಿದೆ.

ಸೈಬರ್ ದಾಳಿಕೋರರಿಗೆ ದೂರದಲ್ಲೇ ಕುಳಿತು ನಿಗದಿತ ಕಂಪ್ಯೂಟರ್ ಮೇಲೆ ದಾಳಿ ನಡೆಸಿ, ಸೂಕ್ಷ್ಮ ದತ್ತಾಂಶಗಳನ್ನು ಕದಿಯಲು ಮತ್ತು ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಲು ಮೈಕ್ರೋಸಾಫ್ಟ್ ಎಡ್ಜ್ (ಕ್ರೋಮಿಯಂ ಬೇಸ್ಡ್) ಬ್ರೌಸರ್ ಹೆಚ್ಚು ನಿಯಂತ್ರಣ ಮತ್ತು ಪ್ರವೇಶವನ್ನು ಒದಗಿಸುತ್ತದೆ ಎಂಬ ಸಂಗತಿಯನ್ನು ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡದ ಒಳ ನುಸುಳುವಿಕೆ ವರದಿಯಲ್ಲಿ ಬಹಿರಂಗಗೊಳಿಸಲಾಗಿದೆ.

ಇದರೊಂದಿಗೆ, ಒಳ ನುಸುಳುವಿಕೆ ಅವಕಾಶಗಳು ಹ್ಯಾಕರ್‌ಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಮನವಿಯನ್ನು ನಿಗದಿತ ಕಂಪ್ಯೂಟರ್ ವ್ಯವಸ್ಥೆಗೆ ಕಳಿಸಲು ಅವಕಾಶ ಒದಗಿಸುತ್ತವೆ ಎಂದೂ ಹೇಳಲಾಗಿದೆ. ಇತ್ತೀಚೆಗೆ ಪತ್ತೆಯಾಗಿರುವ ಒಳ ನುಸುಳುವಿಕೆಗಳ ಪೈಕಿ, ಮೈಕ್ರೋಸಾಫ್ಟ್ ಎಡ್ಜ್‌ನ 109.1518.61 ಆವೃತ್ತಿಗಿಂತ ಮುಂಚಿನ ಆವೃತ್ತಿಗಳು ಈ ಒಳ ನುಸುಳುವಿಕೆಗಳಿಂದ ಹಾನಿಗೊಳಗಾಗಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ತನ್ನ ಅಂತಿಮ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ ಆಡಿದ ನಂತರ ಭಾವುಕರಾದ ಸಾನಿಯಾ ಮಿರ್ಝಾ

share
Next Story
X