Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡಲು ಮೊದಲನೇ...

ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡಲು ಮೊದಲನೇ ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ

ಬೆಂಗಳೂರು: "ವಿಜ್ಞಾನ ಮೇಳ–2023" ಉದ್ಘಾಟನೆ

27 Jan 2023 2:31 PM IST
share
ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡಲು ಮೊದಲನೇ ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ
ಬೆಂಗಳೂರು: "ವಿಜ್ಞಾನ ಮೇಳ–2023" ಉದ್ಘಾಟನೆ

ಬೆಂಗಳೂರು, ಜ. 27:  ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು ಮೊದಲನೇ ಪ್ರಾಶಸ್ತ್ಯ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಅವರು ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವಿ ವಿಜ್ಞಾನ ಮೇಳ – 2023ರ ಉದ್ಘಾಟಿಸಿ ಮಾತನಾಡಿದರು.

ವಸತಿ ಶಿಕ್ಷಣ ಸಂಸ್ಥೆಗೆ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡುತ್ತೇವೆ. ನಾವು ಕಟ್ಟಡ,  ಕಾಂಪೌಂಡ್ ಗೋಡೆಗಳಿಗೆ ಬಹಳ ಖರ್ಚು ಮಾಡುತ್ತಿದ್ದೇವೆ. ಈಗಾಗಲೇ ಸಚಿವ ಸಂಪುಟ, ಸಭೆಗಳಲ್ಲಿ ಹೇಳಿರುವಂತೆ ಮಕ್ಕಳಿಗೆ ಮಾಡಬೇಕಿರುವ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಮಾಡಲೇಬೇಕಾದ ಬದಲಾವಣೆಗಳನ್ನು ತನ್ನಿ ನಂತರ ಉಳಿದ ವಿಷಯಗಳಿಗೆ ಗಮನ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಯೊಂದಕ್ಕೆ 30 ಕೋಟಿ ರೂ.ಗಳ ವೆಚ್ಚ: ಒಂದು ಶಾಲೆಗೆ 30 ಕೋಟಿ ರೂ.ಗಳ ವೆಚ್ಚವಾಗುತ್ತದೆ. ಆದರೆ, 30 ಕೋಟಿ ರೂ.ಗಳನ್ನು ಖರ್ಚು ಮಾಡಿದರೂ ಮಕ್ಕಳಿಗೆ ಯಾವ ವ್ಯವಸ್ಥೆ ಯಾಗಬೇಕೋ ಅದು ಆಗುತ್ತಿಲ್ಲ. ಇದು ಹಿಂದಿನ ಸರ್ಕಾರಗಳಿಂದ ಬಂದಿರುವ  ಬಳುವಳಿ. ಗುತ್ತಿಗೆದಾರ ಆಧರಿತ ಗುತ್ತಿಗೆ ನೀಡುವುದರಿಂದ ಪರಿಸ್ಥಿತಿ ಹೀಗಾಗಿದೆ. ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಸಚಿವರಿದ್ದಾಗ  ವಿಶೇಷ ಅನುದಾನವನ್ನು ಮಕ್ಕಳಿಗೆ ಡೆಸ್ಕ್, ಮಲಗುವ ಸ್ಥಳ, ಪುಸ್ತಕ ಸೇರಿದಂತೆ ಉಳಿದ ವಿಚಾರಗಳಿಗೆ ಹೆಚ್ಚಿನ ಗಮನ ನೀಡಲು ಕಳೆದ ಮೂರು ವರ್ಷಗಳಿಂದ ಪ್ರಾರಂಭಿಸಿದ್ದೇವೆ. ಸಾಕಷ್ಟು ಸುಧಾರಣೆಯೂ ಆಗಿದೆ ಎಂದರು.

ಇನ್ನಷ್ಟು ಬಲಪಡಿಸಬೇಕು: ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಜ್ಞಾನ ಮೇಳ ಆಯೋಜಿಸಿರುವುದು ಸಂತೋಷದ ಸಂಗತಿ. ಈ ವಸತಿ ಶಾಲೆಗಳು ಪ್ರಾರಂಭವಾಗಿರುವುದೇ ಎಸ್.ಸಿ/ ಎಸ್.ಟಿ, ಹಿಂದುಳಿದ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ, ಗುಣಾತ್ಮಕ ಶಿಕ್ಷಣ, ಎಲ್ಲಾ ವ್ಯವಸ್ಥೆಗಳಿರುವ ವಸತಿ ಶಾಲೆಗಳನ್ನು ನೀಡಬೇಕೆನ್ನುವ ಉದ್ದೇಶದಿಂದ. ಸಾವಿರಕ್ಕೂ ಹೆಚ್ಚು ಶಾಲೆಗಳು ಇಲ್ಲಿ ಭಾಗವಹಿಸಿವೆ. ಈ ಶಾಲೆಗಳ ಮೌಲ್ಯ ಮಾಪನ ಮಾಡಿದಾಗ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಗುಣಮಟ್ಟವನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬೇರೆಯವರಿಗಿಂತ ಉತ್ತಮ ಅಂಕಗಳನ್ನು ಪಡೆಯುತ್ತಿದ್ದಾರೆ. ಮಕ್ಕಳಲ್ಲಿ ಕೀಳರಿಮೆ ಹೋಗಿ ಆತ್ಮವಿಶ್ವಾಸ ಜಾಗೃತವಾಗಿವೆ. ಹೀಗಾಗಿ ಈ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಬೇಕಾಗಿದೆ. ಇನ್ನಷ್ಟು ಗುಣಾತ್ಮಕ ಶಿಕ್ಷಣ, ವ್ಯಕ್ತಿ ವಿಕಸನವಾಗಬೇಕಿದೆ ಮತ್ತು ವಿಪುಲವಾದ ಅವಕಾಶಗಳನ್ನು ಈ ಮಕ್ಕಳಿಗೆ ಮಾಡಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ನಮ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಮಕ್ಕಳ ಭವಿಷ್ಯ ನಿರ್ಮಿಸಿ: ಒಂದು ಸಾವಿರ ಶಾಲೆಗಳಿರುವ ದೊಡ್ಡ ವ್ಯವಸ್ಥೆಯಾಗಿದ್ದು, ತಾಂದೆತಾಯಿಗಳು ಇಲ್ಲಿಗೆ ಕಳುಹಿಸಿದ್ದಾರೆ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಅದು ನಮ್ಮ ಕರ್ತವ್ಯ. ಅವರಿಗೆ ಉತ್ತಮ ಗುಣಾತ್ಮಕ ಶಿಕ್ಷಣ ನೀಡಿ ಅತ್ಯಂತ ಯಶಸ್ವಿಯಾಗಿ ಮಾಡಿ ಅವರಿಗೆ ಒಳ್ಳೆಯ ಭವಿಷ್ಯ ನಿರ್ಮಿಸುವ ಕೆಲಸವಾದಾಗ ಸಮಾಜದಲ್ಲಿ ಪರಿವರ್ತನೆಯಾಗುತ್ತದೆ.ಇದು ನಿಜಕ್ಕೂ ಆಗಬೇಕಿರುವ ಕೆಲಸ ಎಂದರು.

ಕೊರತೆಗಳ ಪಟ್ಟಿ ನೀಡಿ: ಯಾವ ಶಾಲೆಗಳಲ್ಲಿ ಏನು ಕೊರತೆ, ಎಷ್ಟು ಅನುದಾನ ಇದೆ ಎಂದು ಪಟ್ಟಿ ನೀಡಿದರೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಎಲ್ಲಾ ಅಧಿಕಾರಿಗಳು ಶಾಲೆಗಳಿಗೆ  ಭೇಟಿ ಮಾಡಲು ಸೂಚಿಸಿದರಲ್ಲದೇ   ಹತ್ತು ವರ್ಷಗಳಾಗಿರುವ ಶಾಲೆಗಳಲ್ಲಿ, ಎಲ್ಲಾ ವ್ಯವಸ್ಥೆಗಳಿರುವ ಶಾಲೆಗಳಲ್ಲಿ  ಮುಂದಿನ  ವರ್ಷದಿಂದ ಕಡ್ಡಾಯವಾಗಿ ಪಿ.ಯು.ಸಿ ತರಗತಿ ಗಳನ್ನು ಪ್ರಾರಂಭಿಸಲು ಸೂಚಿಸಿದರು.

ಮಕ್ಕಳ ಸಾಮರ್ಥ್ಯ ಬೆಳೆಸಿ: ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಮಕ್ಕಳ ನಡುವೆಯೇ ನಡೆಸುವಂತೆ ಸಲಹೆ ನ್ಯೂಡಿದ ಮುಖ್ಯಮಂತ್ರಿಗಳು, ಇಲ್ಲಿ ಮಕ್ಕಳಿಗೆ  ಸಮಾನ ಅವಕಾಶ ನೀಡಲಾಗಿದೆ. ಯಾವ ಶಾಲೆಗಳಲ್ಲಿ ಏನು ಕೊರತೆಯಿದೆ, ಏನ್ನನ್ನು ಸರಿ ಪಡಿಸಬೇಕು , ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಹೇಗೆ ತಯಾರು ಮಾಡಬೇಕೆನ್ನುವ ಸಲುವಾಗಿ ಸ್ಪರ್ಧೆ, ಪರೀಕ್ಷೆಗಳನ್ನು ನೀಡಿ, ಸಾಮರ್ಥ್ಯ ಬೆಳೆಸಿ ಎಂದರು.

ಮಕ್ಕಳೆಲ್ಲಾ ಬಹಳ ಕಷ್ಟ ಪಟ್ಟು ಈ ಶಾಲೆಗೆ  ಬಂದಿದ್ದಾರೆ. ಅವರು ಶೇ 50, 60, 70 ರಷ್ಟು ಅಂಕಪಡೆದಿರುವ ಮಕ್ಕಳು. ಹೊರಗೆ ಹೋಗುವಾಗ ಶೇ 90ರಷ್ಟು ಅಂಕ ಪಡೆದು ಹೊರಗೆ ಹೋಗಬೇಕು. ಇದು ನಮ್ಮ ಗುರಿ. ಸಚಿವ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉತ್ತಮ ಕೆಲಸಗಳಾಗಿವೆ.  ಮೂರು ಲಕ್ಷ ಶಾಲಾ ಹೆಣ್ಣು ಮಕ್ಕಳಿಗೆ ಕರಾಟೆ ಕಲಿಸುತ್ತಿರುವುದು ದೊಡ್ಡ ಸಾಧನೆ. ಸಮಾಜಸಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಬಹಳ ದೊಡ್ಡ ಕಾರ್ಯಕ್ರಮವನ್ನು ಸಚಿವರು ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

ಎಸ್.ಸಿ/ ಎಸ್.ಟಿ ಜನಾಂಗಕ್ಕೆ ಸೌಲಭ್ಯ ಗಳನ್ನು ನೀಡಲು ಒತ್ತಾಸೆಯಾಗಿ ಕೆಲಸ  ಮಾಡಿದ್ದಾರೆ. ಅವರು ಬಂದ ನಂತರ ಪ್ರತಿ ಮನೆಗೆ 1.75 ಲಕ್ಷ ರೂ.ಗಳಿಗೆ ಹೆಚ್ಚಳ, 75 ಯೂನಿಟ್ ಉಚಿತ ವಿದ್ಯುತ್, ಜಮೀನು ಖರೀದಿಗೆ 20.ಲಕ್ಷ ರೂ.ಗಳ ಯೋಜನೆ, ಮೀಸಲಾತಿಯನ್ನು ಎಸ್.ಸಿಗೆ ಶೇ 15 ರಿಂದ.17ಕ್ಕೆ ಹಾಗೂ ಎಸ್.ಟಿ ಗೆ  ಶೇ 3 ರಿಂದ 7 ಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ವಿಷಯಗಳಲ್ಲಿ ದೀನದಲಿತರಿಗೆ ಆತ್ಮಸ್ಥೈರ್ಯ, ಸ್ವಾಭಿಮಾನ, ಕೀಳರಿಮೆಯಿಂದ ದೂರಾಗಿ, ಅವರೂ ಮುಖ್ಯ ವಾಹಿನಿಯಲ್ಲಿ ಸೇರಲು  ಬಾಬು ಜಗಜೀವನ್ ರಾಂ ಅವರ ಹೆಸರಿನಲ್ಲಿ ಪ್ರತಿ ಕ್ಷೇತ್ರಕ್ಕೆ 100 ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಾರ್ಯಕ್ರಮ ರೂಪಿಸಿದೆ ಎಂದು ಅವರು ಹೇಳಿದರು.

ಉದ್ಯೋಗ, ಶಿಕ್ಷಣ ಮತ್ತು ಸಬಲೀಕರಣ ಎಂಬ ಮೂರನ್ನೂ ದೊಡ್ಡ ಪ್ರಮಾಣದಲ್ಲಿ ಇಲಾಖೆ ಮಾಡುತ್ತಿದೆ. ಈ ಪ್ರಯಾಣವನ್ನು ಬದುಕಿನಲ್ಲಿ. ಮುಂದುವರೆಸಿ ಸಾಧಕರಾಗಬೇಕು. ತಮ್ಮ ಕುಟುಂಬ, ಊರು, ಸಮುದಾಯಕ್ಕೆ ಹಿಂದಿರುಗಿ ಸಹಾಯ ಮಾಡಬೇಕು. ಆಗ ಸಮಾಜ ಪರಿವರ್ತನೆಯಾಗುತ್ತದೆ. ಇದರಿಂದ ನಾಡು ಮತ್ತು ದೇಶ ಶಕ್ತಿಶಾಲಿಯಾಗಿ ಬೆಳೆಯುತ್ತದೆ. ಇದೇ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಬ್ ಕೆ ಸಾಥ್,  ಸಬ್, ಕಾ ವಿಕಾಸ್, ಸಬ್ ಕ ಪ್ರಯಾಸ್ ಎಂಬ ಧ್ಯೇಯ ಎಂದರು.

ಉತ್ತಮ ಪ್ರಯೋಗ: ವಿಜ್ಞಾನ ಮೇಳ ಆಯೋಜಿಸಿದ್ದು, ಮಕ್ಕಳಲ್ಲಿರುವ ವೈಜ್ಞಾನಿಕ ಮನೋಭಾವವನ್ನು, ಪ್ರತಿಭೆ  ಪ್ರದರ್ಶಿಸಲು ಅನುಕೂಲವಾಗಿದೆ. ವಿಜ್ಞಾನ ಮತ್ತು ಅವಕಾಶವಂಚಿತ ವರ್ಗ  ಬಹಳ ದೂರವಾಗಿತ್ತು. ವಿಜ್ಞಾನ ಕಲಿಯುವುದೇ ಕಷ್ಟ ಎನ್ನುವ ಕಾಲವಿತ್ತು. ಕೇವಲ ಅಕ್ಷರ ಜ್ಞಾನ ಪಡೆದರೆ ಸಾಕೆನ್ನುವ ಕಾಲವಿತ್ತು. ಈಗ ಬದಲಾವಣೆ ಆಗಿದೆ. ವಿಜ್ಞಾನವನ್ನು ಅವಕಾಶ ವಂಚಿತ ವರ್ಗದವರಿಗೆ ಸೇರಿಸಿ, ಮುನ್ನಡೆಸುತ್ತಿರುವುದು  ಬಹಳ ದೊಡ್ಡ ಬದಲಾವಣೆ ತರಲಿದೆ. ಶ್ರೇಷ್ಠ ವಿಚಾರ ಮತ್ತು ಕಾರ್ಯಕ್ರಮ ಆಯೋಜಿಸಿದ  ಕ್ರೈಸ್ ಸಂಸ್ಥೆಗೆ ಅಭಿನಂದಿಸಿದರು. ಮಕ್ಕಳು ವಿಜ್ಞಾನ, ಗಣಿತ ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಆ ನಿಟ್ಟಿನಲ್ಲಿ ಇದೊಂದು ಉತ್ತಮ ಪ್ರಯೋಗ ಎಂದು ತಿಳಿಸಿದರು. ಇತರೆ ಊರುಗಳಲ್ಲಿಯೂ ಈ ರೀತಿಯ ವಿಜ್ಞಾನ ಮೇಳ ಏರ್ಪಡಿಸಲು ಸೂಚಿಸಿದರು.

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಗೋವಿಂದ ಕಾರಜೋಳ,  ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವನ್ನನ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X