ಮೊದಲ ಟ್ವೆಂಟಿ-20: ಭಾರತಕ್ಕೆ 177 ರನ್ ಗುರಿ ನೀಡಿದ ನ್ಯೂಝಿಲ್ಯಾಂಡ್
ಕಾನ್ವೇ, ಮಿಚೆಲ್ ಅರ್ಧಶತಕ
ಕಾನ್ವೇ, ಮಿಚೆಲ್ ಅರ್ಧಶತಕ
ರಾಂಚಿ, ಜ.27: ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೇ(52 ರನ್, 35 ಎಸೆತ)ಹಾಗೂ ಡರ್ಲ್ ಮಿಚೆಲ್(ಔಟಾಗದೆ 59, 30 ಎಸೆತ) ಅರ್ಧಶತಕಗಳ ಕೊಡುಗೆ ನೆರವಿನಿಂದ ನ್ಯೂಝಿಲ್ಯಾಂಡ್ ತಂಡ ಭಾರತಕ್ಕೆ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದ ಗೆಲುವಿಗೆ 177 ರನ್ ಗುರಿ ನೀಡಿದೆ.
ಶುಕ್ರವಾರ ಟಾಸ್ ಜಯಿಸಿದ ಭಾರತದ ನಾಯಕ ಹಾರ್ದಿಕ್ ಪಾಂಡ್ಯ ಕಿವೀಸ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿದರು. ಕಿವೀಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 176 ರನ್ ಗಳಿಸಿತು.
ಮಿಚೆಲ್ ಕೇವಲ 26 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 2 ಬೌಂಡರಿಗಳ ಸಹಿತ 50 ರನ್ ಪೂರೈಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು. ಔಟಾಗದೆ 59 ರನ್ ಗಳಿಸಿದ ಅವರು 30 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಿಡಿಸಿದರು. ಕಾನ್ವೇ-ಫಿನ್ ಅಲೆನ್ ಮೊದಲ ವಿಕೆಟಿಗೆ 43 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು.
ಭಾರತದ ಪರ ವಾಶಿಂಗ್ಟನ್ ಸುಂದರ್(2-22) ಎರಡು ವಿಕೆಟ್ ಪಡೆದರು.
Next Story