ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ
ಜೈಪುರ: ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನ ಶನಿವಾರ ಪತನಗೊಂಡಿದ್ದು, ತಾಂತ್ರಿಕ ದೋಷದಿಂದಾಗಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯ ಆಡಳಿತ ಧಾವಿಸಿದ್ದಾರೆ.
ಜಿಲ್ಲಾಧಿಕಾರಿ ಅಲೋಕ್ ರಂಜನ್ ಪ್ರಕಾರ, “ಪೊಲೀಸರು ಮತ್ತು ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳದಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ . ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಉಚೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಂಗೋರಾ ರೈಲು ನಿಲ್ದಾಣದ ಬಳಿ ಈ ವಿಮಾನ ಅಪಘಾತಕ್ಕೀಡಾಗಿದೆ. ವರದಿಗಳ ಪ್ರಕಾರ, ರಸ್ತೆಗಳು ಉತ್ತಮವಾಗಿರದ ಕಾರಣ ರಕ್ಷಣಾ ತಂಡದ ವಾಹನಗಳು ಘಟನಾ ಸ್ಥಳಕ್ಕೆ ತಲುಪಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿವೆ.
ಪ್ರತ್ಯಕ್ಷದರ್ಶಿಗಳು ಹೇಳುವಂತೆ ವಿಮಾನವು ಹಾರಾಡುತ್ತಿದ್ದಾಗಲೇ ಬೆಂಕಿ ಹೊತ್ತಿಕೊಂಡಿದೆ.
ಸ್ಥಳೀಯರ ಪ್ರಕಾರ ಬೆಂಕಿ ಕಾಣಿಸಿಕೊಂಡ ಬಹಳ ಸಮಯದ ನಂತರ ವಿಮಾನ ನೆಲಕ್ಕೆ ಬಿದ್ದಿದೆ.
#WATCH | Rajasthan, Bharatpur | Wreckage of jet seen. Earlier report as confirmed by Bharatpur District Collector Alok Ranjan said charter jet, however, defence sources confirm IAF jets have crashed in the vicinity. Therefore, more details awaited. pic.twitter.com/005oPmUp6Z
— ANI (@ANI) January 28, 2023