Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಠಾಣೆ ಇನ್ ಸ್ಪೆಕ್ಟರ್, ಎಸ್ಸೈ...

ಉಳ್ಳಾಲ ಠಾಣೆ ಇನ್ ಸ್ಪೆಕ್ಟರ್, ಎಸ್ಸೈ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖಾ ವರದಿಗೆ ಲೋಕಾಯುಕ್ತ ಸೂಚನೆ

ಫೆ.14ರೊಳಗೆ ವರದಿ ಸಲ್ಲಿಸಲು ಮಂಗಳೂರು ಪೊಲೀಸ್ ಕಮಿಷನರ್ ರಿಗೆ ನೋಟಿಸ್

28 Jan 2023 12:29 PM IST
share
ಉಳ್ಳಾಲ ಠಾಣೆ ಇನ್ ಸ್ಪೆಕ್ಟರ್, ಎಸ್ಸೈ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖಾ ವರದಿಗೆ ಲೋಕಾಯುಕ್ತ ಸೂಚನೆ
ಫೆ.14ರೊಳಗೆ ವರದಿ ಸಲ್ಲಿಸಲು ಮಂಗಳೂರು ಪೊಲೀಸ್ ಕಮಿಷನರ್ ರಿಗೆ ನೋಟಿಸ್

ಮಂಗಳೂರು, ಜ.28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್ ಜಾರಿಗೊಳಿಸಿದೆ. ಫೆ.14ರೊಳಗೆ ತನಿಖಾ ವರದಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದೆ.

ಉಳ್ಳಾಲ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸಂದೀಪ್, ಎಸ್ಸೈ ಪ್ರದೀಪ್ ರಿಂದ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮುಹಮ್ಮದ್ ಕಬೀರ್ ಎಂಬವರು ರಾಜ್ಯ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಇಬ್ಬರು ಪೊಲೀಸ್ ಅಧಿಕಾರಿಗಳು ಯಾವುದೇ ಪ್ರಕರಣಗಳಿಗೆ ಸಂಬಂಧಿಸಿ ಉಳ್ಳಾಲ ಠಾಣೆಗೆ ಬರುವವರಿಂದ ಹಣ ವಸೂಲು ಮಾಡಲು ಹಮೀದ್ ಎಂಬ ಬ್ರೋಕರ್ ನ್ನು ಇಟ್ಟುಕೊಂಡಿದ್ದಾರೆ. ಗಾಂಜಾ ಮಾಫಿಯ, ಮರಳು ಮಾಫಿಯ, ಹೊಟೇಲ್ ಮಾಲಕರುಗಳಿಂದ ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ. ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ರೂ. ಸಂಪಾದನೆ ಬಗ್ಗೆ ಮಾಡಿದ್ದಾರೆ ಎಂದು ಕಬೀರ್ ದೂರಿನಲ್ಲಿ ಆರೋಪಿಸಿದ್ದಾರೆ.

ಇತ್ತೀಚೆಗೆ ಮಂಜೇಶ್ವರದ ಹೊಸಂಗಡಿಯಲ್ಲಿ ಜ್ಯುವೆಲ್ಲರಿಯೊಂದರಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿಗಳ ಬಂಧನದ ವೇಳೆ ಜಪ್ತಿ ಮಾಡಿದ 14 ಕೆಜಿ ಬೆಳ್ಳಿ, ಬೆಲೆಬಾಳುವ ವಾಚ್ ಹಾಗೂ ಲಕ್ಷಾಂತರ ರೂ. ನಗದನ್ನು ನ್ಯಾಯಾಲಯಕ್ಕೆ ಒಪ್ಪಿಸದೆ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಸಂದೀಪ್ ಮತ್ತು ಎಸ್ಸೈ ಪ್ರದೀಪ್ ತಾವೇ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವಿರುದ್ಧವೂ ಭ್ರಷ್ಟಾಚಾರದ ಬಗ್ಗೆ ಕಬೀರ್ ದೂರು ದಾಖಲಿಸಿದ್ದಾರೆ. ಶಶಿಕುಮಾರ್ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಬಳಿಕ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಪೊಲೀಸ್ ಆಯುಕ್ತರ ಬೆಂಬಲದಿಂದಲೇ ಇದು ನಡೆಯುತ್ತಿದೆ ಎಂದು ಕಬೀರ್ ಆಪಾದಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಮತ್ತು ಉಳ್ಳಾಲ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್, ಎಸ್ಸೈ ವಿರುದ್ಧ ಅಧಿಕಾರ ದುರುಪಯೋಗ ಮತ್ತು ಲಂಚದ ಆಪಾದನೆ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸಲುದ್ದೇಶಿಸಿದ್ದಾರೆ. ಫೆ.14ರ ಒಳಗೆ  ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಗೆ ಜಾರಿ ಮಾಡಿರುವ ನೋಟೀಸ್ ನಲ್ಲಿ ತಿಳಿಸಲಾಗಿದೆ.


ವಿಚಾರಣೆ ನಡೆಯುತ್ತಿದೆ: ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ದೂರಿಗೆ ಸಂಬಂಧಿಸಿ ಲೋಕಾಯುಕ್ತರ ಸೂಚನೆಯ ಹಿನ್ನೆಲೆಯ ದಕ್ಷಿಣ ಎಸಿಪಿ ಅವರಿಂದ ತನಿಖಾ ವರದಿ ಕೇಳಲಾಗಿದೆ. ವಿಚಾರಣಾ ಹಂತದಲ್ಲಿದೆ ಎಂದು ಹೇಳಿದ್ದಾರೆ.

ತನಗೆ ಯಾವುದೇ ನೋಟಿಸ್ ಬಂದಿಲ್ಲ. ಬದಲಾಗಿ ದೂರಿನ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಲಾಗಿದೆ. ಕೆಲವು ಸುದ್ದಿ ಮಾಧ್ಯಮಗಳಲ್ಲಿ ತನಗೆ ನೋಟಿಸ್ ಜಾರಿಯಾಗಿದೆ ಎಂದು ತಪ್ಪಾಗಿ ಪ್ರಕಟವಾಗಿವೆ ಮತ್ತು ಪ್ರಸಾರವಾಗಿವೆ. ಆದರೆ ತನಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

share
Next Story
X