Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಕಂಪೆನಿಗಳ ಷೇರು ಮೌಲ್ಯಗಳ...

ಅದಾನಿ ಕಂಪೆನಿಗಳ ಷೇರು ಮೌಲ್ಯಗಳ ಕುಸಿತದಿಂದ ಎರಡೇ ದಿನದಲ್ಲಿ LICಗೆ 18,000 ಕೋಟಿ ರೂ. ನಷ್ಟ

28 Jan 2023 4:58 PM IST
share
ಅದಾನಿ ಕಂಪೆನಿಗಳ ಷೇರು ಮೌಲ್ಯಗಳ ಕುಸಿತದಿಂದ ಎರಡೇ ದಿನದಲ್ಲಿ LICಗೆ 18,000 ಕೋಟಿ ರೂ. ನಷ್ಟ

ಹೊಸದಿಲ್ಲಿ: ಅಮೆರಿಕಾದ ಹಿಂಡೆನ್ಬರ್ಗ್‌ ರಿಸರ್ಚ್‌ ಸಂಸ್ಥೆಯು ಅದಾನಿ ಸಮೂಹ ಸಂಸ್ಥೆಗಳ (Adani group) ವಿರುದ್ಧ ಹಲವು ಆರೋಪಗಳನ್ನು ಹೊರಿಸಿ ಹೊರ ತಂದ ಅಧ್ಯಯನ ವರದಿಯ ಬೆನ್ನಲ್ಲೇ ಅದಾನಿ ಸಂಸ್ಥೆಯ ಕಂಪೆನಿಗಳ ಷೇರು ಬೆಲೆಗಳು ಬುಧವಾರ ಹಾಗೂ ಶುಕ್ರವಾರದ ಟ್ರೇಡಿಂಗ್‌ ಅವಧಿಯಲ್ಲಿ ಭಾರೀ ಇಳಿಕೆ ಕಂಡ ಪರಿಣಾಮ ಅದಾನಿ ಸಂಸ್ಥೆಗಳಲ್ಲಿನ ಪ್ರಮುಖ ಸಾಂಸ್ಥಿಕ ಹೂಡಿಕೆದಾರ ಸಂಸ್ಥೆಗಳಲ್ಲೊಂದಾಗಿರುವ ದೇಶದ ಅತಿ ದೊಡ್ಡ ವಿಮಾ ಕಂಪೆನಿ ಲೈಫ್‌ ಇನ್ಶೂರೆನ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (Life Insurance Corporation of India (LIC)) ಬರೋಬ್ಬರಿ ರೂ. 18,647 ಕೋಟಿ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ.

ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್‌ಐಸಿಯ ಜಂಟಿ ಹೂಡಿಕೆ ಮೊತ್ತ ರೂ. 81,268 ಕೋಟಿ ಆಗಿದ್ದರೆ ಷೇರು ಬೆಲೆ ಕುಸಿತದಿಂದ 18,647 ಕೋಟಿ ರೂ. ನಷ್ಟವುಂಟಾಗಿ ಸದ್ಯ ಅದಾನಿ ಸಂಸ್ಥೆಗಳಲ್ಲಿನ ಎಲ್‌ಐಸಿ ಹೂಡಿಕೆ ಮೌಲ್ಯ ರೂ. 62,621 ಕೋಟಿಗೆ ಕುಸಿದಿದೆ.

ಅದಾನಿ ಎಂಟರ್‌ಪ್ರೈಸಸ್‌, ಅದಾನಿ ಗ್ರೀನ್‌ ಎನರ್ಜಿ, ಅದಾನಿ ಪೋರ್ಟ್ಸ್, ಅದಾನಿ ಟೋಟಲ್‌ ಗ್ಯಾಸ್‌ ಮತ್ತು ಅದಾನಿ ಟ್ರಾನ್ಸ್‌ಮಿಷನ್‌ ಸಂಸ್ಥೆಗಳಲ್ಲಿ ಎಲ್‌ಐಸಿ ಪಾಲು ಬಂಡವಾಳ ಶೇ. 1 ಕ್ಕಿಂತ ಹೆಚ್ಚಿದೆ. ಆದರೆ ಬುಧವಾರ ಮತ್ತು ಶುಕ್ರವಾರದ ಟ್ರೇಡಿಂಗ್‌ ಅವಧಿಯಲ್ಲಿ ಈ ಕಂಪೆನಿಗಳ ಷೇರುಗಳ ಮೌಲ್ಯ ಶೇ 19 ರಿಂದ ಶೇ 27 ರಷ್ಟು ಕುಸಿತ ಕಂಡಿದೆ.

ಒಟ್ಟಾರೆಯಾಗಿ ಅದಾನಿ ಟೋಟಲ್‌ ಗ್ಯಾಸ್‌ನಲ್ಲಿ ಎಲ್‌ಐಸಿ ಹೂಡಿಕೆ ಮೌಲ್ಯ ರೂ. 6,237 ಕೋಟಿಯಷ್ಟು ಇಳಿಕೆಯಾಗಿದ್ದರೆ,  ಅದಾನಿ ಎಂಟರ್‌ಪ್ರೈಸಸ್‌ನಲ್ಲಿ ಎಲ್‌ಐಸಿ ಹೂಡಿಕೆ ರೂ. 3,279 ರಷ್ಟು, ಅದಾನಿ ಪೋರ್ಟ್ಸ್‌ನಲ್ಲಿ ರೂ. 3,205 ಕೋಟಿಯಷ್ಟು, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ ರೂ. 3,036 ಕೋಟಿಯಷ್ಟು, ಅಂಬುಜಾ ಸಿಮೆಂಟ್ಸ್‌ನಲ್ಲಿ ರೂ 1,474 ಕೋಟಿ, ಅದಾನಿ ಗ್ರೀನ್‌ ಎನರ್ಜಿಯಲ್ಲಿ ರೂ. 871 ಕೋಟಿಯಷ್ಟು ಹಾಗೂ ಎಸಿಸಿ ಯಲ್ಲಿ ರೂ. 544 ಕೋಟಿಯಷ್ಟು ಇಳಿಕೆಯಾಗಿದೆ.

ಇದನ್ನೂ ಓದಿ: ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿ ದಿಢೀರ್ ಕುಸಿದು ಬಿದ್ದು ಮೃತ್ಯು

share
Next Story
X