Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಕೋಟಿ ಚೆನ್ನಯ ಜೋಡುಕರೆ...

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಯವ ಸಮುದಾಯಕ್ಕೆ ಕಂಬಳ ಕೋಣ ಓಡಿಸುವ ತರಬೇತಿ ಹಮ್ಮಿಕೊಳ್ಳಿ: ಮುಳಿಯ ಕೇಶವ ಪ್ರಸಾದ್

28 Jan 2023 6:03 PM IST
share
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ
ಯವ ಸಮುದಾಯಕ್ಕೆ ಕಂಬಳ ಕೋಣ ಓಡಿಸುವ ತರಬೇತಿ ಹಮ್ಮಿಕೊಳ್ಳಿ: ಮುಳಿಯ ಕೇಶವ ಪ್ರಸಾದ್

ಪುತ್ತೂರು: ಯುವ ಸಮುದಾಯಕ್ಕೆ ಕಂಬಳದಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಂಬಳ ಸಮಿತಿ ವತಿಯಿಂದ ಯುವ ಸಮುದಾಯಕ್ಕೆ ಕಂಬಳದ ಕೋಣ ಓಡಿಸುವ ಬಗ್ಗೆ ತರಬೇತಿ ಹಮ್ಮಿಕೊಳ್ಳುವುದು ಉತ್ತಮ. ಕೋಣ ಓಡಿಸುವ ಕಲೆಯನ್ನು ಕರಗತ ಮಾಡಿಕೊಳ್ಳಲು ಈ ತರಬೇತಿ ಸಹಕಾರಿಯಾಗಬಹುದು ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅಭಿಪ್ರಾಯ ಪಟ್ಟರು.

ಅವರು ಪುತ್ತೂರು ಕಂಬಳ ಸಮಿತಿಯ ವತಿಯಿಂದ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಳದ ಮುಂಬಾಗದಲ್ಲಿರುವ ದೇವರಮಾರು ಗದ್ದೆಯಲ್ಲಿ ನಡೆಯುತ್ತಿರುವ 30ನೇ ವರ್ಷದ ಹೊನಲು ಬೆಳಕಿನ `ಕೋಟಿ ಚೆನ್ನಯ' ಹೋಡುಕರೆ ಕಂಬಳವನ್ನು ಶನಿವಾರ ಬೆಳಗ್ಗೆ ಉದ್ಘಾಟಿಸಿ ಮಾತನಾಡಿದರು. 

ಪುತ್ತೂರಿನ ಕಂಬಳದಲ್ಲಿ ವರ್ಷದಲ್ಲಿ ಕನಿಷ್ಠ ನಾಲ್ಕು ಬಾರಿಯಾದರೂ ಕಂಬಳವನ್ನು ನಡೆಸುವ ಮೂಲಕ ಕಂಬಳ ಕೋಣಗಳ ಮಾಲಕರಿಗೆ ಮತ್ತು ಅಭಿಮಾನಿಗಳಿಗೆ ಕಂಬಳ ವೀಕ್ಷಣೆಗೆ ಅವಕಾಶ ನೀಡಬೇಕು ಎಂದ ಅವರು 30ನೇ ವರ್ಷದಲ್ಲಿರುವ ಪುತ್ತೂರು ಕಂಬಳವು ಪೂರ್ಣಮಂಡಲವಾದ 48 ವರ್ಷವನ್ನು ದಾಟಿ ಮುಂದುವರಿಯಲಿ ಎಂದು ಹೇಳಿದರು. 

ಸಭಾ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಮಾತನಾಡಿ ಪುತ್ತೂರಿನ ಕಂಬಳಕ್ಕೆ ತನ್ನದೇ ಆದ ವೈಶಿಷ್ಟತೆಗಳಿದ್ದು, ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ಮುಂದಿನ ಪೀಳಿಗೆಗೂ ಕಂಬಳ ಕ್ರೀಡಾಕೂಟವು ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಕಂಬಳ ಸಮಿತಿಯ ಪ್ರಯತ್ನ ನಿರಂತರವಾಗಿರಬೇಕು ಎಂದರು. 

ಪುತ್ತೂರು ಸಂತ ಫಿಲೋಮಿನಾ ಕಾಲೇಜ್‍ನ ಪ್ರಾಂಶುಪಾಲ ರೆ. ಫಾ. ಆ್ಯಂಟನಿ ಪ್ರಕಾಶ್ ಮೊಂತೆರೋ, ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಪುತ್ತೂರು ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ, ಸುಧಾನ ದೇವಾಲಯದ ಧರ್ಮಗುರು ರೆ. ವಿಜಯ ಹಾರ್ವಿನ್, ಪುತ್ತೂರು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮತ್ತಿತರರು ಮಾತನಾಡಿ ಶುಭ ಹಾರೈಸಿದರು. 

ಗೆಜ್ಜೆಗಿರಿ ಕ್ಷೇತ್ರದ ಪ್ರದಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಎನ್ ಸುಧಾಕರ್ ಶೆಟ್ಟಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, , ಸಂಜೀವ ಪೂಜಾರಿ ಕೂರೇಲು, ಚೆನ್ನಪ್ಪ ರೈ ದೇರ್ಲ, ನಿರ್ಮಲ್ ಕುಮಾರ್ ಜೈನ್,  ಪ್ರಶಾಂತ್ ಕುಮಾರ್ ಕೈಕಾರ, ಬೈಲು ಮಾರಪ್ಪ ಶೆಟ್ಟಿ, ಪ್ರೀತಂ ಪೂಂಜಾ, ಕರುಣಾಕರ ಸುವರ್ಣ, ನಾರಾಯಣ ರೈ ಕುಕ್ಕುವಳ್ಳಿ, ಬನ್ನೂರು ದೇವಳದ ಧರ್ಣಪ್ಪ ಮೂಲ್ಯ, ಭಾಸ್ಕರ್ ಗೌಡ ಕೋಡಿಂಬಾಳ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ವಸಂತ ಕುಮಾರ್ ರೈ ವಂದಿಸಿದರು. ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

share
Next Story
X