Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯೆಹೂದಿ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ...

ಯೆಹೂದಿ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ; 7 ಮಂದಿ ಮೃತ್ಯು

ಪ್ರತೀಕಾರ ಕ್ರಮಕ್ಕೆ ಇಸ್ರೇಲ್‌ ಮುಂದು

28 Jan 2023 10:37 PM IST
share
ಯೆಹೂದಿ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ; 7 ಮಂದಿ ಮೃತ್ಯು
ಪ್ರತೀಕಾರ ಕ್ರಮಕ್ಕೆ ಇಸ್ರೇಲ್‌ ಮುಂದು

ಜೆರುಸಲೇಂ, ಜ.28: ಯಹೂದಿಗಳ ಹಬ್ಬದ ಸಂದರ್ಭ ಪೂರ್ವ ಜೆರುಸಲೇಂನ ನೀವ್ ಯಕೋವ್ ಗ್ರಾಮದ ಯೆಹೂದಿ ಪ್ರಾರ್ಥನಾ ಮಂದಿರದ ಹೊರಗೆ ಫೆಲಸ್ತೀನ್ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದಾರೆ.

ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇಸ್ರೇಲಿಯನ್ನರನ್ನು ಗುರಿಯಾಗಿಸಿ ನಡೆದ ಅತ್ಯಂತ ಮಾರಣಾಂತಿಕ ದಾಳಿ ಇದಾಗಿದ್ದು, ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗುವ ಅಪಾಯವಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಗುರುವಾರ ಇಸ್ರೇಲಿ-ಫೆಲಸ್ತೀನೀಯರ ನಡುವಿನ ಸಂಘರ್ಷ ತೀವ್ರ ಉಲ್ಬಣಗೊಂಡಿತ್ತು. ಆಕ್ರಮಿತ ಪಶ್ಚಿಮ ದಂಡೆಯ ಜೆನಿನ್ ನಗರದಲ್ಲಿ ಇಸ್ರೇಲ್ ಸೇನೆ ನಡೆಸಿದ ಕಾರ್ಯಾಚರಣೆ ಸಂದರ್ಭ 9 ಫೆಲಸ್ತೀನೀಯರು ಮೃತಪಟ್ಟಿದ್ದರು. ಬಳಿಕ ಗಾಝಾ ಪಟ್ಟಿಯಿಂದ ಇಸ್ರೇಲ್ ಪ್ರದೇಶದತ್ತ ರಾಕೆಟ್ ದಾಳಿ, ಅದಕ್ಕೆ ಇಸ್ರೇಲ್ನ ಪ್ರತಿ ದಾಳಿ ನಡೆದಿತ್ತು. ಶುಕ್ರವಾರದ ಗುಂಡಿನ ದಾಳಿ ಇದರ ಮುಂದುವರಿದ ಭಾಗವಾಗಿದೆ.
 
ಅಂತರಾಷ್ಟ್ರೀಯ ಹತ್ಯಾಕಾಂಡ ಸಂಸ್ಮರಣಾ ದಿನದಂದು ನಡೆದಿರುವ ಈ ದಾಳಿ ಇತ್ತೀಚಿನ ವರ್ಷಗಳಲ್ಲಿ ನಮಗೆ ಎದುರಾದ ಅತ್ಯಂತ ಮಾರಕ ದಾಳಿಯಾಗಿದೆ ಎಂದು ಇಸ್ರೇಲ್ ಪೊಲೀಸ್ ಮುಖ್ಯಸ್ಥ ಕೋಬಿ ಶಬ್ತಾಯಿ ಹೇಳಿದ್ದಾರೆ.
  
ರಾತ್ರಿಯ ವೇಳೆ ಪ್ರಾರ್ಥನಾ ಮಂದಿರದ ಬಳಿಬಂದ ಒಬ್ಬ ಉಗ್ರ ಅಲ್ಲಿದ್ದವರ ಮೇಲೆ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯಲ್ಲಿ 7 ನಾಗರಿಕರು ಮೃತಪಟ್ಟಿದ್ದಾರೆ. ಬಳಿಕ ದುಷ್ಕರ್ಮಿಯನ್ನು ಪತ್ತೆಹಚ್ಚಲಾಗಿದ್ದು ಆಗ ನಡೆದ ಗುಂಡಿನ ಚಕಮಕಿಯಲ್ಲಿ ಆತ ಹತನಾಗಿದ್ದಾನೆ. ಮೃತ ಆರೋಪಿಯನ್ನು ಪೂರ್ವ ಜೆರುಸಲೇಂನ ಫೆಲಸ್ತೀನ್ ವ್ಯಕ್ತಿ ಎಂದು ಗುರುತಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ 42 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

 ಪ್ರತೀಕಾರ ಕ್ರಮ: ಇಸ್ರೇಲ್ ಪ್ರತಿಜ್ಞೆ 

ಜೆರುಸಲೇಂನಲ್ಲಿ ಯೆಹೂದಿ ಪ್ರಾರ್ಥನಾಲಯದ ಮೇಲಿನ ದಾಳಿಯ ಬಳಿಕ ಸ್ಥಳಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ರಾಷ್ಟ್ರೀಯ ಭದ್ರತಾ ಸಚಿವ ಇತಮರ್ ಬೆನ್-ಗ್ವಿವರ್ ಶುಕ್ರವಾರ ರಾತ್ರಿ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ. ಬಳಿಕ ರಾಷ್ಟ್ರೀಯ ವಾಹಿನಿಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ನೆತನ್ಯಾಹು, ಈ ದಾಳಿಗೆ ತಕ್ಷಣವೇ ಸೂಕ್ತ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಕುಟುಂಬದೊಂದಿಗೆ ಅಮೆರಿಕಕ್ಕೆ ಖಾಸಗಿ ಪ್ರವಾಸ ಕೈಗೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಯೋವ್ ಗ್ಯಲಂಟ್, ತಮ್ಮ ಪ್ರವಾಸವನ್ನು ರದ್ದುಗೊಳಿಸಿ ಇಸ್ರೇಲ್ನತ್ತ ಹಿಂತಿರುಗುತ್ತಿದ್ದಾರೆ ಎಂದು ಸರಕಾರ ಹೇಳಿದೆ. ಇದೊಂದು ಭಯಾನಕ ಭಯೋತ್ಪಾದಕ ದಾಳಿಯಾಗಿದ್ದು, ಈ ದಾಳಿಯ ಹಿಂದಿರುವ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಶಿಕ್ಷಿಸದೆ ಬಿಡುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.
 
ಅಮೆರಿಕ ಅಧ್ಯಕ್ಷ ಜೋ ಬೈಡನ್, ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್, ಫ್ರಾನ್ಸ್ನ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ನಾಗರಿಕರನ್ನು ಗುರಿಯಾಗಿಸಿ ನಡೆಸಿರುವ ದಾಳಿಯನ್ನು ಖಂಡಿಸಿದ್ದಾರೆ. ಈ ಮಧ್ಯೆ, ಇರಾನ್ ಬೆಂಬಲಿತ ಹಝ್ಬೊಲ್ಲಾ ಸಂಘಟನೆ ಮತ್ತು ಹಮಾಸ್ ದಾಳಿಯನ್ನು ಶ್ಲಾಘಿಸಿದೆ.

ಇಬ್ಬರನ್ನು ಗುಂಡಿಕ್ಕಿ ಗಾಯಗೊಳಿಸಿದ ಪೆಲಸ್ತೀನ್ ಬಾಲಕ: ವರದಿ

ಯೆಹೂದಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ಬೆನ್ನಲ್ಲೇ ಪೂರ್ವ ಜೆರುಸಲೇಂನಲ್ಲಿ ನಡೆದ ಮತ್ತೊಂದು ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಪೂರ್ವ ಜೆರುಸಲೇಂನ ಸಿವಾನ್ ಬಳಿ 13 ವರ್ಷದ ಫೆಲಸ್ತೀನ್ ಬಾಲಕ ನಡೆಸಿದ ಗುಂಡಿನ ದಾಳಿಯಲ್ಲಿ 47 ವರ್ಷದ ವ್ಯಕ್ತಿ ಮತ್ತು ಆತನ ಮಗ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

share
Next Story
X