Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಲಾಲಂಪುರ: ಅಂತಾರಾಷ್ಟ್ರೀಯ ಯುವ...

ಕೌಲಾಲಂಪುರ: ಅಂತಾರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ಭಾಗವಹಿಸಿದ ಕಾಸರಗೋಡಿನ ವಹೀದುಝ್ಝಮಾನ್

29 Jan 2023 10:08 AM IST
share
ಕೌಲಾಲಂಪುರ: ಅಂತಾರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ಭಾಗವಹಿಸಿದ ಕಾಸರಗೋಡಿನ ವಹೀದುಝ್ಝಮಾನ್

ಮಂಗಳೂರು, ಜ.29: ನ್ಯೂಯಾರ್ಕ್ ಮೂಲದ ಬೆಸ್ಟ್ ಡಿಪ್ಲೊಮಾಟ್ಸ್ ಎಂಬ ರಾಜತಾಂತ್ರಿಕ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಮಲೇಷ್ಯದ ಕೌಲಾಲಂಪುರದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಅಂತಾರಾಷ್ಟ್ರೀಯ ಯುವ ರಾಜತಾಂತ್ರಿಕ ಸಮ್ಮೇಳನದಲ್ಲಿ ಭಾರತೀಯ ಪ್ರತಿನಿಧಿಯಾಗಿ ಕಾಸರಗೋಡಿನ ವಿದ್ಯಾರ್ಥಿ ಹಾಫಿಝ್ ವಹೀದುಝ್ಝಮಾನ್(19) ಭಾಗವಹಿಸಿದ್ದಾರೆ. ಈ ಸಮ್ಮೇಳನವು ಶುಕ್ರವಾರ ಆರಂಭಗೊಂಡಿದೆ.

'ಪರಮಾಣು ಯುದ್ಧದ ಸಂದರ್ಭದಲ್ಲಿ ನಿಶ್ಯಸ್ತ್ರೀಕರಣದ ಭವಿಷ್ಯ' ಎಂಬ ವಿಷಯದ ಕುರಿತು ಕೌಲಾಲಂಪುರದ ಸನ್‌ ವೇ ಪುತ್ರ ಪಂಚತಾರಾ ಹೋಟೆಲ್‌ನಲ್ಲಿ ಜ.30ರವರೆಗೆ ನಡೆಯುವ ಈ ಯುವ ಸಮ್ಮೇಳನದಲ್ಲಿ ಹಾಫಿಝ್ ವಹೀದುಝ್ಝಮಾನ್ ವಿವಿಧ ಅಧಿವೇಶನಗಳಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

80 ದೇಶಗಳ 150ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ಸಮ್ಮೇಳನದ ಮಹಾನಿರ್ದೇಶಕ ಎ.ಎಂ.ಬಿ.ಫವಾದ್ ಅಲಿ ಲಂಗಾಹ್ ಪ್ರತಿನಿಧಿಗಳನ್ನು ಸ್ವಾಗತಿಸಿದರು.

ಈ ಸಮ್ಮೇಳನದಲ್ಲಿ ಭಾರತೀಯ ಪ್ರತಿನಿಧಿಗಳಾಗಿ ಚಂಡೀಗಢದ ಜುಫೀರ್ ಸಿಂಗ್ ಕಪೂರ್ ಮತ್ತು ಮುಂಬೈಯ ಸುಭಮ್ ಮೋರ್ ಭಾಗವಹಿಸುತ್ತಿದ್ದಾರೆ. ಕಪೂರ್ ಬೇರೆ ರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಭಾರತವನ್ನು ಪ್ರತಿನಿಧಿಸುತ್ತಿರುವ ವಹೀದುಝ್ಝಮಾನ್ ಕಾಸರಗೋಡು ಹಸನತುಜ್ಜಾರಿಯಾ ಮಸೀದಿಯ ಖತೀಬ್ ಮತ್ತು ದಾರುಲ್ ಹಿಕ್ಮಾದ ನಿರ್ದೇಶಕ ಅತೀಕುರ್ರಹ್ಮಾನ್ ಅಲ್ ಫೈಝಿ ಮತ್ತು ಝಹ್ರಾ ಬಾನು ದಂಪತಿಯ ಪುತ್ರ. ವಹೀದುಝ್ಝಮಾನ್ ಅವರು ದಾರುಲ್ ಹಿಕ್ಮಾದಲ್ಲಿ ಹಿಫ್ಝ್ (ಕುರ್‌ಆನ್ ಕಂಠಪಾಠ) ಮುಗಿಸಿದ್ದು, ಮದೀನಾದ ತೈಬಾ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸುತ್ತಿದ್ದಾರೆ.

"ಈ ಯುವ ಸಮ್ಮೇಳನದಲ್ಲಿ ಪ್ರತಿನಿಧಿಯಾಗಲು ದೇವರ ಅನುಗ್ರಹ, ತಂದೆಯ ಪ್ರೇರಣೆ ಹಾಗೂ ಪ್ರೋತ್ಸಾಹವೇ ಕಾರಣ" ಎಂದು ವಹೀದುಝ್ಝಮಾನ್ ಹೇಳಿದ್ದಾರೆ.

share
Next Story
X